ರಾಷ್ಟ್ರೀಯ ಆರೋಗ್ಯ ಮಿಷನ್ ಉತ್ತರ ಪ್ರದೇಶ ಸಮುದಾಯವು ಆರೋಗ್ಯ ಅಧಿಕಾರಿ ಹುದ್ದೆಗಳ ನೇಮಕಾತಿ ಕುರಿತಾಗಿ ಇಲಾಖೆಯಿಂದ ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳು ಪುರುಷ ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳು ನೇಮಕಾತಿ ಭಾರತಾದ್ಯಂತ ನಡೆಯುತ್ತದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಯಾವ ರೀತಿಯಾದ ಶೈಕ್ಷಣಿಕ ಅರ್ಹತೆ, ಆಯ್ಕೆ ಪ್ರಕ್ರಿಯೆ, ವೇತನ ಶ್ರೇಣಿ ಇರುತ್ತದೆ ಎಂಬುದರ ಕುರಿತಾದ ಮುಂತಾದ ಮಾಹಿತಿಯನ್ನು ಸಂಪೂರ್ಣವಾಗಿ ಈ ಕೆಳಗಿನಂತೆ ವಿವರಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಮಿಷನ್ ಹುದ್ದೆಗಳ ಕುರಿತಾದ ವಿವರಣೆ :
ನೇಮಕಾತಿ ಇಲಾಖೆಯ ಹೆಸರು :
ರಾಷ್ಟ್ರೀಯ ಆರೋಗ್ಯ ಮಿಷನ್ ಉತ್ತರ ಪ್ರದೇಶ
ಹುದ್ದೆಗಳ ಹೆಸರು :
ಸಮುದಾಯ ಆರೋಗ್ಯ ಅಧಿಕಾರಿ
ಒಟ್ಟುಗಳ ಹುದ್ದೆಗಳ ಸಂಖ್ಯೆ :
Category No. of Posts
Unreserved 2202
EWS 550
OBC 1486
SC 1157
ST 110
Total : 5505
ರಾಷ್ಟ್ರೀಯ ಆರೋಗ್ಯ ಮಿಷನ್ ಉತ್ತರ ಪ್ರದೇಶ ಇಲಾಖೆಯಲ್ಲಿ ಒಟ್ಟು 5505 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ
ಶೈಕ್ಷಣಿಕ ವಿದ್ಯಾರ್ಹತೆ :
ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಬಿಎಸ್ಸಿ ನರ್ಸಿಂಗ್ ಪೂರ್ಣಗೊಳಿಸಬೇಕು. ಅಥವಾ ಅಭ್ಯರ್ಥಿಯು ಜನರಲ್ ನರ್ಸಿಂಗ್ ಮತ್ತು ಮಿಡ್ವೈಫರಿ (GNM) ನಲ್ಲಿ ಪದವಿಯನ್ನು ಹೊಂದಿರಬೇಕು
ವಯಸ್ಸಿನ ಮಿತಿ :
ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂಪಾಯಿ 35000 ನೀಡಲಾಗುತ್ತದೆ.
ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳ ಆಯ್ಕೆ ವಿಧಾನ
ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ :
ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 20 ಜುಲೈ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 9 ಆಗಸ್ಟ್ 2022.
ಅರ್ಜಿ ಸಲ್ಲಿಸುವುದು ಹೇಗೆ ?
ಅರ್ಜಿ ಸಲ್ಲಿಸುವ ವಿಧಾನ :
ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನ ಆನ್ಲೈನ್ ಮೂಲಕ ಸಲ್ಲಿಸಬೇಕು.
1) ಅಭ್ಯರ್ಥಿಗಳು ಮೊದಲನೇದಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ ಆದ www.upnhm.gov.in login ಮಾಡಿಕೊಳ್ಳಿ
2) ನೇಮಕಾತಿ ಅಧಿಸೂಚನೆಯ ಮೂಲಕ ಹೋಗಿ ಮತ್ತು ಕೆಳಗಡೆ ನೀಡಲಾದ ಎಲ್ಲಾಕಯ ಅಧಿಕೃತ ಅಧಿಸೂಚನೆಯ ಲಿಂಕನ್ನು ಕ್ಲಿಕ್ ಮಾಡುವ ಮೂಲಕ ಹುದ್ದೆಗಳಿಗೆ ಸಂಬಂಧಪಟ್ಟ ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆ / ನೇ ಎಂಬುದನ್ನ ಖಚಿತಪಡಿಸಿಕೊಳ್ಳಿ.
3) ತದನಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಎಂಬುದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಲಾದ ವಿವರಗಳನ್ನು ನಮೂದಿಸಿ.
4) ನಂತರ ಅರ್ಜಿ ನಮೂನೆಯ ಮುದ್ರಣ ತೆಗೆದುಕೊಳ್ಳಿ.
ಸೂಚನೆ :
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಮತ್ತು ಇಲಾಖೆಯ ಅಧಿಕೃತ ಅಧಿ ಸೂಚನೆ ಲಿಂಕನ್ನು ಗಮನಿಸಿ ಅದನ್ನ ಪೂರ್ಣವಾಗಿ ಓದಿ ಅರ್ಥ ಮಾಡಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ವಿಡಿಯೋವನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ ಹಾಗೂ ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ