ತುಮಕೂರು ಜಿಲ್ಲೆಯ ನೇಮಕಾತಿ 2022 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 141 ಖಾಯಂ ಹುದ್ದೆಗಳಿಗೆ ವಿವಿಧ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ/ ವೇತನ ಶ್ರೇಣಿ/ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2022 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವಂತ 141 ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು :
• ಅಂಗನವಾಡಿ ಸಹಾಯಕಿ
• ಅಂಗನವಾಡಿ ಕಾರ್ಯಕರ್ತೆ
ಒಟ್ಟು ಹುದ್ದೆಗಳ ಸಂಖ್ಯೆ :
• 25 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು
• 116 ಅಂಗನವಾಡಿ ಸಹಾಯಕಿ ಹುದ್ದೆಗಳು
ಇಲಾಖೆಯಲ್ಲಿ ಒಟ್ಟು 141 ಹುದ್ದೆಗಳು ಖಾಲಿ ಇವೆ
ವೇತನ ಶ್ರೇಣಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿಯಮಗಳ ಅನುಗುಣವಾಗಿ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತ ಹುದ್ದೆಗಳಿಗೆ ಆಯ್ಕೆಯಾದ ಮೊದಲ ಗೌರವದನ ಆಧಾರದ ಮೇಲೆ ತಿಂಗಳಿಗೆ 5,000 ದಿಂದ 10,000 ವೇತನ ನಿಗದಿಪಡಿಸಲಾಗಿದೆ.
ತುಮಕೂರು ಜಿಲ್ಲೆಯ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ:
ವಿದ್ಯಾರ್ಹತೆ :
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ನಾಲ್ಕನೇ ತರಗತಿಯಿಂದ ಗರಿಷ್ಠ ಒಂಬತ್ತನೇ ತರಗತಿಯಲ್ಲಿ ಕೆಳಗಡೆ ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಅಥವಾ ಯಾವುದೇ ಸಂಸ್ಥೆಯಿಂದ ಹತ್ತನೇ ತರಗತಿಯಲ್ಲಿ ತೇಊ ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಬಹುದು.
ವಯಸ್ಸಿನ ಮಿತಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿಗೆ ಅನುಗುಣವಾಗಿ ವಯಸ್ಸಿನಲ್ಲಿ ಸಡಿಲಿಕೆ ಇರುತ್ತದೆ.
ವಯಸ್ಸಿನಲ್ಲಿ ಸಡಲಿಕ್ಕೆ :
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷ ಇತರೆ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯಸ್ಸಿನಲ್ಲಿ ಸಡಿಲಿಕೆ ಇರುತ್ತದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು ಜಿಲ್ಲೆಯ ಹುದ್ದೆಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕ :
ಅರ್ಜಿಯ ಶುಲ್ಕ :
ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಇಲಾಖೆ ಹುದ್ದೆಗಳಿಗೆ ಸಂಪೂರ್ಣವಾಗಿ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಇದರ ಸಂಬಂಧಿತ ಹೆಚ್ಚಿನ ಮಾಹಿತಿಯನ್ನು ಪಡೆಯಲು ದಯವಿಟ್ಟು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು :
• ಅಭ್ಯರ್ಥಿಯ ಇತ್ತೀಚಿನ ಭಾವಚಿತ್ರ
• ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ಅಂಕ ಪಟ್ಟಿಗಳು
• ಅಭ್ಯರ್ಥಿಯ ಆಧಾರ್ ಕಾರ್ಡ್
• ವಾಸ ಸ್ಥಳ ಪ್ರಮಾಣ ಪತ್ರ
• ದೃಢೀಕೃತ ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್ ಎಸ್ ಎಲ್ ಸಿ ಅಂಕಪಟ್ಟಿ ಅಥವಾ ಜನ್ಮ ದಿನಾಂಕ ಇರುವ ಶಾಲಾ ಪ್ರಮಾಣ ಪತ್ರ.
• ಅಭ್ಯರ್ಥಿಯು ಅದೇ ಗ್ರಾಮದಲ್ಲಿ ವಾಸ ಅಥವಾ ಅದೇ ನಗರದಲ್ಲಿ ವಾಸವಿರಬೇಕು.
ಹುದ್ದೆಗಳಿಗೆ ಸಂಬಂಧಿಸಿದಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 29 ಆಗಸ್ಟ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಸೆಪ್ಟೆಂಬರ್ 2022
ಸೂಚನೆ :
ದಯವಿಟ್ಟು ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾದಲ್ಲಿ ದಯವಿಟ್ಟು ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಆದಷ್ಟು ಶೇರ್ ಮಾಡಿ.
ಕರ್ನಾಟಕ ನ್ಯೂಸ್ ಹಂಟರ್ ಅಂತರ್ಜಾಲ ಸ್ಥಾಪನೆಗೆ ಕಾರಣವಾದ ಅಂಶಗಳು :
• ಕರ್ನಾಟಕ ನ್ಯೂಸ್ ಹಂಟರ್ ಅಂತರ್ಜಾಲವು ಕರ್ನಾಟಕದ ಜನರು ಬಯಸುವ ಪ್ರಮುಖ ಉದ್ಯೋಗದ ಮಾಹಿತಿಯನ್ನು ನೀಡುವ ಒಂದು ಅಂತರ್ಜಾಲವಾಗಿದೆ.
• ಕರ್ನಾಟಕ ನ್ಯೂಸ್ ಹಂಟರ್ ಅಂತರ್ಜಲದಲ್ಲಿ ಮಾಹಿತಿಯನ್ನು ಉಚಿತವಾಗಿ ಪಡೆಯಬಹುದು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
• ಈ ಅಂತರ್ಜಲದಲ್ಲಿ ಪ್ರಕಟವಾಗುವ ಮಾಹಿತಿಯಲ್ಲಿ ಏನಾದರೂ ತಪ್ಪು ಅಥವಾ ದೋಷಗಳು ಕಂಡು ಬಂದಲ್ಲಿ ನೀವು ನಮ್ಮನ್ನು ಸಂಪರ್ಕಿಸಿ ಅದರ ಬಗ್ಗೆ ಮಾಹಿತಿಯನ್ನು ತಿಳಿಸಬಹುದು ನಾವು ಆ ತಪ್ಪು ಮರುಕಳಿಸಿದ ಹಾಗೆ ನೋಡಿಕೊಳ್ಳುತ್ತೇವೆ.