ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗ 2022. ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1,100 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕೇವಲ 10ನೇ ತರಗತಿ ದ್ವಿತೀಯ ಪಿಯುಸಿ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ / ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಣೆಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ಣವಾಗಿ ಓದಿ
ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆ ವಿವರಣೆ
ನೇಮಕಾತಿ ಇಲಾಖೆಯ ಹೆಸರು :
ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ
ಹುದ್ದೆಗಳ ಹೆಸರು :
• ಕಾನ್ಸ್ಟೇಬಲ್ : 1000 ಹುದ್ದೆಗಳು
• ಸಬ್ ಇನ್ಸ್ಪೆಕ್ಟರ್ : 100 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಒಟ್ಟು 1100 ಹುದ್ದೆಗಳು ಖಾಲಿ ಇವೆ.
ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ವಿವರಣೆ
ಶೈಕ್ಷಣಿಕ ವಿದ್ಯಾರ್ಹತೆ :
ಕರ್ನಾಟಕ ಅಬಕಾರಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಕಾನ್ಸ್ಟೇಬಲ್ ಮತ್ತು ಸಬ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ಕರ್ನಾಟಕ ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1100 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ಈ ಹುದ್ದೆಗಳ ಕುರಿತು ಅಬಕಾರಿ ಇಲಾಖೆಯ ಸಚಿವರಾದ ಕೆ ಗೋಪಾಲಯ್ಯ ಮಾಹಿತಿ ನೀಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1000 ಕಾನ್ಸ್ಟೇಬಲ್ ಹಾಗೂ 100 ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ರಾಜ್ಯ ಸರ್ಕಾರಕ್ಕೆ ಅಬಕಾರಿ ಇಲಾಖೆಯ ಸಚಿವರಾದ ಕೆ ಗೋಪಾಲಯ್ಯ ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಅವರು ತಮ್ಮ ಪ್ರಸ್ತಾವನೆಯಲ್ಲಿ ರಾಜ್ಯ ಸರ್ಕಾರಕ್ಕೆ ಹೆಚ್ಚು ಆದಾಯ ತಂದುಕೊಡುವ ಇಲಾಖೆ ಎಂದರೆ ಅದು ಅವಕಾರಿ ಇಲಾಖೆಯಾಗಿದೆ. ಈ ಹಾಗೂ ಅಬಕಾರಿ ಇಲಾಖೆಯ ಬಲವರ್ಧನೆಗೆ ಸರ್ಕಾರ ಹೆಚ್ಚು ಆದ್ಯತೆ ನೀಡಿದೆ. ಹೊಸ ಮದ್ಯ ತಯಾರಿಕೆಗೆ ಉದ್ಯಮಿಗಳು ಮುಂದೆ ಬಂದರೆ ಮುಖ್ಯಮಂತ್ರಿಗಳ ಜೊತೆ ಚರ್ಚೆಯನ್ನು ನಡೆಸಿ ಅನುಮೋದನೆ ನೀಡುತ್ತೇವೆ. ಇದರಿಂದ ರಾಜ್ಯದಲ್ಲಿ ಉದ್ಯೋಗ ಸೃಜನಿ ಹೆಚ್ಚಾಗುತ್ತದೆ ಎಂದರು.
ಹಳ್ಳಿಗಳ ಸಣ್ಣಪುಟ್ಟ ಅಂಗಡಿಗಳಲ್ಲಿ ಮಧ್ಯ ಮಾರಾಟವಾಗುತ್ತಿರುವ ಬಗ್ಗೆ ದೂರುಗಳಿವೆ. ಕೆಲ ಶಾಸಕರು ಕೂಡ ಈ ವಿಷಯ ಗಮನಕ್ಕೆ ತಂದಿದ್ದಾರೆ. ಇದರ ವಿರುದ್ಧ ಕಟ್ಟುನಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಮಧ್ಯದ ದರ ಪರಿಷ್ಕರಣೆ ಸರ್ಕಾರದ ಮುಂದಿಲ್ಲ. ನಿರೀಕ್ಷೆಗೂ ಮೀರಿ ಆದಾಯ ಬರುತ್ತಿದೆ ಈ ವರ್ಷ 29 ಕೋಟಿ ರೂಪಾಯಿ ಆದಾಯ ಈ ಅಬಕಾರಿ ಇಲಾಖೆಯಿಂದ ಬಂದಿದೆ. ಆದಾಯ ಗುರಿ ನೀಡಿದ್ದು ಈವರೆಗೆ 19,897 ಕೋಟಿ ರೂಪಾಯಿ ಮಾತ್ರ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 17,225 ಕೋಟಿ ರೂಪಾಯಿ ಸಂಗ್ರಹವಾಗಿತ್ತು ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಸೂಚನೆ :
ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳನ್ನು ಇಲಾಖೆಯು ಅತಿ ಶೀಘ್ರದಲ್ಲಿ ಹೊರಡಿಸುತ್ತದೆ. ಇದು ಇಲಾಖೆಯ ಕೇವಲ ಸಣ್ಣ ಅಧಿಸೂಚನೆಯಾಗಿದ್ದು ಶೀಘ್ರದಲ್ಲಿ ಮತ್ತೊಂದು ಅಧಿಸೂಚನೆಯನ್ನು ಬಿಡುಗಡೆ ಮಾಡುತ್ತದೆ
Vasath kumar
Kantesha
10 th pass
19 3 2002