EMRS Hostel Warden Recruitment 2023 Notification Out

EMRS Hostel Warden Recruitment 2023 Notification

EMRS Hostel Warden Recruitment 2023 Notification Out  ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು : ಏಕಲವ್ಯ ಮಾದರಿ ವಸತಿ ಶಾಲೆ (EMRS HOSTEL )

ಹುದ್ದೆಗಳ ಹೆಸರು : ಹಾಸ್ಟೆಲ್ ವಾರ್ಡನ್ ( ಪುರುಷ ಮತ್ತು ಮಹಿಳಾ ) ಹಾಸ್ಟೆಲ್ ವಾರ್ಡನ್ ( ಪುರುಷ )

ಒಟ್ಟು ಹುದ್ದೆಗಳ ಸಂಖ್ಯೆ : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 669 ಹುದ್ದೆಗಳು ಖಾಲಿ ಇವೆ.

ಶೈಕ್ಷಣಿಕ ವಿದ್ಯಾರ್ಹತೆ : ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಬೇಕು.

ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29,200 ರಿಂದ 97300 ವೇತನ ಇರುತ್ತದೆ.

ವಯಸ್ಸಿನ ಮಿತಿ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ ವಿವರಣೆ :
1. ಓಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
2. ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ

Join Now

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 1000/+ ರೂಪಾಯಿ ಅರ್ಜಿ ಶುಲ್ಕ ಇರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.

ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳು – ಕರ್ನಾಟಕದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನ ಆಯ್ಕೆ ಮಾಡಿಕೊಳ್ಳಬಹುದು.

ಅರ್ಜಿ ಸಲ್ಲಿಸುವ ವಿಧಾನ :ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 18-07-2023
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 18-08-2023

Apply Link :Click

Notification Link : Click

ಮುಖ್ಯ ಪದಗಳು – ಏಕಲವ್ಯ ಮಾದರಿ ವಸತಿ ಶಾಲೆ ಇಲಾಖೆ ನೇಮಕಾತಿ 2023 ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.

Spread the love