ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಶೀಘ್ರ ಲಿಪಿಕಾರರು ಗ್ರೇಡ್ 3/ ಬೆರಳಚ್ಚುಗಾರ & ಜವಾನ ಹುದ್ದೆಗಳಿಗೆ ಅರ್ಜಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ / ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಪಡೆಯೋಣ.
ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿ ಕುರಿತಾದ ಮಾಹಿತಿ
ನೇಮಕಾತಿ ಇಲಾಖೆ ಹೆಸರು :
ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕ
ಹುದ್ದೆಗಳ ಹೆಸರು :
* ಶೀಘ್ರ ಲಿಪಿಕಾರರು ಗ್ರೇಡ್ 3
* ಬೆರಳಚ್ಚುಗಾರರು
* ಬೆರಳಚ್ಚು ನಕಲುಗಾರರು
* ಜವಾನ
* ಆದೇಶ ಜಾರಿಕಾರರು.
ಒಟ್ಟು ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ ಒಟ್ಟು 34 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
ವೇತನ ಶ್ರೇಣಿ :
ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000-52,650/- ರೂ ವೇತನ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ :
ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಶೀಘ್ರಲಿಪಿಗಾರರು :
ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಬೆರಳಚ್ಚು & ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರ :
ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರ ನಕಲುಗಾರರು :
ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಕಿರಿಯ ದರ್ಜೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆದೇಶ ಜಾರಿಕಾರ ;
ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಲಘು/ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿ
ವೇತನ ಶ್ರೇಣಿ :
ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ
ಆಯ್ಕೆ ವಿಧಾನ :
ಶೀಘ್ರ ಲಿಪಿಕಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರರು, ಹುದ್ದೆಗಳಿಗೆ ಅರ್ಜಿ ಸಲ್ಲಿದ ಅಭ್ಯರ್ಥಿಗಳನ್ನು ಇಲಾಖೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
• ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳು ರೂ. 100
• ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಸಲ್ಲಿಸಬೇಕು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ 29 ಜುಲೈ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಆಗಸ್ಟ್ 2022