ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿ 2022 ಕರ್ನಾಟಕ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮೋ ಅಥವಾ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ / ಆಯ್ಕೆ ವಿಧಾನ / ಅರ್ಜಿ ಶುಲ್ಕ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಕರ್ನಾಟಕ ಜಲಸಂಪನ್ಮೂಲ ಇಲಾಖೆಯ ಹುದ್ದೆಗಳ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಜಲಸಂಪನ್ಮೂಲ ಇಲಾಖೆ ನೇಮಕಾತಿ
ಹುದ್ದೆಯ ಹೆಸರು :
ಬ್ಯಾಕ್ ಲಾಗ್ ಎರಡನೇ ವಿಭಾಗ ಸಹಾಯಕ ( SDA ) ಗ್ರೂಪ್ ಸಿ ಹುದ್ದೆಗಳ ನೇಮಕಾತಿ
ಒಟ್ಟು ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ ಒಟ್ಟು 155 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಜಲ ಸಂಪನ್ಮೂಲ ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ :
ವಿದ್ಯಾರ್ಹತೆ :
ಜಲ ಸಂಪನ್ಮೂಲ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮೋ ಅಥವಾ ಐಟಿಐ ಪೂರ್ಣಗೊಳಿಸಬೇಕು.
ವೇತನ ಶ್ರೇಣಿ :
ಜಲ ಸಂಪನ್ಮೂಲ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,400 ರಿಂದ 42,000 ವೇತನ ಇರುತ್ತದೆ.
ವಯೋಮಿತಿ :
ಜಲ ಸಂಪನ್ಮೂಲ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 40 ವರ್ಷ ನಿಗದಿಪಡಿಸಲಾಗಿದೆ ಹಾಗೂ ಮೀಸಲಾತಿ ಅನುಗುಣವಾಗಿ ವಯಸ್ಸಿನಲ್ಲಿ ಸಡಿಲಿಕ್ಕೆ ನೀಡಲಾಗಿದೆ.
ಮೀಸಲಾತಿಯ ವಿವರಣೆ :
ಪಿಡಬ್ಲ್ಯೂಡಿ ಅಥವಾ ವಿಧವೆ ಅಭ್ಯರ್ಥಿಗಳಿಗೆ ಹತ್ತು ವರ್ಷ ಸಡಲಿಕೆ ನಿಗದಿಪಡಿಸಲಾಗಿದೆ.
ಜಲ ಸಂಪನ್ಮೂಲ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಆಯ್ಕೆ ವಿವರಣೆ :
ನೇಮಕಾತಿ ವಿಧಾನ :
ಬ್ಯಾಕ್ ಲಾಗ್ 2ನೇ ವಿಭಾಗ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಶೈಕ್ಷಣಿಕ ವಿದ್ಯಾರ್ಥಿಯಲ್ಲಿ ಪದದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿಯ ಶುಲ್ಕ :
ಕರ್ನಾಟಕ ಜಲಸಂಪನ್ಮೂಲ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಸಂಪೂರ್ಣವಾಗಿ ಇಲಾಖೆಯು ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಿದೆ.
ಉದ್ಯೋಗದ ಸ್ಥಳ :- ಬೆಂಗಳೂರು ( ಕರ್ನಾಟಕ )
ಕರ್ನಾಟಕ ಜಲಸಂಪನ್ಮೂಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 26 ಸಪ್ಟಂಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 25 ಅಕ್ಟೋಬರ್ 2022
ಸೂಚನೆ :
ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ತದನಂತರ ಅರ್ಜಿಯನ್ನು ಸಲ್ಲಿಸಬೇಕು.
ಮುಖ್ಯ ಪದಗಳು :
ನಾವು ನೀಡಿರುವ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ
ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ :
ದೂರವಾಣಿ ಸಂಖ್ಯೆ :
080 22871174 / 080 22871094 / 080 22872247
ಅರ್ಜಿ ಸಲ್ಲಿಸಲು ಕೈಗೊಳ್ಳಬೇಕಾದ ಕ್ರಮಗಳು :
• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೇನೆ ಎಂದು ಖಚಿತಪಡಿಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಬೇಕು
• ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸುವ ಮೊದಲು ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಹಾಗೂ ಶೈಕ್ಷಣಿಕ ಅರ್ಹತೆ ಎಲ್ಲಾ ದಾಖಲಾತಿಗಳನ್ನು ಸಿದ್ಧಪಡಿಸಿಕೊಳ್ಳಿ
• ಜಲಸಂಪನ್ಮೂಲ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಪ್ರವೇಶಿಸಿ ಅಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ ತದನಂತರ ಅರ್ಜಿಯನ್ನು ಸಲ್ಲಿಸಲು ಮುಂದುವರೆಯಿರಿ.
• ನಿಮ್ಮ ಬಳಿ ಇರುವ ಎಲ್ಲಾ ದಾಖಲಾತಿ ಮತ್ತು ಭಾವಚಿತ್ರ ನಿಮ್ಮ ಹೆಬ್ಬೆಟ್ಟಿನ ಗುರುತು ಸಹಿ ಎಲ್ಲವನ್ನ ಸ್ಕ್ಯಾನ್ ಮಾಡಿ.
• ತದನಂತರ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಮುದ್ರಣ ಮಾಡಿಕೊಳ್ಳಿ
ಈ ಅಂತರ್ಜಾಲದ ಮುಖ್ಯ ಉದ್ದೇಶ :
• ಈ ಅಂತರ್ಜಾಲವೂ ಹಲವಾರು ನಿರುದ್ಯೋಗಿಗಳು ಬಯಸುವ ಉದ್ಯೋಗದ ಮಾಹಿತಿಯನ್ನು ಉಚಿತವಾಗಿ ಮತ್ತು ಖಚಿತವಾದ ಮಾಹಿತಿಯನ್ನ ನೀಡುವ ಒಂದು ಅಂತರಜಾಲವಾಗಿದೆ.
• ಈ ಜಾಲದಲ್ಲಿ ಯಾವುದೇ ರೀತಿಯ ಕೆಟ್ಟ ಚಟುವಟಿಕೆಗಳು ಅಥವಾ ಕೆಟ್ಟ ವಿಚಾರಗಳನ್ನು ಪ್ರೋತ್ಸಾಹಿಸುವುದಿಲ್ಲ.
• ಈ ಅಂತರಜಾಲ ಹಲವಾರು ನಿರುದ್ಯೋಗಿಗಳಿಗೆ ಉತ್ತಮವಾದ ಅಂತರ್ಜಾಲವಾಗಿ ಉತ್ತಮವಾದ ಪ್ರಕ್ರಿಯೆ ಪಡೆದುಕೊಂಡಿರುತ್ತದೆ.
• ಕರ್ನಾಟಕ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಮತ್ತು ಖಾಸಗಿ ಉದ್ಯೋಗದ ಮಾಹಿತಿಯನ್ನು ಈ ಅಂತರ್ಜಾಲದಲ್ಲಿ ಪ್ರಕಟಿಸಲಾಗುತ್ತದೆ.