indian air force recruitment 2023 apply online

ಭಾರತೀಯ ವಾಯುಪಡೆ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ಪ್ರಕ್ರಿಯೆ/ ಅರ್ಜಿ ಸಲ್ಲಿಸುವ ವಿಧಾನ/ ಪ್ರಮುಖ ದಿನಾಂಕಗಳು ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು :
ಭಾರತೀಯ ವಾಯುಪಡೆ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
ಇಲಾಖೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ವಾಯುಪಡೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಯನ್ನು ನಂತರದಲ್ಲಿ ತಿಳಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :
ವಿಜ್ಞಾನ ವಿಷಯದ ಅರ್ಹತೆಯ ವಿವರಗಳು: ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್‌ನೊಂದಿಗೆ ದ್ವಿತೀಯ ಪಿಯುಸಿ/ 10 + 2 / ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು(50%) ಅಥವಾ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ (ಮೆಕ್ಯಾನಿಕಲ್/ ಎಲೆಕ್ನಿಕಲ್ / ಎಲೆಕ್ಟ್ರಾನಿಕ್ಸ್/ ಆಟೋಮೊಬೈಲ್/ ಕಂಪ್ಯೂಟರ್ ಸೈನ್ಸ್/ ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ/ ಮಾಹಿತಿ ತಂತ್ರಜ್ಞಾನ (50%) ತೇರ್ಗಡೆ ಹೊಂದಿರಬೇಕು.

ವಿಜ್ಞಾನ ವಿಷಯವಲ್ಲದೆ ಇತರೆ ಅರ್ಹತೆ:
ದ್ವಿತೀಯ ಪಿಯುಸಿ/ 10 1 2/ ತತ್ಸಮಾನ ವಿದ್ಯಾರ್ಹತೆ ಕನಿಷ್ಠ 50% ಅಂಕಗಳು ಮತ್ತು ಇಂಗ್ಲಿಷ್‌ನಲ್ಲಿ 50% ಅಂಕ ಹೊಂದಿರಬೇಕು (ಅಧಿಸೂಚನೆ ಗಮನಿಸಿ)

ವಯೋಮಿತಿ ವಿವರಣೆ :
ಸಾಮಾನ್ಯ ವರ್ಗದವರಿಗೆ ಗರಿಷ್ಠ 21 ವರ್ಷ ನಿಗದಿಪಡಿಸಿದೆ.
ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಿಡಿಲಿಕ್ಕೆ ಸಹ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ. ( 26 ಡಿಸೆಂಬರ್ 2002 ಮತ್ತು 26 ಜೂನ್ 2006 (ಎರಡೂ ದಿನಗಳನ್ನು ಒಳಗೊಂಡಂತೆ) ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕ :
ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 250 ಪರೀಕ್ಷಾ ಶುಲ್ಕ ಇರುತ್ತದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆ ಅಥವಾ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Join Now

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಆಯ್ಕೆ ವಿಧಾನ :
• ಲಿಖಿತ ಪರೀಕ್ಷೆ
• ದಾಖಲಾತಿ ಪರಿಶೀಲನೆ ಹಾಗೂ ದೇಹದಾರ್ಡ್ಯತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ದೇಹದಾರ್ಡ್ಯತೆ :
ಪುರುಷ ಎತ್ತರ 152.5ಸೆಂ.ಮೀ, ಮಹಿಳೆ ಎತ್ತರ:152ಸೆಂ.ಮೀ ಎದೆ: ವಿಸ್ತರಣೆಯ ಕನಿಷ್ಠ 05 ಸೆಂ.ಮೀ (ಅಧಿಸೂಚನೆ ಗಮನಿಸಿ)

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 17-ಮಾರ್ಚ್-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 31-ಮಾರ್ಚ್ 2023

Apply Link : Click
Notification Link :Click

ಮುಖ್ಯ ಪದಗಳು :
ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಸುವ ಮುನ್ನ ಸಂಪೂರ್ಣವಾಗಿ ಅಧಿಸೂಚನೆಯನ್ನು ಓದಿ ಸ್ಪಷ್ಟವಾಗಿ ಅರ್ಥೈಸಿಕೊಂಡ ನಂತರವೇ ಅರ್ಜಿಯನ್ನು ಸಲ್ಲಿಸಿ.

Spread the love