ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ 2022 ಪಂಚಾಯತಿಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್, ಕ್ಲೀನರ್ ಅಥವಾ ಸೇವಕ ಹುದ್ದೆಗಳಿಗೆ ಖಾಲಿ ಇರುವ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಸಂಬಂಧಿಸಿದ ಉದ್ಯೋಗದ ಸ್ಥಳ / ಶೈಕ್ಷಣಿಕ ಅರ್ಹತೆ / ವಯೋಮಾನ ಮಿತಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆಯ ಹೆಸರು :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್
ಹುದ್ದೆಗಳ ಹೆಸರು :
• ಕರವಸೂಲಿಗರು : 3 ಹುದ್ದೆಗಳು
• ಡಾಟಾ ಎಂಟ್ರಿ ಆಪರೇಟರ್ : 3 ಹುದ್ದೆಗಳು
• ಅಟೆಂಡೆಂಟ್ : 10 ಹುದ್ದೆಗಳು
• ಕ್ಲೀನರ್ / ಜವಾನ : 49 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಒಟ್ಟು 65 ಹುದ್ದೆಗಳು ಖಾಲಿ ಇದ್ದು ಬೆಂಗಳೂರು ಗ್ರಾಮಾಂತರ ಪಂಚಾಯತ್ ಜಿಲ್ಲೆಯು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ :
ಶೈಕ್ಷಣಿಕ ವಿದ್ಯಾರ್ಹತೆ :
ಕರವಸೂಲಿಗಾರರು :
• ಕನ್ನಡವನ್ನು ಒಂದು ವಿಷಯವನ್ನಾಗಿ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು
ಡೇಟಾ ಎಂಟ್ರಿ ಆಪರೇಟರ್ :
• ಕನ್ನಡವನ್ನು ಒಂದು ವಿಷಯವನ್ನಾಗಿ ಪಿಯುಸಿ ಅಥವಾ ತಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಕಂಪ್ಯೂಟರ್ ತರಬೇತಿ ಘೋಸ್ಟ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
• ಆಯ್ಕೆ ಸಮಿತಿಯು ನಡೆಸುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕೆರಗಡೆ ಹೊಂದಿರಬೇಕು.
• ಅರ್ಹತಾ ಪರೀಕ್ಷೆಯಲ್ಲಿ ಪಡೆದ ಶೇಕಡ 50 ಅಂಕಗಳನ್ನು ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಶೇಕಡ 50ರಷ್ಟು ಅಂಕಗಳನ್ನು ಒಳಗೊಂಡಿರುವ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅಟೆಂಡೆಂಟ್ ಮತ್ತು ಕ್ಲೀನರ್ ಅಥವಾ ಸೇವಕ :
ಕನ್ನಡವನ್ನು ಒಂದು ವಿಷಯವನ್ನಾಗಿ ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕರ ಇಲಾಖೆಯಿಂದ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ನೀಡಲಾಗುತ್ತದೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ನಿಗದಿಪಡಿಸಿದ ಮಿತಿ:
ವಯಸ್ಸಿನ ಮಿತಿ :
ಸಾಮಾನ್ಯ ವರ್ಗದವರಿಗೆ : ಗರಿಷ್ಠ 35 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ಗರಿಷ್ಠ 38 ವರ್ಷ
ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 40 ವರ್ಷ
ಆಯ್ಕೆ ವಿಧಾನ :
ಕರವಸೂಲಿಗಾರರು ಮತ್ತು ಅಟೆಂಡೆಂಟ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯು ಶೈಕ್ಷಣಿಕ ವಿದ್ಯಾರ್ಥಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದಂತ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ವಿವರಣೆ :
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.200
ಪ್ರಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿ
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 30 ಸೆಪ್ಟೆಂಬರ್ 2022 ಆಗಿದೆ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 20 ಅಕ್ಟೋಬರ್ 2022
ಸೂಚನೆ :
ಅರ್ಜಿಗಳನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪಂಚಾಯತ್ ಇಲಾಖೆಯ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಅಥವಾ ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ.
Data entry operator