ಉಡುಪಿ ಅಂಗನವಾಡಿ ಹುದ್ದೆಗಳ ನೇಮಕಾತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2022 ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಮತ್ತು ಅರ್ಹತೆ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಯ ಅರ್ಹತೆ / ನೇಮಕಾತಿ ವಿಧಾನ /ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿ ಈ ಕೆಳಗಿನಂತಿದೆ ಅಭ್ಯರ್ಥಿಗಳು ಗಮನವಿಟ್ಟು ಪೂರ್ಣವಾಗಿ ಓದಿ.
ಉಡುಪಿ ಅಂಗನವಾಡಿ ಹುದ್ದೆಗಳ ನೇಮಕಾತಿ 2022
ನೇಮಕಾತಿ ಇಲಾಖೆಯ ಹೆಸರು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ
ಹುದ್ದೆಗಳ ಹೆಸರು :
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು.
ಒಟ್ಟು ಹುದ್ದೆಗಳ ಸಂಖ್ಯೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 25 ಹುದ್ದೆಗಳು ಖಾಲಿ ಇದ್ದು ಇವುಗಳಲ್ಲಿ 3 ಹುದ್ದೆಗಳು ಅಂಗನವಾಡಿ ಕಾರ್ಯಕರ್ತೆ 22 ಅಂಗನವಾಡಿ ಸಹಾಯಕಿ ಹುದ್ದೆಗಳು.
ಶೈಕ್ಷಣಿಕ ವಿದ್ಯಾರ್ಹತೆ :
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ನಾಲ್ಕನೇ ತರಗತಿ ಅಥವಾ ಗರಿಷ್ಠ ಒಂಬತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಈ ಹುದ್ದೆಗಳಿಗೆ ಹೆಚ್ಚಿನ ವಿದ್ಯಾರ್ಥಿಯು ಅನ್ವಯಿಸುವುದಿಲ್ಲ.
ವಯಸ್ಸಿನ ಮಿತಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿಯಮಗಳನುಸಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ ವಯಸ್ಸು 35 ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವಿದ್ಯಾರ್ಥಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡುತ್ತಿದೆ ಇಲ್ಲಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಸಂದರ್ಶನದ ಮೂಲಕ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿಯಲ್ಲಿ ಸಡಿಲಿಕೆ :
ಪ್ರವರ್ಗ-1 2A 2B 3A 3B ವರ್ಗದವರಿಗೆ 38 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ ಗೌರವಧನ ಆಧಾರದ ಮೇಲೆ ತಿಂಗಳಿಗೆ 5000 – 10,000 ವೇತನ ಇರುತ್ತದೆ
ಉದ್ಯೋಗದ ಸ್ಥಳ : ಉಡುಪಿ ಜಿಲ್ಲೆ
ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತಿ ಹೊಂದಿರುವ ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಮಹಿಳಾ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅಂಗನವಾಡಿ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 26 ಜುಲೈ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 20 ಆಗಸ್ಟ್ 2022
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು
1) ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ ನಮೂನೆ
2) ಜನಾನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಶಾಲಾ ದಾಖಲಾತಿ ಪ್ರಮಾಣ ಪತ್ರ ದಿನಾಂಕ 25.07.2022ಕ್ಕೆ 18 ವರ್ಷ ತುಂಬಿರಬೇಕು ಹಾಗೂ 35 ವರ್ಷ ಮೀರಿರಬಾರದು.
3) ತಹಶೀಲ್ದಾರರು ಅಥವಾ ಉಪಾತಹಶೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
4) ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
5) ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
ಹುದ್ದೆಗಳ ಇತರೆ ಮಾಹಿತಿ :
1) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಹಿಳೆಯರಾಗಿರಬೇಕು.
2) ಯಾವುದೇ ಇತರೆ ಸರ್ಕಾರಿ ಉದ್ಯೋಗದಲ್ಲಿ ಕೆಲಸ ನಿರ್ವಹಣೆ ಮಾಡಬಾರದು.
3) ಮಾನಸಿಕ ಸ್ಥಿರತೆ ಹೊಂದಿರಬೇಕು
ಸೂಚನೆ :
ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ಅರ್ಥ ಮಾಡಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನ ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ ಹಾಗೂ ಉದ್ಯೋಗದ ಮಾಹಿತಿ ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಶೇರ್ ಮಾಡಿ