BBMP recruitment 2023 – Apply Offline for 3673 PouraKarmika – Group D Posts Expain In Kannada
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 3673 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ವಿದ್ಯಾರ್ಥಿ ಇರುವುದಿಲ್ಲ ನೇಲ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನದ ಸರಕಾರಿ ಉದ್ಯೋಗಗಳ ಮಾಹಿತಿಯನ್ನು ಪಡೆಯಲು www.karnatakanewshunter.com ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
BBMP Vacancy Notification 2023
ನೇಮಕಾತಿ ಇಲಾಖೆ ಹೆಸರು :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( BBMP )
ಹುದ್ದೆಗಳ ಹೆಸರು :
ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಇಲಾಖೆಯಲ್ಲಿ ಪೌರ ಕಾರ್ಮಿಕ – ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ :
ಸ್ಥಳೀಯ ವೃಂದದ ಹುದ್ದೆಗಳು ( kk ) ಕಲ್ಯಾಣ ಕರ್ನಾಟಕ – 430 ಹುದ್ದೆಗಳು.
ಉಳಿಕೆ ಮೂಲ ವೃಂದದ ಹುದ್ದೆಗಳು : ( RRC ) 3243 ಹುದ್ದೆಗಳು.
ಬಿಬಿಎಂಪಿಯಲ್ಲಿ ಒಟ್ಟು 3673 ಹುದ್ದೆಗಳು ಖಾಲಿ ಇವೆ.
BBMP PouraKarmika Recruitment 2023 Eligibility Details 2023
ವೇತನ ಶ್ರೇಣಿ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗ್ರೂಪ್ ಡಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಪ್ರತಿ ತಿಂಗಳಾಗಿ 17,000 – 28,950/-ವೇತನ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ / ಕಲ್ಯಾಣ /ದಿನಗೂಲಿ ಆಧಾರದ ಮೇಲೆ ಪೌರ ಕಾರ್ಮಿಕರಾಗಿ ಕನಿಷ್ಠ ಎರಡು ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಬೇಕಾಗಿರುವುದಿಲ್ಲ.
ವಯೋಮಿತಿ ವಿವರಣೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆ ನೇಮಕಾತಿ 2023ರ ಅಧೀಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 55 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಿದೆ.
ವಯೋಮಿತಿ ಸಡಿಲಿಕೆ ವಿವರಣೆ :
ಓಬಿಸಿ ಅಥವಾ ಹಿಂದುಳಿದ ವರ್ಗದವರಿಗೆ : 55 ವರ್ಷಗಳು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ವರ್ಗದವರಿಗೆ : 55 ವರ್ಷಗಳು.
ಅರ್ಜಿ ಶುಲ್ಕ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿಯ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ಮಾಡುವ ವಿಧಾನ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಅನುಭವ ಮತ್ತು ಮೀಸಲಾತಿ ಅನ್ವಯ ಅರ್ಹತಾ ಪಟ್ಟಿ ತಯಾರಿಸಿ ಆಯ್ಕೆ ಮಾಡಲಾಗುತ್ತದೆ.
How to apply for BBMP Recruitment (PouraKarmika – Group D) Jobs
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಅರ್ಜಿಯನ್ನು ವೆಬ್ಸೈಟ್ ಲಭ್ಯ ಇರುವ ಅರ್ಜಿ ಡೌನ್ಲೋಡ್ ಮಾಡಿಕೊಂಡು ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ( ಘಣತಾಜ್ಯ ನಿರ್ವಹಣೆ ) ಕಚೇರಿಯಲ್ಲಿ ಬೆಳಗ್ಗೆ 10:00 ಗಂಟೆಯಿಂದ 05-30 ಗಂಟೆ ಒಳಗೆ ಸಲ್ಲಿಸತಕ್ಕದ್ದು.
ಅಭ್ಯರ್ಥಿಯು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಪಾಲಿಕೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಪಾಲಿಕೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : ಜನವರಿ 16, 2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : ಜನವರಿ 30, 2023
Apply Form : Click
Notification Link : Click
ಸೂಚನೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಗಳಿಗೆ ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರವೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.