ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 12,828 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಉದ್ಯೋಗದ ಸ್ಥಳ ಮುದ್ದಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆ ನೇಮಕಾತಿ
ಹುದ್ದೆಯಹೆಸರು :
1. ಗ್ರಾಮೀಣ ಡಾಕ್ ಸೇವಕ ( ಪೋಸ್ಟ್ ಮ್ಯಾನ್ )
2. ಬ್ರಾಂಚ್ ಪೋಸ್ಟ್ ಮಾಸ್ಟರ್
ಒಟ್ಟು ಹುದ್ದೆಗಳ ಸಂಖ್ಯೆ : ಭಾರತೀಯ ಅಂಚೆ ಇಲಾಖೆಯಲ್ಲಿ ಒಟ್ಟು 12828 ಹುದ್ದೆಗಳ ನೇಮಕಾತಿ ಕುರಿತಾಗಿ ಇಲಾಖೆಯು ಅಧಿಸೂಚನೆಯನ್ನು ಪ್ರಕಟಿಸಿದೆ. ಅದೇ ರೀತಿ ಕರ್ನಾಟಕದಲ್ಲಿ ಒಟ್ಟು 48 ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಉದ್ಯೋಗದ ಸ್ಥಳ : ಹುದ್ದೆಗಳು ಭಾರತಾದ್ಯಂತ ಖಾಲಿ ಇವೆ.
ವಯಸ್ಸಿನ ಮಿತಿ : ಭಾರತೀಯ ಅಂಚೆ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
1. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ
2. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
ವೇತನ ಶ್ರೇಣಿ : ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 12,000 ದಿಂದ 29,380 ವೇತನ ನೀಡಲಾಗುತ್ತದೆ.
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಅಥವಾ ಪೋಸ್ಟ್ ಮ್ಯಾನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10,000 ದಿಂದ 24,470 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ .
ಅರ್ಜಿ ಶುಲ್ಕ :
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 100
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 22 ಮೇ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಜೂನ್ 11 2023
Apply Link : Click
Notificationn Link : Click
ಮುಖ್ಯ ಪದಗಳು :
ಭಾರತೀಯ ಅಂಚೆ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಹಾಗೂ ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ.