ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಪಶು ವೈದ್ಯಕೀಯ ಪರಿವೀಕ್ಷಕರು ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು ಕರ್ನಾಟಕದಲ್ಲಿ ಖಾಲಿ ಇವೆ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ / ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಹುದ್ದೆಗಳ ಪ್ರಮುಖ ಮಾಹಿತಿ
ನೇಮಕಾತಿ ಇಲಾಖೆ ಹೆಸರು :
ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆ ನೇಮಕಾತಿ
ಹುದ್ದೆಯ ಹೆಸರು :
ಕಿರಿಯ ಪಶು ವೈದ್ಯಕೀಯ ಪರಿವೀಕ್ಷಕರು ( ಪಶು ವೈದ್ಯಕೀಯ ಸಹಾಯಕರು )
ಒಟ್ಟು ಹುದ್ದೆಗಳ ಸಂಖ್ಯೆ :
ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯಲ್ಲಿ 250 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ :
ಶೈಕ್ಷಣಿಕ ವಿದ್ಯಾರ್ಹತೆ:
ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ BVSC, BVSC ( AH ) / B.SC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕು.
ವಯಸ್ಸಿನ ಮಿತಿ :
ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು ಹಾಗೂ ಮೀಸಲಾತಿಯ ಅನುಗುಣವಾಗಿ ವಯಸ್ಸಿನಲ್ಲಿ ಸಡಿಲಿಕೆ ಇರುತ್ತದೆ.
ವಯೋಮಿತಿಯಲ್ಲಿ ಸಡಿಲಿಕೆಯ ವಿವರಣೆ :
2A 2B 3A 3B ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇರುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷ ಸಡಲಿಕೆಇರುತ್ತದೆ.
ವೇತನ ಶ್ರೇಣಿ :
ಕಿರಿಯ ಪಶು ವೈದ್ಯಕೀಯ ಪರಿವೀಕ್ಷಕರು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ನಿಯಮಗಳು ಅನುಸಾರ 21,400-42,000/-ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಉದ್ಯೋಗದ ಸ್ಥಳ : ಈ ಹುದ್ದೆಗಳು ಕರ್ನಾಟಕದಲ್ಲಿ ಖಾಲಿ ಇರುತ್ತದೆ.
ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ವಿವರಣೆ :
ಸಾಮಾನ್ಯ ವರ್ಗ 2A 2B 3A 3B ವರ್ಗದ ಅಭ್ಯರ್ಥಿಗಳಿಗೆ 750 ರೂಪಾಯಿ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 500/-ರೂಪಾಯಿ
ಪಶು ವೈದ್ಯಕೀಯ ಸಹಾಯಕ ಹುದ್ದೆಯ ಆಯ್ಕೆ ವಿಧಾನದ ಪ್ರಕ್ರಿಯೆ :
ನೇಮಕಾತಿಯ ವಿಧಾನ :
ಪಶು ವೈದ್ಯಕೀಯ ಸಹಾಯಕ ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ( ಕನ್ನಡ ಕಡ್ಡಾಯ ಭಾಷೆ ಪರೀಕ್ಷೆ )
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಪಶು ವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 5 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 4 ನವಂಬರ್ 2022
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಲ್ಲಿ ಯಾವುದೇ ತಾಂತ್ರಿಕ ತೊಂದರೆಯುಂಟಾದಲ್ಲಿ ಇಲಾಖೆಯ ಸಹಾಯವಾಣಿ ಸಂಖ್ಯೆ 080-23460460 ಈ ದೂರವಾಣಿಯ ಮೂಲಕ ಸಂಪರ್ಕಿಸಬಹುದು.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಸೂಚನೆಗಳು :
ಹುದ್ದೆಗಳಿಗೆ ನಿಗದಿಪಡಿಸಿರುವ ವಯೋಮಿತಿ ವಿದ್ಯಾರ್ಹತೆ ಮೀಸಲಾತಿ ಇತ್ಯಾದಿ ಅನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ ತಪ್ಪು ಮಾಹಿತಿ ನೀಡಿದಲ್ಲಿ ಅಂತಹ ಅಭ್ಯರ್ಥಿಗಳನ್ನ ಪ್ರಾಧಿಕಾರವು ನಡೆಸುವ ಯಾವುದೇ ನೇಮಕಾತಿ ಅಥವಾ ಪರೀಕ್ಷೆಗಳಿಂದ ಮೂರು ವರ್ಷಕ್ಕೆ ಡಿಬಾರ್ ಮಾಡಲಾಗುವುದು ಆದ್ದರಿಂದ ಅರ್ಜಿ ಸಲ್ಲಿಸುವ ಮುನ್ನ ಅವರು ನೀಡುವ ಎಲ್ಲಾ ಮಾಹಿತಿಯು ಸರಿಯಾಗಿದೆ ಎಂದು ಖಚಿತ ಪಡಿಸಿಕೊಂಡು ದುಡಿಕರಿಸಿ ತದನಂತರ ಅರ್ಜಿಯನ್ನು ಸಲ್ಲಿಸಿ. ಅರ್ಜಿಯನ್ನು ಸಲ್ಲಿಸುವಾಗ ಎಚ್ಚರವಹಿಸಬೇಕೆಂದು ಇಲಾಖೆ ತಿಳಿಸಿದೆ
Notification Link : Click
Apply Link : Click
ಸೂಚನೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಆನಂತರವೇ ಅರ್ಜಿಯನ್ನು ಸಲ್ಲಿಸಿ ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ವಿವರಗಳನ್ನು ತಿದ್ದುಪಡಿ ಅಥವಾ ಸೇರ್ಪಡೆ ಮಾಡುವಂತೆ ಯಾವುದೇ ಅವಕಾಶ ಇರುವುದಿಲ್ಲ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನ ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ. ಆದಷ್ಟು ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಯಾಗಿ ಶೇರ್ ಮಾಡಿ.