Post Office Recruitment 2022 | 98,083 Post Man Jobs In Post Office | 10th Pass Jobs in Post Office

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 ಅಂಚೆ ಇಲಾಖೆಯಲ್ಲಿ ಖಾಲಿ ಇರುವ 98,083 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಕರ್ನಾಟಕದ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಕೇವಲ 10ನೇ ತರಗತಿ ದ್ವಿತೀಯ ಪಿಯುಸಿ ಹಾಗೂ ಪದವಿ ಶೈಕ್ಷಣಿಕ ವಿದ್ಯಾರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ ಹುದ್ದೆಗಳಿಗೆ ಸಂಬಂಧಿಸಿದ ಉದ್ಯೋಗದ ಸ್ಥಳ / ಆಯ್ಕೆ ವಿಧಾನ /ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 ಅಂಚೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :

ನೇಮಕಾತಿ ಇಲಾಖೆಯ ಹೆಸರು :
ಭಾರತೀಯ ಅಂಚೆ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
• ಪೋಸ್ಟ್ ಮ್ಯಾನ್
• MTS
• ಮೇಲ್ ಕಾವಲುಗಾರ

ಒಟ್ಟು ಹುದ್ದೆಗಳ ಸಂಖ್ಯೆ :
• ಪೋಸ್ಟ್ ಮ್ಯಾನ್ : 59099 ಹುದ್ದೆಗಳು
• MTS : 37539 ಹುದ್ದೆಗಳು
• ಮೇಲ್ ಕಾವಲುಗಾರ : 1445 ಹುದ್ದೆಗಳು

ಭಾರತೀಯ ಅಂಚೆ ಇಲಾಖೆಯಲ್ಲಿ ಒಟ್ಟು 98,083 ಹುದ್ದೆಗಳು ಖಾಲಿ ಇವೆ

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 ವಿದ್ಯೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :

ಶೈಕ್ಷಣಿಕ ವಿದ್ಯಾರ್ಹತೆ :

• ಪೋಸ್ಟ್ ಮ್ಯಾನ್ :
ಪೋಸ್ಟ್ ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

• ಮಲ್ಟಿ ಟಾಸ್ಕಿಂಗ್ ಸ್ಟಾಪ್ :
ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹೀಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು ಇದರ ಜೊತೆಗೆ ಕಂಪ್ಯೂಟರ್ ಕೌಶಲ್ಯಗಳನ್ನು ಪಡೆದಿರಬೇಕು.

Join Now

• ಮೇಲ್ ಕಾವಲುಗಾರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು ಇದರ ಜೊತೆಗೆ ಮೂಲಭೂತ ಕಂಪ್ಯೂಟರ್ ಕೌಶಲ್ಯಗಳನ್ನು ಪಡೆದಿರಬೇಕು.

ಭಾರತೀಯ ಅಂಚೆ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿಯ ವಿವರಣೆ :

ಸಂಬಳ :
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ನಿಗದಿಪಡಿಸಲಾಗಿದೆ.

ವಯೋಮಿತಿಯ ವಿವರಣೆ :
ಭಾರತೀಯ ಅಂಚೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 32 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯಸ್ಸಿನಲ್ಲಿ ಸಿಡಿಲಿಕ್ಕೆ ನೀಡಲಾಗಿದೆ ಸಡಿಲಿಕೆ ವಿವರಣೆ ಈ ಕೆಳಗಿನಂತೆ ತಿಳಿಸಲಾಗಿದೆ.

ವಯೋಮಿತಿಯ ಸಡಿಲಿಕೆ ವಿವರಣೆ :

• ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ
• ಆರ್ಥಿಕವಾಗಿ ದುರ್ಬಲ ವಿಭಾಗವಾದ ( EWS ) ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ

( ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ)

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ಪ್ರಕ್ರಿಯೆಯ‌ ವಿವರಣೆ:

ಆಯ್ಕೆ ವಿಧಾನ :
ಭಾರತೀಯ ಅಂಚೆ ಇಲಾಖೆಯ ಹುದ್ದೆಗಳಾದ ಪೋಸ್ಟ್ ಮ್ಯಾನ್ / ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹಾಗೂ ಮೇಲ್ ಕಾವಲುಗಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ವಿಧ್ಯಾರ್ಥಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಪ್ರಕಟಣೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿ ಹಾಗೂ ಅರ್ಜಿ ಸಲ್ಲಿಕೆ ವಿವರಣೆ :

• ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನೀಡಿರುವ ಅರ್ಹತಾ ಮಾನದಂಡಗಳನ್ನು ಗಮನಿಸಿ ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಲು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.

• ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ವಿವರಗಳಾದ 10ನೇ ತರಗತಿಯ ಅಂಕಪಟ್ಟಿ ಜೆರಾಕ್ಸ್ ಪ್ರತಿ / ದ್ವಿತೀಯ ಪಿಯುಸಿಗೆ ಸಂಬಂಧಿಸಿದ ಅಂಕ ಪಟ್ಟಿಗಳ ಜೆರಾಕ್ಸ್ ಪ್ರತಿ ನಿಮ್ಮ ದೂರವಾಣಿ ಸಂಖ್ಯೆ ಹಾಗೂ ನಿಮ್ಮ ಇಮೇಲ್ ಐಡಿಯನ್ನು ಸಿದ್ಧಪಡಿಸಿಕೊಳ್ಳಿ.

• ಅರ್ಜಿ ನಮೂನೆಯಲ್ಲಿ ಕೇಳಲಾದ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಇಲಾಖೆಯು ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲ ಅಂದರೆ ಈ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕಗಳನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುತ್ತದೆ

ಅಧಿಸೂಚನೆ : Click

ಹುದ್ದೆಗಳಿಗೆ ಸಂಬಂಧಿಸಿದ ಹಾಗೂ ಇಲಾಖೆ ಹೊರಡಿಸಿರುವ ಅಧಿಸೂಚನೆಯ ಲಿಂಕನ್ನ ಕೆಳಗಡೆ ನೀಡಿದ್ದೇನೆ ಅದನ್ನ ಸರಿಯಾಗಿ ಗಮನವಿಟ್ಟು ಓದಿ

ಸೂಚನೆ :
ಭಾರತೀಯ ಅಂಚೆ ಇಲಾಖೆ ಹುದ್ದೆಗಳಾದ ಪೋಸ್ಟ್ ಮ್ಯಾನ್ / ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹಾಗೂ ಮೇಲ್ ಕಾವಲುಗಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅರ್ಜಿ ಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನ ಶೇರ್ ಮಾಡಿ.

ಪುನಃ ಬೇಟಿ ನೀಡಿ

Spread the love