SSC MTS Recruitment 2023, Notification PDF, Syllabus,@ssc.nic.in
ಸಿಬ್ಬಂದಿ ನೇಮಕಾತಿ ಆಯೋಗ ( staff selection commission-ssc ) ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 11409 ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹಾಗೂ ಹವಾಲ್ದಾರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದೆ ಆದಷ್ಟು ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
SSC MTS Recruitment 2023 Explain
ನೇಮಕಾತಿ ಇಲಾಖೆ ಹೆಸರು :
ಸಿಬ್ಬಂದಿ ನೇಮಕಾತಿ ಆಯೋಗ ( SSC )
SSC MTS 2023 Total Vacancy
ಹುದ್ದೆಗಳ ಹೆಸರು :
ಮಲ್ಟಿ ಟಾಸ್ಕಿಂಗ್ ಸ್ಟಾಪ್ : 10,880 ಹುದ್ದೆಗಳು
ಹವಾಲ್ದಾರ್ : 549 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಒಟ್ಟು 11409 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ :
ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಹವಾಲ್ದಾರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ವಿವರಣೆ :
ಸಿಬ್ಬಂದಿ ನೇಮಕಾತಿ ಆಯೋಗ ಇಲಾಖೆಯ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 25 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಿದೆ.
ವಯೋಮಿತಿ ಸಡಿಲಿಕೆ :
ಓಬಿಸಿ ಅಥವಾ ಹಿಂದುಳಿದ ವರ್ಗದವರಿಗೆ : 03 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 05 ವರ್ಷ
ಅರ್ಜಿ ಶುಲ್ಕ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನಿಯಮಗಳ ಅನುಸಾರ ಮೀಸಲಾತಿ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು ಅರ್ಜಿ ಶುಲ್ಕದ ವಿವರಣೆ ಈ ಕೆಳಗಿನಂತಿದೆ.
• ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ : 100/-
• ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಪಿಡಬ್ಲ್ಯೂಡಿ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಸ್ಟಾಪ್ ಸೆಲೆಕ್ಷನ್ ಇಲಾಖೆಯ ನಿಯಮಗಳ ಅನುಸಾರ ಆಯ್ಕೆ ಮಾಡಲಾಗುತ್ತದೆ.
• ಕಂಪ್ಯೂಟರ್ ಆಧಾರಿತ ಪರೀಕ್ಷೆ
• ಡಿಸ್ಕ್ರಿಪ್ಟಿವ್ ಪೇಪರ್
• ಹವಾಲ್ದಾರ್ ಹುದ್ದೆಗೆ ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ
How to apply for SSC MTS Recruitment 2023 Explain
ಅರ್ಜಿ ಸಲ್ಲಿಸುವ ವಿಧಾನ :
ಮೊದಲನೆಯದಾಗಿ staff selection commission-ssc ಇಲಾಖೆ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
staff selection commission-ssc ಇಲಾಖೆ 2023 ಹವಾಲ್ದಾರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
staff selection commission-ssc ಇಲಾಖೆ 2023 ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
staff selection commission-ssc 2023 ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
SSC MTS Notification 2023
Notification Link :Click
Apply Online :Click
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 18 ಜನವರಿ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 17 ಫೆಬ್ರುವರಿ 2023
ಸೂಚನೆ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಇಲಾಖೆ ಹೊರಡಿಸುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು. ನಾವು ನೀಡಿರುವ ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಫೇಸ್ಬುಕ್ ವಾಟ್ಸಪ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ.