ಗಡಿ ಭದ್ರತಾ ಪಡೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 1,284 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಕೇಂದ್ರ ಸರಕಾರಿ ಕರ್ನಾಟಕ ವೃತ್ತದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ಇಲಾಖೆ ಹೆಸರು :
ಗಡಿ ಭದ್ರತಾ ಪಡೆ ( border security force )
ಹುದ್ದೆಗಳ ಹೆಸರು :
1. Constable Cobbler
2. Constable tailor
3. Constable washerman
4. Constable sweeper
5. Constable cook
6. Constable water carrier
7. Constable waiter
8. Constable barber
ಒಟ್ಟು ಹುದ್ದೆಗಳ ಸಂಖ್ಯೆ :
ಗಡಿ ಭದ್ರತಾ ಪಡೆ ಇಲಾಖೆಯಲ್ಲಿ ಒಟ್ಟು 1,284 ಹುದ್ದೆಗಳು ಖಾಲಿ ಇದ್ದು ಕರ್ನಾಟಕದಲ್ಲಿ 64 ಹುದ್ದೆಗಳು ಖಾಲಿ ಇವೆ. ಇದರಲ್ಲಿ 61 ಪುರುಷ ಅಭ್ಯರ್ಥಿಗಳು ಮೂರು ಹುದ್ದೆಗಳು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಶೈಕ್ಷಣಿಕ ವಿದ್ಯಾರ್ಹತೆ:
ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ ಎಸ್ ಎಲ್ ಸಿ ಮತ್ತು ಹುದ್ದೆಗಳಿಗೆ ಸಂಬಂಧಿಸಿದ ( ಐಟಿಐ ಪಾಸ್ ಆಗಿರಬೇಕು ) ಇವಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನವಿಟ್ಟು ಓದಿ.
ವಯೋಮಿತಿ ವಿವರಣೆ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ವರ್ಷದಿಂದ ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ :
ಓಬಿಸಿ ವರ್ಗದ ಅಭ್ಯರ್ಥಿಗಳಿಗೆ 03 ವರ್ಷಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ನೀಡಿದೆ.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗ/ಈ ಡಬ್ಲ್ಯೂ ಎಸ್/ಓಬಿಸಿ ಅಭ್ಯರ್ಥಿಗಳಿಗೆ : 100/- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಾಜಿ ಸೈನಿಕ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಕ ನೀಡಿದೆ.
ನೇಮಕಾತಿ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಟ್ರೇಡ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 26-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 27-03-2023
Notification Link : Click
Apply Link : Click
ಮುಖ್ಯ ಪದಗಳು : ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಇರುತ್ತದೆ. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ನಾವು ನೀಡಿರುವ ಅಥವಾ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿ.