ನೌಕರರ ಭವಿಷ್ಯ ನಿಧಿ ಇಲಾಖೆ ಬೃಹತ್ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 2674 ಸಾಮಾಜಿಕ ಭದ್ರತಾ ಸಹಾಯಕ / ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ವೃತ್ತಿಯಲ್ಲಿ ಕೆಲಸವನ್ನು ಬಯಸುವ ಆಸಕ್ತ ಮತ್ತು ಅರ್ಹತೆ ಪಡೆದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ / ಅರ್ಜಿ ಸಲ್ಲಿಸುವ ವಿಧಾನ /ಪ್ರಮುಖ ದಿನಾಂಕಗಳು ಹಾಗೂ ವೇತನ ಶ್ರೇಣಿ ವಿವರಣೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
EPFO Vacancy Notification 2023
ನೇಮಕಾತಿ ಇಲಾಖೆ ಹೆಸರು : ನೌಕರರ ಭವಿಷ್ಯ ನಿಧಿ ಇಲಾಖೆ
ಹುದ್ದೆಗಳ ಹೆಸರು :
1. ಸಾಮಾಜಿಕ ಭದ್ರತಾ ಸಹಾಯಕ : 2674 ಹುದ್ದೆಗಳು
2. ಸ್ಟೆನೋಗ್ರಾಫರ್ : 185 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ: ನೌಕರರ ಭವಿಷ್ಯ ನಿಧಿ ಇಲಾಖೆಯಲ್ಲಿ ಒಟ್ಟು 2674 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ : ನೌಕರರ ಭವಿಷ್ಯ ನಿಧಿ ಇಲಾಖೆ ನೇಮಕಾತಿ 2023 ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಕಂಪ್ಯೂಟರ್ ಟೈಪಿಂಗ್ ಪ್ರಾವಣ್ಯತೆ ಹೊಂದಿರಬೇಕು.
ವೇತನ ಶ್ರೇಣಿ ವಿವರಣೆ :
ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಗಳ ಅನ್ವಯ 29,200 ರಿಂದ 92300/-ವೇತನವನ್ನು ನೀಡಲಾಗುತ್ತದೆ. ಹಾಗೂ ಇದರ ಜೊತೆಗೆ ಮುಂತಾದ ಸೌಲಭ್ಯಗಳು ಸಹ ದೊರೆಯುತ್ತವೆ.
ವಯೋಮಿತಿ ವಿವರಣೆ: ಇಲಾಖೆಯ ನಿಯಮಗಳ ಅನ್ವಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 27 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕ್ಕೆ ಸಹ ಇರುತ್ತದೆ.
ವಯೋಮಿತಿ ಸಡಿಲಿಕ್ಕೆ ವಿವರಣೆ :
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ
ಇತರೆ ಹಿಂದುಳಿದ ವರ್ಗದವರಿಗೆ 03, ವರ್ಷ
ಅರ್ಜಿ ಶುಲ್ಕದ ವಿವರಣೆ : ಸಾಮಾನ್ಯ / OBC / EWS / ಅಭ್ಯರ್ಥಿಗಳಿಗೆ ರೂಪಾಯಿ 700/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಹಾಗೂ ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27 ಮಾರ್ಚ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 26 ಏಪ್ರಿಲ್ 2023
Apply Link : Click
Notification Link :Click
ಮುಖ್ಯ ಸೂಚನೆ :
ನೌಕರರ ಭವಿಷ್ಯ ನಿಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಅರ್ಥೈಸಿಕೊಂಡು ತದನಂತರವೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.