Karnataka Revenue Department recruitment 2023 – Apply Online For 2169 VA Jobs

ಕರ್ನಾಟಕ ಕಂದಾಯ ಇಲಾಖೆ ಬೃಹತ್ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 2160 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ / ಅರ್ಜಿ ಸಲ್ಲಿಸುವ ವಿಧಾನ /ಪ್ರಮುಖ ದಿನಾಂಕಗಳು ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನದ ಉದ್ಯೋಗದ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ ಅಂತರ್ಜಲವಾದ www.karnatakanewshunter.com ಭೇಟಿ ನೀಡಿ.

ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಕಂದಾಯ ಇಲಾಖೆ.

ಒಟ್ಟು ಹುದ್ದೆಗಳ ಸಂಖ್ಯೆ :
1. ಬೀದರ್ ಜಿಲ್ಲೆಯಲ್ಲಿ 57 ಹುದ್ದೆಗಳು
2. ರಾಯಚೂರು ಜಿಲ್ಲೆಯಲ್ಲಿ 31 ಹುದ್ದೆಗಳು
3. ಕಲಬುರಗಿ ಜಿಲ್ಲೆಯಲ್ಲಿ 134 ಹುದ್ದೆಗಳು
4. ಕೊಪ್ಪಳ ಜಿಲ್ಲೆಯಲ್ಲಿ 31 ಹುದ್ದೆಗಳು
5. ಯಾದಗಿರಿ ಜಿಲ್ಲೆಯಲ್ಲಿ 32 ಹುದ್ದೆಗಳು
6. ಬಳ್ಳಾರಿ ಜಿಲ್ಲೆಯಲ್ಲಿ 33 ಹುದ್ದೆಗಳು
7. ವಿಜಯನಗರ ಜಿಲ್ಲೆಯಲ್ಲಿ 24 ಹುದ್ದೆಗಳು
8. ಬೆಂಗಳೂರು ನಗರ ಜಿಲ್ಲೆಯಲ್ಲಿ 38 ಹುದ್ದೆಗಳು
9. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 51 ಹುದ್ದೆಗಳು
10. ತುಮಕೂರು ಜಿಲ್ಲೆಯಲ್ಲಿ 129 ಹುದ್ದೆಗಳು
11. ರಾಮನಗರ ಜಿಲ್ಲೆಯಲ್ಲಿ 80 ಹುದ್ದೆಗಳು
12. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 63 ಹುದ್ದೆಗಳು
13. ಚಿತ್ರದುರ್ಗ ಜಿಲ್ಲೆಯಲ್ಲಿ 93 ಹುದ್ದೆಗಳು
14. ಕೋಲಾರ ಜಿಲ್ಲೆಯಲ್ಲಿ 66 ಹುದ್ದೆಗಳು
15. ದಾವಣಗೆರೆ ಜಿಲ್ಲೆಯಲ್ಲಿ 17 ಹುದ್ದೆಗಳು
16. ಶಿವಮೊಗ್ಗ ಜಿಲ್ಲೆಯಲ್ಲಿ 49 ಹುದ್ದೆಗಳು
17. ಮೈಸೂರು ಜಿಲ್ಲೆಯಲ್ಲಿ 105 ಹುದ್ದೆಗಳು
18. ಮಂಡ್ಯ ಜಿಲ್ಲೆಯಲ್ಲಿ 116 ಹುದ್ದೆಗಳು
19. ಚಾಮರಾಜನಗರ ಜಿಲ್ಲೆಯಲ್ಲಿ 102 ಹುದ್ದೆಗಳು
20. ಹಾಸನ ಜಿಲ್ಲೆಯಲ್ಲಿ 85 ಹುದ್ದೆಗಳು
21. ಕೊಡಗು ಜಿಲ್ಲೆಯಲ್ಲಿ 37 ಹುದ್ದೆಗಳು
22. ಚಿಕ್ಕಮಗಳೂರು ಜಿಲ್ಲೆಯಲ್ಲಿ 32 ಹುದ್ದೆಗಳು
23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 32 ಹುದ್ದೆಗಳು
24. ಉಡುಪಿ ಜಿಲ್ಲೆಯಲ್ಲಿ 38 ಹುದ್ದೆಗಳು
25. ಬೆಳಗಾವಿ ಜಿಲ್ಲೆಯಲ್ಲಿ 135 ಹುದ್ದೆಗಳು
26. ವಿಜಯಪುರ ಜಿಲ್ಲೆಯಲ್ಲಿ 22 ಹುದ್ದೆಗಳು
27. ಬಾಗಲಕೋಟೆ ಜಿಲ್ಲೆಯಲ್ಲಿ 60 ಹುದ್ದೆಗಳು
28. ಧಾರವಾಡ ಜಿಲ್ಲೆಯಲ್ಲಿ 31 ಹುದ್ದೆಗಳು
29. ಗದಗ ಜಿಲ್ಲೆಯಲ್ಲಿ 44 ಹುದ್ದೆಗಳು
30. ಹಾವೇರಿ ಜಿಲ್ಲೆಯಲ್ಲಿ 57 ಹುದ್ದೆಗಳು
31. ಉತ್ತರಕನ್ನಡ ಜಿಲ್ಲೆಯಲ್ಲಿ 94 ಹುದ್ದೆಗಳು ಖಾಲಿ ಇವೆ

ಒಟ್ಟಾರೆ ಕರ್ನಾಟಕ ಕಂದಾಯ ಇಲಾಖೆಯಲ್ಲಿ 2169 ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಹತೆ ಹೊಂದಿದ್ದರಿಂದ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ : ಕರ್ನಾಟಕ ಕಂದಾಯ ಇಲಾಖೆ ನಿಯಮಗಳ ಅನುಸಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು.

ವೇತನ ಶ್ರೇಣಿ ವಿವರಣೆ : ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21,400 ರಿಂದ 42000 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ.

ವಯಸ್ಸಿನ ಮಿತಿ : ಇಲಾಖೆಯ ನಿಯಮಗಳು ಅನುಸಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 30 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.

ಅರ್ಜಿ ಶುಲ್ಕ : ಕರ್ನಾಟಕ ಕಂದಾಯ ಇಲಾಖೆ ಹೊರಟಿಸಿರುವ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನಿಗದಿಪಡಿಸಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

Join Now

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂಪಾಯಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಒಂದು ನೂರುಪಾಯಿ ನಿಗದಿಪಡಿಸಲಾಗಿದೆ.

ನೇಮಕಾತಿ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗ್ರಾಮ ಲೆಕ್ಕಾಧಿಕಾರಿ ಅಥವಾ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಮೊದಲು ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಈಗ ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತದೆ ಇದು ಇನ್ನೂ ಸರ್ಕಾರದ ಪ್ರಸ್ತಾವನೆಯ ಪರಿಶೀಲನೆಯಲ್ಲಿದೆ.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Notification Link :Click

Apply Link : Click

ಪ್ರಮುಖ ದಿನಾಂಕಗಳು :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಚುನಾವಣೆ ವ್ಯವಸ್ಥೆ ಮುಗಿದ ಬಳಿಕ ಇಲಾಖೆಯು ಮತ್ತೊಂದು ಅದರಲ್ಲಿ ಹುದ್ದೆಗಳಿಗೆ ಸಲ್ಲಿಸುವ ದಿನಾಂಕದ ಕುರಿತು ಮಾಹಿತಿಯನ್ನು ನೀಡುತ್ತದೆ. ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Spread the love