ಕೋಲಾರ ಗ್ರಾಮ ಪಂಚಾಯತ್ ನೇಮಕಾತಿ 2022 ರಾಜ್ಯ ಸರ್ಕಾರಿ ಉದ್ಯೋಗ 2022 ಕೋಲಾರ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವಂತ ಅಟೆಂಡೆಂಟ್, ಡಿ ಇ ಓ, ಹಾಗೂ ಕ್ಲರ್ಕ್ ಹುದ್ದೆಗಳಿಗೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆಳಗಡೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಮುಂತಾದ ಮಾಹಿತಿ ಈ ಕೆಳಗಿನಂತಿದೆ.
ನೇಮಕಾತಿ ಇಲಾಖೆ ಹೆಸರು :
ಕೋಲಾರ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ
ಹುದ್ದೆಗಳ ಹೆಸರು :
• ಕರವಸೂಲಿಗಾರ ಮತ್ತು ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್
• ಡಾಟಾ ಎಂಟ್ರಿ ಆಪರೇಟರ್
• ಅಟೆಂಡೆಂಟ್
ಒಟ್ಟು ಹುದ್ದೆಗಳ ಸಂಖ್ಯೆ :
ಕೋಲಾರ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 46 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
ವಿದ್ಯಾರ್ಹತೆ :
ಕರವಸೂಲಿಗಾರ ಮತ್ತು ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅಭ್ಯರ್ಥಿಯು ಈ ಕೆಳಕಂಡ ಅರ್ಹತೆಯನ್ನು ಹೊಂದಿರಬೇಕು.
• ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.
• ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರತಕ್ಕದ್ದು
ವಯಸ್ಸಿನ ಮಿತಿ :
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ – 1 ವರ್ಗದವರಿಗೆ 40 ವರ್ಷಗಳು
• ಪ್ರವರ್ಗ 2A 2B 3A 3B ವರ್ಗದವರಿಗೆ 38 ವರ್ಷ
• ಸಾಮಾನ್ಯ ವರ್ಗಕ್ಕೆ 35 ವರ್ಷ
ಕರವಸೂಲಿಗಾರ ಮತ್ತು ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇಮಕಾತಿ ವಿಧಾನ :
ಆಯ್ಕೆ ವಿಧಾನ :
ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಡಾಟಾ ಎಂಟ್ರಿ ಆಪರೇಟರ್ : 12 ಹುದ್ದೆಗಳು
ವಿದ್ಯಾರ್ಹತೆ :
• ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ರ್ಗಡೆ ಹೊಂದಿರಬೇಕು
• ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
• ಆಯ್ಕೆ ಸಮಿತಿ ನಡೆಸುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು
• ಅರ್ಹತಾ ಪರೀಕ್ಷೆಯಲ್ಲಿ ಪಡೆದ ಶೇಕಡ 50ರಷ್ಟು ಅಂಕಗಳನ್ನು ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ 50 ರಷ್ಟು ಅಂಕಗಳನ್ನು ಒಳಗೊಂಡಿರುವ ಅರ್ಹತೆ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನಿಗದಿಪಡಿಸಿದ ವಯಸ್ಸಿನ ಮಿತಿ :
ವಯೋಮಿತಿ :
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ 40 ವರ್ಷ
• ಪ್ರವರ್ಗ 2A 2B 3A 3B ವರ್ಗದವರಿಗೆ 38 ವರ್ಷ
• ಸಾಮಾನ್ಯ ವರ್ಗಕ್ಕೆ 35 ವರ್ಷ
ಆಯ್ಕೆ ವಿಧಾನ :
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳು ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅಟೆಂಡೆಂಟ್ ಹುದ್ದೆಗಳು : 30 ಹುದ್ದೆ
ವಿದ್ಯಾರ್ಹತೆ :
• ಕನ್ನಡವನ್ನು ಒಂದು ವಿಷಯವನ್ನಾಗಿ ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತೆ ಆಗಿರಬೇಕು
ವಯಸ್ಸಿನ ಮಿತಿ :
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ 40 ವರ್ಷ
• ಪ್ರವರ್ಗ 2A 2B 3A 3B ವರ್ಗದವರಿಗೆ 38 ವರ್ಷ
• ಸಾಮಾನ್ಯ ವರ್ಗಕ್ಕೆ 35 ವರ್ಷ.
ಅಟೆಂಡೆಂಟ್ ಹುದ್ದೆಗಳ ನೇಮಕಾತಿ ವಿಧಾನ
ಆಯ್ಕೆ ವಿಧಾನ:
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ ಮಾಡಲಾಗುತ್ತದೆ.
ಹುದ್ದೆಗಳಿಗೆ ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕು :
ಅರ್ಜಿ ಸಲ್ಲಿಸುವ ವಿಧಾನ :
• ಅಭ್ಯರ್ಥಿಗಳು ಕೋಲಾರ ಜಿಲ್ಲೆಯ ಗ್ರಾಮ ಪಂಚಾಯಿತಿ ಇಲಾಖೆಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು
• ಅಭ್ಯರ್ಥಿಗಳು ಜಿಲ್ಲಾ ಪಂಚಾಯತಿ ಇಲಾಖೆಯಿಂದ ಅಧಿಸೂಚನೆಯಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಸಂಬಂಧಿಸಿದ ಆಯಾ ಗ್ರಾಮ ಪಂಚಾಯಿತಿಗೆ ಸಲ್ಲಿಸಬೇಕು
ಅರ್ಜಿಯ ಶುಲ್ಕ :
ಕೋಲಾರ ಜಿಲ್ಲೆಯ ಗ್ರಾಮ ಪಂಚಾಯತಿ ಇಲಾಖೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 10 ಆಗಸ್ಟ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 24 ಅಗಸ್ಟ್ 2022
ಸೂಚನೆ:
• ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೇವಲ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳ ಮಾತ್ರ ಅರ್ಹತೆಯನ್ನು ಪಡೆದಿರುತ್ತಾರೆ
• ಈ ಉದ್ಯೋಗದ ಸಂಬಂಧ ಪಟ್ಟ ಹೆಚ್ಚಿನ ಮಾಹಿತಿಯನ್ನು ಪಡೆಯಲು ದಯವಿಟ್ಟು ಅಭ್ಯರ್ಥಿಗಳು ಇಲಾಖೆಯೇ ಹೊರಡಿಸಿರುವ ಅಧಿಕೃತ ಅಧಿಸೂಚನೆ ಹಾಗೂ ವೆಬ್ಸೈಟ್ ಮುಖಾಂತರ ಸಂಬಂಧಪಟ್ಟ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನ ಉದ್ಯೋಗ ಮಾಹಿತಿ ಬಳಸುವ ಪ್ರತಿಯೊಬ್ಬ ನಿರುದ್ಯೋಗಿ ಅಭ್ಯರ್ಥಿಗಳಿಗೆ ಶೇರ್ ಮಾಡಿ