ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಚಿಕ್ಕಮಗಳೂರು ನೇಮಕಾತಿ 2022. ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಸೇವಕರು/ ಬೆರಳಚ್ಚು ನಕಲುಗಾರ/ ಬೆರಳಚ್ಚುಗಾರರು ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಉದ್ಯೋಗದ ಸಂಬಂಧ ಪಟ್ಟ ವಿದ್ಯಾರ್ಹತೆ / ವೇತನ ಶ್ರೇಣಿ /ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಚಿಕ್ಕಮಗಳೂರು ಇಲಾಖೆಯ ಹುದ್ದೆಗಳ ವಿವರಣೆ :
ನೇಮಕಾತಿ ಇಲಾಖೆಯ ಹೆಸರು :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಚಿಕ್ಕಮಗಳೂರು.
ಹುದ್ದೆಗಳ ಹೆಸರು :
• ಸೇವಕರು 12 ಹುದ್ದೆಗಳು
• ಬೆರಳಚ್ಚು ನಕಲುಗಾರು 01 ಹುದ್ದೆ
• ಬೆರಳಚ್ಚುಗಾರರು 07 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಚಿಕ್ಕಮಗಳೂರಿನಲ್ಲಿ 20 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಬೆರಳಚ್ಚು ಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,400 ರಿಂದ 42,000 ವೇತನ ಇರುತ್ತದೆ.
ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,400 ರಿಂದ 42,000 ವೇತನ ಇರುತ್ತದೆ.
ಸೇವಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯು ತಿಂಗಳಿಗೆ 17000 ದಿಂದ 28,950/-ವೇತನ ಇರುತ್ತದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ:
ಶೈಕ್ಷಣಿಕ ವಿದ್ಯಾರ್ಹತೆ :
• ಸೇವಕರು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
• ಬೆರಳಚ್ಚು ನಕಲುಗಾರು :
ಈ ವಿದ್ಯೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮೋ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಹಾಗೂ ಇದರ ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸಿರುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ಕರ್ಜೆ ಪರೀಕ್ಷೆ ಅಥವಾ ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತರಾಗಿರಬೇಕು.
• ಬೆರಳಚ್ಚುಗಾರರು
1) ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಆಂಗ್ಲ ಬೆಳ್ಳತ್ತು ಪ್ರೌಢ ದರ್ಜೆಯ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು
ವಯಸ್ಸಿನ ಮಿತಿ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲಾಖೆ ನಿಗದಿಪಡಿಸಿದ ವಯೋಮಿತಿ ಈ ಕೆಳಗಿನಂತೆ ಇದೆ
• ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ
• ಸಾಮಾನ್ಯ ವರ್ಗದವರಿಗೆ 35 ವರ್ಷ
• 2A 2B 3A 3B ವರ್ಗದವರಿಗೆ 38 ವರ್ಷ
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಬಂದು ಅಭ್ಯರ್ಥಿಗಳಿಗೆ 40 ವರ್ಷ
ಆಯ್ಕೆ ವಿಧಾನ :
ಸೇವಕರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದಂತಹ ಒಟ್ಟು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಬೆರಳಚ್ಚು ನಕಲುಗಾರ ಮತ್ತು ಬೆರಳಚ್ಚುಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಇದರ ಸಂಬಂಧ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 300
• ಪ್ರವರ್ಗ 2A 2B 3A 3B ವರ್ಗದವರಿಗೆ ರೂಪಾಯಿ150
• ಎಸ್ಸಿ ಎಸ್ಟಿ ಮತ್ತು ಪ್ರವರ್ಗ ಒಂದು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗಳಿಗೆ ನಿಗದಿಪಡಿಸಿದ ಪ್ರಮುಖ ದಿನಾಂಕಗಳ ವಿವರಣೆ :
ಪ್ರಮುಖ ದಿನಾಂಕಗಳು :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 16 ಆಗಸ್ಟ್ 2020
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟಂಬರ್ 15 2022
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ಎಲ್ಲಾ ಅಭ್ಯರ್ಥಿಗಳಿಗೆ ಶೇರ್ ಮಾಡಿ ಹಾಗೂ ನಿಮ್ಮ ಸ್ನೇಹಿತರ ಗ್ರೂಪುಗಳ ಮೂಲಕ ಹಂಚಿಕೊಳ್ಳಿ.
ಸೂಚನೆ :
ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ಅರ್ಥ ಮಾಡಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ