Food department Recruitment 2023 – Apply Online For 380 Posts

Food department Recruitment 2023 : ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿ ಇರುವ 386 ಸಹಾಯಕ ವ್ಯವಸ್ಥಾಪಕರು, ಗುಣಮಟ್ಟ ನಿರೀಕ್ಷಕರು, ಕಿರಿಯ ಸಹಾಯಕರು ಹೀಗೆ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ ಮಾಸಿಕವಾಗಿ 11,600-43200/-ವೇತನ ನೀಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಸಂಸ್ಥೆ ಹೆಸರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆ – ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ.

ಹುದ್ದೆಗಳ ಹೆಸರು :
1. ಕಿರಿಯ ಸಹಾಯಕರು 263 ಹುದ್ದೆಗಳು
2. ಹಿರಿಯ ಸಹಾಯಕರು 57 ಹುದ್ದೆಗಳು
3. ಹಿರಿಯ ಸಹಾಯಕರು ( ಲೆಕ್ಕ ) 33 ಹುದ್ದೆಗಳು
4. ಗುಣಮಟ್ಟ ನಿರೀಕ್ಷಕರು 23 ಹುದ್ದೆಗಳು
5. ಸಹಾಯಕ ವ್ಯವಸ್ಥಾಪಕರು 10 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ : ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 386 ವಿವಿಧ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತ ಅಧಿಸೂಚನೆ ಪ್ರಕಾರ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ/ ದ್ವಿತೀಯ ಪಿಯುಸಿ/ ಪದವಿ/ ಬಿಕಾಂ/ ಎಂಕಾಂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವೇತನ ಶ್ರೇಣಿ ವಿವರಣೆ :
1. ಸಹಾಯಕ ವ್ಯವಸ್ಥಾಪಕರು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 22800 ರಿಂದ 43200 ವೇತನ ನಿಗದಿಪಡಿಸಲಾಗಿದೆ.
2. ಗುಣಮಟ್ಟ ನಿರೀಕ್ಷಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 14,550 ಯಿಂದ ರೂ.26750 ವೇತನ ಇರುತ್ತದೆ.
3. ಹಿರಿಯ ಸಹಾಯಕರು ಲೆಕ್ಕ ಹಾಗೂ ಹಿರಿಯ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 14,550 ಯಿಂದ ರೂ.26750 ವೇತನ ಇರುತ್ತದೆ.
4. ಕಿರಿಯ ಸಹಾಯಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.11600 ರಿಂದ 20000 ವೇತನ ಇರುತ್ತದೆ.

ವಯೋಮಿತಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದ್ದು ಅದರ ಅನ್ವಯ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Join Now

ಇದು ಇಲಾಖೆಯ ಕರಡು ಅಧಿಸೂಚನೆಯಾಗಿದ್ದು ಇದರ ಸಂಬಂಧಿಸಿದ ಸಂಪೂರ್ಣ ಅಧಿಸೂಚನೆಯನ್ನು ಇಲಾಖೆಯು ದಿನಾಂಕ 15 ಏಪ್ರಿಲ್ 2023 ರಂದು ಶೀಘ್ರದಲ್ಲಿ ಪ್ರಕಟವಾಗಲಿದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 17-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 17-05-2023

Notification Link : Click

ಈ ಅಂಚೆ ಕಚೇರಿಗಳಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ 20 ಏಪ್ರಿಲ್ 2023 ಆಗಿರುತ್ತದೆ.

Spread the love

1 thought on “Food department Recruitment 2023 – Apply Online For 380 Posts”

Comments are closed.