Anganawadi Teacher jobs 2022 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವಂತ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನ ವ್ಯಾಪ್ತಿಯಲ್ಲಿ ಈ ಕೆಳಗೆ ಕಾಣಿಸಲಾದ ಗ್ರಾಮಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಬೇಕಾಗಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಗೌರವ ಸೇವೆ ಸಲ್ಲಿಸಲು ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನ ಸಲ್ಲಿಸಬೇಕು.
ನೇಮಕಾತಿ ಇಲಾಖೆ ಹೆಸರು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಾವಣಗೆರೆ
ಹುದ್ದೆಗಳ ಹೆಸರು :
ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ
01 | ಅಂಗನವಾಡಿ ಕಾರ್ಯಕರ್ತೆ : | 12 ಹುದ್ದೆಗಳು |
02 | ಅಂಗನವಾಡಿ ಸಹಾಯಕಿ : | 72 ಹುದ್ದೆಗಳು |
ಒಟ್ಟು ಹುದ್ದೆಗಳ ಸಂಖ್ಯೆ :
ಅಂಗನವಾಡಿ ಕಾರ್ಯಕರ್ತೆ : 12 ಹುದ್ದೆಗಳು
ಅಂಗನವಾಡಿ ಸಹಾಯಕಿ : 72 ಹುದ್ದೆಗಳು
ಇಲಾಖೆಯಲ್ಲಿ ಒಟ್ಟು 84 ಹುದ್ದೆಗಳ ನೇಮಕಾತಿ ನಡೆಯುತ್ತಿದೆ
ವಿದ್ಯಾರ್ಹತೆ :
ಅಂಗನವಾಡಿ ಸಹಾಯಕಿ ಹುದ್ದೆಗೆ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ಅಥವಾ 9ನೇ ತರಗತಿಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವೇತನ ಶ್ರೇಣಿ :
ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಗೌರವಧನ ಆಧಾರದ ಮೇಲೆ ಮಾಸಿಕವಾಗಿ 5000 ದಿಂದ 10,000 ವೇತನ ಇರುತ್ತದೆ.
ವಯಸ್ಸಿನ ಮಿತಿ :
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
18 ರಿಂದ 45 ವರ್ಷದೊಳಗಿನ ವಿಕಲ ಚೇತನ ವರ್ಗದ ಅರ್ಹ ಸ್ಥಳೀಯ ( ಅದೇ ಗ್ರಾಮದ ) ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಈ ಕೆಳಗೆ ತೋರಿಸಲಾದ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಶುಲ್ಕ :
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
- ಸೂಚನೆ :
1) ಅಂಗನವಾಡಿ ಸಹಾಯಕಿ ಹುದ್ದೆಗೆ ಹಾಗೂ ಕಾರ್ಯಕರ್ತೆ ಹುದ್ದೆಗೆ ಕೇವಲ ಮಹಿಳಾ ವರ್ಗದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.
2) ವಿಧವಾ ಮಹಿಳಾ ವರ್ಗದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ಇರುತ್ತದೆ.
3) ಯಾಸಿಡ್ ದಾಳಿಗೆ ತುತ್ತಾದ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ಇರುತ್ತದೆ.
ಆಯ್ಕೆ ವಿಧಾನ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ನಿಯಮದ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ಜಾಲತಾಣ ಅಥವಾ ವೆಬ್ಸೈಟ್ ಪ್ರವೇಶಿಸಿ ಅರ್ಜಿಯನ್ನ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
ಆಸಕ್ತಿ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ದಿನಾಂಕ 29-06-2022 ರಿಂದ 29-07-2022 ತನಕ ಅರ್ಜಿ ಸಲ್ಲಿಸಬಹುದು.
- ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು :
1) ಮಾಹಿತಿ ಭರ್ತಿ ಮಾಡಿದ ಅರ್ಜಿ ನಮೂನೆ
2) ಜನನ ಪ್ರಮಾಣ ಪತ್ರ ಅಥವಾ ಜನುಮ ದಿನಾಂಕ ಇರುವ ಎಸ್ ಎಸ್ ಎಲ್ ಸಿ ಅಂಕಪಟ್ಟಿ
3) ತಹಶೀಲ್ದಾರರು ಅಥವಾ ಉಪಾ ತಹಸೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸ ಸ್ಥಳ ಧೃಡೀಕರಣ ಪತ್ರ.
4) ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
5) ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
6) ಪತಿಯ ಮರಣ ಪ್ರಮಾಣ ಪತ್ರ
7) ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪ ವಿಭಾಗ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
8) ಅಂಗವಿಕಲತೆ ಪ್ರಮಾಣ ಪತ್ರ (ದೈಹಿಕ ಅಂಗವಿಕಲತೆ ಶೇಕಡ 60 ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ )
9) ಇದುವ ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು )
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಗೆಳೆಯ ಗೆಳತಿಯರ ವಾಟ್ಸಪ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಮತ್ತು ಉದ್ಯೋಗದ ಮಾಹಿತಿಯನ್ನು ಬಯಸುವ ವ್ಯಕ್ತಿಗಳಿಗೆ ಶೇರ್ ಮಾಡಿ