ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ (KPSC) ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ ಅಡಿಯಲ್ಲಿ ಬರುವ ವಿದ್ಯುತ್ ಪರಿವೀಕ್ಷಣಾಲಯ ಇಲಾಖೆಯಲ್ಲಿ ಖಾಲಿ ಇರುವಂತ ಸಹಾಯಕ ವಿದ್ಯುತ್ ಪರಿವೀಕ್ಷಕ ಹುದ್ದೆಗಳ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ ಹುದ್ದೆಗಳ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಲೋಕಸೇವಾ ಆಯೋಗ ( KPSC )
ಒಟ್ಟು ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ ಒಟ್ಟು 32 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ :
ಸಹಾಯಕ ವಿದ್ಯುತ್ ಪರಿವೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯ ಪಡೆದ ಸಂಸ್ಥೆಯಿಂದ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಥವಾ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಸಹಾಯಕ ವಿದ್ಯುತ್ ಪರಿವೀಕ್ಷಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43100-83900 ರೂಪಾಯಿ ವೇತನ ಇರುತ್ತದೆ.
ವಯೋಮಿತಿಯಲ್ಲಿ ಸಡಲಿಕೆ :
ಪ್ರವರ್ಗ 2A 2B 3A 3B ವರ್ಗದವರಿಗೆ 38 ವರ್ಷಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ವಿವರಣೆ :
ನೇಮಕಾತಿ ವಿಧಾನ :
ಇಲಾಖೆಯ ನಿಯಮಗಳ ಪ್ರಕಾರ ನಡೆಸಲಾಗುವ ಸ್ಪರ್ಧಾತಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮ ಅನುಸಾರ ಆಯ್ಕೆ ಮಾಡಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ :
ಸಾಮಾನ್ಯ ಪತ್ರಿಕೆ 300 ಅಂಕಗಳನ್ನು ಒಳಗೊಂಡಿರುತ್ತದೆ ಅಭ್ಯರ್ಥಿಗಳು ಒಂದು ಗಂಟೆ 30 ನಿಮಿಷದ ಅವಧಿಯಲ್ಲಿ ಈ ಪತ್ರಿಕೆಯನ್ನು ಪೂರ್ಣಗೊಳಿಸಬೇಕು. ಹಾಗೂ ನಿರ್ದಿಷ್ಟ ಪತ್ರಿಕೆ ಇದು 300 ಅಂಕಗಳನ್ನು ಒಳಗೊಂಡಿರುತ್ತದೆ ಇದನ್ನ ಅಭ್ಯರ್ಥಿಗಳು ಎರಡು ಗಂಟೆಯ ಅವಧಿಯಲ್ಲಿ ಬರೆಯಬೇಕು
ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಮಾತ್ರ ಇರುತ್ತವೆ.
ಅರ್ಜಿ ಸಲ್ಲಿಸುವ ವಿಧಾನ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದವರಿಗೆ 600 ರೂಪಾಯಿ
2A 2B 3A 3B ಅಭ್ಯರ್ಥಿಗಳಿಗೆ ರೂ.300
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ 25 ಜುಲೈ 2022
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 23 ಆಗಸ್ಟ್ 2022
ಉದ್ಯೋಗಕ್ಕೆ ಸಂಬಂಧಿಸಿದ ಇತರೆ ಅರ್ಹತೆಗಳು
ಅರ್ಹತಾ ಷರತ್ತುಗಳು:
1) ಭಾರತೀಯ ನಾಗರಿಕನಾಗಿರತಕ್ಕದ್ದು
2) ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿಗಳು ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುವುದಿಲ್ಲ.
3) ಅಭ್ಯರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಹಾಗೂ ಅದರ ನೇಮಕಾತಿ ಕರ್ತವ್ಯಗಳ ಬಗ್ಗೆ ದಕ್ಷ ನಿರ್ವಹಣೆ ಆತಂಕವನ್ನು ಉಂಟುಮಾಡುವ ಸಂಭವ ಇರುವ ಯಾವುದೇ ಮಾನಸಿಕ ನ್ಯೂನತೆಯನ್ನು ಹೊಂದಿರಬಾರದು.
4) ಕನ್ನಡ ಭಾಷೆ ಕಡ್ಡಾಯವಾಗಿ ಬರಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆಗಳು
1) ಕೇಂದ್ರ ಕಚೇರಿ ಮಾಹಿತಿ ಕೇಂದ್ರ : 080-30574957/ 30574901
2) ಪ್ರಾಂತೀಯ ಕಚೇರಿ ಬೆಳಗಾವಿ : 0831-2475345
3) ಪ್ರಾಂತೀಯ ಕಚೇರಿ ಮೈಸೂರು 6: 0821-2545956
ಸೂಚನೆ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಜಲತಾಣ ಹಾಗೂ ಅಧಿಕೃತ ಅಧಿ ಸೂಚನೆ ಗಮನಿಸಿ ಅದನ್ನ ಸರಿಯಾಗಿ ಓದಿ ಅರ್ಥ ಮಾಡಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಹಾಗೂ ಈ ಮಾಹಿತಿಯನ್ನು ಉದ್ಯೋಗದ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಆದಷ್ಟು ಶೇರ್ ಮಾಡಿ