ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 278 ಅಂಗನವಾಡಿ ಶಿಕ್ಷಕಿ ಹುದ್ದೆಗಳಿಗೆ 4ನೇ ತರಗತಿ / 9ನೇ ತರಗತಿ ಹಾಗೂ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಉದ್ಯೋಗಕ್ಕೆ ಸಂಬಂಧಿಸಿದ ವೇತನ ಶ್ರೇಣಿ / ಆಯ್ಕೆ ವಿಧಾನ / ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳ ವಿವರಣೆ 2022
ನೇಮಕಾತಿ ಇಲಾಖೆಯ ಹೆಸರು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು :
1) ಅಂಗನವಾಡಿ ಸಹಾಯಕಿ
2) ಮಿನಿ ಅಂಗನವಾಡಿ ಕಾರ್ಯಕರ್ತೆ
3) ಅಂಗನವಾಡಿ ಕಾರ್ಯಕರ್ತೆ
ಒಟ್ಟು ಹುದ್ದೆಗಳ ಸಂಖ್ಯೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 278 ಹುದ್ದೆಗಳ ನೇಮಕಾತಿ ನಡೆಯುತ್ತಿದೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಸಂಬಳದ ವಿವರಣೆ :
ವೇತನ ಶ್ರೇಣಿ :
ಅಂಗನವಾಡಿ ಸಹಾಯಕಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮ ಅನುಸಾರ ಮಾಸಿಕವಾಗಿ ಗೌರವದನ ಆಧಾರದ ಮೇಲೆ 6,250/-ವೇತನ ಇರುತ್ತದೆ.
ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 5,000 ರೂಪಾಯಿ ವೇತನ ನಿಗದಿಪಡಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 10 ಸಾವಿರ ರೂಪಾಯಿ ವೇತನ ನಿಗದಿಪಡಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕದ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
• ವಿಜಯನಗರ ಜಿಲ್ಲೆಯಲ್ಲಿ ಒಟ್ಟು 63 ಹುದ್ದೆಗಳು
• ಚಿಕ್ಕಮಗಳೂರು ಜಿಲ್ಲೆಯಲ್ಲಿ 74 ಹುದ್ದೆಗಳು ಖಾಲಿ ಇವೆ
• ತುಮಕೂರು ಜಿಲ್ಲೆಯಲ್ಲಿ 141 ಹುದ್ದೆಗಳು ಖಾಲಿ ಇವೆ.
ಅಂಗನವಾಡಿ ಶಿಕ್ಷಕಿ ಹುದ್ದೆಗಳಿಗೆ ನಿಗದಿಪಡಿಸಿದ ವಯಸ್ಸಿನ ಮಿತಿ :
ವಯೋಮಿತಿ:
ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯಸ್ಸಿನಲ್ಲಿ ಸಡಿಲಿಕೆ ಇರುತ್ತದೆ
ವಯೋಮಿತಿಯಲ್ಲಿ ಸಿಡಿಲಿಕೆ :
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ
2A 2B 3A 3B ವರ್ಗದವರಿಗೆ 03 ವರ್ಷ ಸಡಿಲಿಕೆ ಇರುತ್ತದೆ
ಪಿಎಚ್ ಅಭ್ಯರ್ಥಿಗಳಿಗೆ 10 ವರ್ಷ
ಅರ್ಜಿ ಶುಲ್ಕ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಹಾಗೂ ಈ ಹುದ್ದೆಗಳಿಗೆ ಕೇವಲ ಮಹಿಳಾ ವರ್ಗದ ಅಭ್ಯರ್ಥಿಗಳ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನ ಪ್ರಕ್ರಿಯೆ :
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾರ್ಹತೆ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅಥವಾ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ದಿನಾಂಕದ ಒಳಗಾಗಿ ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಸಲ್ಲಿಸಬೇಕು.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು :
ತುಮಕೂರು ಜಿಲ್ಲೆ :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 29 ಆಗಸ್ಟ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 27 ಸಪ್ಟಂಬರ್ 2022
ಚಿಕ್ಕಮಗಳೂರು ಜಿಲ್ಲೆ :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 7 ಸೆಪ್ಟೆಂಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 06 ಅಕ್ಟೋಬರ್ 2020
ವಿಜಯನಗರ ಜಿಲ್ಲೆ :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 7 ಸೆಪ್ಟಂಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 06 ಅಕ್ಟೋಬರ್ 2020
ಸೂಚನೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.
ಅರ್ಜಿ ಸಲ್ಲಿಕೆ ಬೇಕಾಗುವ ಪ್ರಮುಖ ದಾಖಲಾತಿಗಳು ಮತ್ತು ಪ್ರಮುಖ ಸೂಚನೆಗಳು :
• ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಬೇಕಾಗುವ ಪ್ರಮುಖ ಶೈಕ್ಷಣಿಕ ದಾಖಲಾತಿಗಳು ಸರಿಯಾಗಿ ಇದೆಯಾ ಎಂದು ಖಚಿತಪಡಿಸಿಕೊಳ್ಳಿ
• ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನಲ್ಲಿ ಸಲ್ಲಿಸಲು ಕಡ್ಡಾಯವಾಗಿರುತ್ತದೆ
• ಆನ್ಲೈನ್ ಮೂಲಕ ಮಾತ್ರ ದಾಖಲಾತಿಗಳ ಸಲ್ಲಿಕೆ ಅವಕಾಶ ಇರುತ್ತದೆ ನಂತರ ಕಚೇರಿಗೆ ಅಭ್ಯರ್ಥಿಯಿಂದ ಯಾವುದೇ ದಾಖಲೆಗಳನ್ನು ಸ್ವೀಕರಿಸುವುದಿಲ್ಲ.
• ಲಕೋಟೆಯಿಂದ ಬಂದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ
• ಅಂಗನವಾಡಿ ಕಾರ್ಯಕರ್ತೆ ಅಥವಾ ಅಂಗನವಾಡಿ ಸಹಾಯಕಿ ಹುದ್ದೆಗೆ ಸಂಪೂರ್ಣವಾಗಿ ಗೌರವ ಸೇವೆಯಾಗಿದ್ದು ಕಾಯಂ ಹುದ್ದೆಯಾಗಿರುವುದಿಲ್ಲ
• ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ ಹುದ್ದೆಗಳಿಗೆ ವಿಧವೆಯವರು ಅರ್ಜಿ ಸಲ್ಲಿಸಿದಲ್ಲಿ ಕಡ್ಡಾಯವಾಗಿ ಗಂಡನ ಮರಣ ಪ್ರಮಾಣ ಪತ್ರ ಲಗತ್ತಿಸಬೇಕು
• ಅರ್ಜಿ ಸಲ್ಲಿಕೆ ವೇಳೆ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಅಪ್ಲೋಡ್ ಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು :
• ಅರ್ಜಿ ನಿಗದಿಪಡಿಸಿದ ನಮೂನೆಯಲ್ಲಿ ( ಆನ್ಲೈನ್ )
• ಜನ ಪ್ರಮಾಣ ಪತ್ರ ಅಥವಾ ಶಾಲೆಯ ವಗ್ರಾಣೆ ಪ್ರಮಾಣ ಪತ್ರ ಅಥವಾ ಜನುಮ ದಿನಾಂಕ ಇರುವ ಪ್ರಮಾಣ ಪತ್ರ
• ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ ( ಕಾರ್ಯಕರ್ತೆ ಹುದ್ದೆಗೆ ಎಸ್ ಎಸ್ ಎಲ್ ಸಿ ಗಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವವರು ಎಸ್ ಎಸ್ ಎಲ್ ಸಿ ತೆರಗಡೆ ಹೊಂದಿರುವ ಅಂಕ ಪಟ್ಟಿಯನ್ನು ಮಾತ್ರ ಲಗತ್ತಿಸುವುದು )
• ತಹಶೀಲ್ದಾರರು ಅಥವಾ ಉಪಾಧ್ಯಕ್ಷರದಿಂದ ಪಡೆದ ಮೂರು ವರ್ಷದೊಳಗಿನ ವಾಸ ಸ್ಥಳ ಪ್ರಮಾಣ ಪತ್ರ ಅಥವಾ ದುಡಿಕಣ್ಣ ಪತ್ರ ಹೊಂದಿರಬೇಕು