ಕರ್ನಾಟಕ ಜಿಲ್ಲಾ ಪಂಚಾಯತ್ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಬಿಲ್ ಕಲೆಕ್ಟರ್, ಕ್ಲರ್ಕ್, ಅಟೆಂಡರ್ ಹುದ್ದೆಗಳಿಗೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಬಾಗಲಕೋಟ್ ಜಿಲ್ಲಾ ಪಂಚಾಯತ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ಬಾಗಲಕೋಟ್ ಜಿಲ್ಲಾ ಪಂಚಾಯತ್ ಇಲಾಖೆ
ಹುದ್ದೆಗಳ ಹೆಸರು :
• ಬಿಲ್ ಕಲೆಕ್ಟರ್ : 10 ಹುದ್ದೆಗಳು
• ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ : 12 ಹುದ್ದೆಗಳು
• ಅಟೆಂಡರ್ : 32 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಬಾಗಲಕೋಟೆ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಒಟ್ಟು 54 ಹುದ್ದೆಗಳು ಖಾಲಿ ಇವೆ.
ಬಾಗಲಕೋಟ್ ಜಿಲ್ಲಾ ಪಂಚಾಯತ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ :
ಶೈಕ್ಷಣಿಕ ವಿದ್ಯಾರ್ಹತೆ :
ಬಿಲ್ ಕಲೆಕ್ಟರ್ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ :
ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೆತ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು
ಅಟೆಂಡರ್ :
ಈ ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ ಎಸ್ ಎಲ್ ಸಿ ( 10ನೇ ತರಗತಿ ) ಪರೀಕ್ಷೆಯಲ್ಲಿ ಉತ್ತೀರ್ಣತೆ ಪಡೆದಿರಬೇಕು.
ಬಾಗಲಕೋಟ್ ಜಿಲ್ಲಾ ಪಂಚಾಯತ್ ಇಲಾಖೆ ನೇಮಕಾತಿ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ :
ವಯೋಮಿತಿ :
ಬಾಗಲಕೋಟೆ ಜಿಲ್ಲಾ ಪಂಚಾಯತ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ವರ್ಷ ನಿಗಧಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
ವಯಮಿತಿ ಸಡಲಿಕ್ಕೆ ವಿವರಣೆ :
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.
ಪ್ರವರ್ಗ 2a / 2b/ 3a / 3b ವರ್ಗದವರಿಗೆ 03 ವರ್ಷ ವಯೋಮಿತಿ ಇರುತ್ತದೆ.
ಪಿಡಬ್ಲ್ಯೂಡಿ ಅಥವಾ ವಿಧವೆ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ :
• PWD ಅಭ್ಯರ್ಥಿಗಳಿಗೆ 100/-ರೂಪಾಯಿ
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 200/-
• ಪ್ರವರ್ಗ 2a / 2b/ 3a / 3b ವರ್ಗದವರಿಗೆ 300 ರೂಪಾಯಿ
• ಸಾಮಾನ್ಯ ಅಭ್ಯರ್ಥಿಗಳಿಗೆ 500
ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಅನುಸಾರ ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆಯಾಗುತ್ತಾರೆ.
ಅರ್ಜಿ ಸಲ್ಲಿಸುವ ವಿಧಾನ :
• ಮೊದಲನೆಯದಾಗಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
• ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
• ಬಾಗಲಕೋಟ ಜಿಲ್ಲಾ ಪಂಚಾಯತ್ ಬಿಲ್ ಕಲೆಕ್ಟರ್, ಕ್ಲರ್ಕ್, ಅಟೆಂಡರ್ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
• ಬಾಗಲಕೋಟ ಜಿಲ್ಲಾ ಪಂಚಾಯತ್ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
ಬಾಗಲಕೋಟ ಜಿಲ್ಲಾ ಪಂಚಾಯತ್ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ
( ಅರ್ಜಿ ಸಲ್ಲಿಸುವ ಅಥವಾ ಅರ್ಜಿಯನ್ನು ಸಲ್ಲಿಸುವಾಗ ಏನಾದರೂ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ಇಲಾಖೆಯ ಅಧಿಸೂಚನೆ ಅಥವಾ ಇಲಾಖೆಯ ಅಧಿಕೃತ ವೆಬ್ಸೈಟ್ ಪರಿಶೀಲಿಸಿ ಅಥವಾ ಇಲಾಖೆಯ ಸಹಾಯವಾಣಿ ಸಂಖ್ಯೆ 08354-235576 ಮುಖಾಂತರ ಸಹ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು )
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 17 ನವಂಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23 ಡಿಸೆಂಬರ್ 2022
Apply Link : Click
Notification Link : Click
ಸೂಚನೆ :
ಜಿಲ್ಲಾ ಪಂಚಾಯತ್ ಬಾಗಲಕೋಟೆ ಜಿಲ್ಲಾ ಇಲಾಖೆಯಲ್ಲಿ ನೇಮಕಾತಿ 2022 ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರವೇ ಅರ್ಜಿಯನ್ನು ಸಲ್ಲಿಸಬೇಕು.