CRPF Recruitment 2023 for 9212 Constable Posts: ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿ ಬರುವ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ 9223 ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇಲಾಖೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಿದೆ ಆಸಕ್ತಿ ಹೊಂದಿರುವ ಕರ್ನಾಟಕದ ಅಭ್ಯರ್ಥಿಗಳು ಆದಷ್ಟು ಬೇಗ ಈ ಉಪಯೋಗವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
CRPF Vacancy Notification 2023
ನೇಮಕಾತಿ ಇಲಾಖೆ ಹೆಸರು : ಕೇಂದ್ರ ಮೀಸಲು ಪೊಲೀಸ್ ಪಡೆ
ಹುದ್ದೆಗಳ ಹೆಸರು :
1. ಟೆಕ್ನಿಕಲ್/ಟ್ರೇಡ್ಸ್ ಮೆನ್ ( ಪುರುಷ ಅಭ್ಯರ್ಥಿಗಳಿಗೆ ) 9105
2. ಟೆಕ್ನಿಕಲ್/ಟ್ರೇಡ್ಸ್ ಮೆನ್ ( ಮಹಿಳಾ ಅಭ್ಯರ್ಥಿಗಳಿಗೆ ) 107
3. ಪಯೋನಿಯರ್ ವಿಂಗ್ ( ಪುರುಷ ) 11
CRPF Vacancy Details In Kannada
ಒಟ್ಟು ಹುದ್ದೆಗಳ ಸಂಖ್ಯೆ : ಕೇಂದ್ರ ಮೀಸಲು ಪೊಲೀಸ್ ಪಡೆ ಇಲಾಖೆಯಲ್ಲಿ ಒಟ್ಟು 9223 ಹುದ್ದೆಗಳ ನೇಮಕಾತಿಗಾಗಿ ಇಲಾಖೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
CRPF Recruitment 2023 Eligibility Details
ಶೈಕ್ಷಣಿಕ ವಿದ್ಯಾರ್ಹತೆ : ಕೇಂದ್ರ ಮೀಸಲು ಪೊಲೀಸ್ ಪಡೆ ಅಧಿಸೂಚನೆಯಲ್ಲಿ ನೀಡಿರುವಂತೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.
ವೇತನ ಶ್ರೇಣಿ ವಿವರಣೆ : ಕೇಂದ್ರ ಸರ್ಕಾರದ 7ನೇ ಆಯೋಗದ ಲೆವೆಲ್ ಮೂರರಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21700 ರಿಂದ 69,100/-ವೇತನವನ್ನು ನೀಡಲಾಗುತ್ತದೆ.
ವಯೋಮಿತಿ ವಿವರಣೆ :
ಕಾನ್ಸ್ಟೇಬಲ್ ( ಚಾಲಕ ) ಕದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಗರಿಷ್ಠ 27 ವರ್ಷ ವಯೋಮಿತಿಯ ಒಳಗೆ ಇರಬೇಕು.
ಕಾನ್ಸ್ಟೇಬಲ್ ( ಇತರೆ ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 23 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.
ಅರ್ಜಿ ಶುಲ್ಕದ ವಿವರಣೆ : ಸಾಮಾನ್ಯ ವರ್ಗ/ ಓಬಿಸಿ/ EWS/ಅಭ್ಯರ್ಥಿಗಳಿಗೆ ಕೇವಲ 100/-
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಹಾಗೂ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳು ಅನುಸಾರ ಲಿಖಿತ ಪರೀಕ್ಷೆ / ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಣುತಾ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
How to apply for BMRCL Recruitment 2023
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27 ಮಾರ್ಚ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 25 ಏಪ್ರಿಲ್ 2023
ಪರೀಕ್ಷೆ ದಿನಾಂಕ ಜುಲೈ 2023
Apply Link : Click
Notification Link : Click
ಮುಖ್ಯ ಸೂಚನೆ :
ಕೇಂದ್ರ ಮೀಸಲು ಪೊಲೀಸ್ ಪಡೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಅರ್ಥೈಸಿಕೊಂಡು ತದನಂತರವೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.