Chitradurga District Court recruitment 2022 | District Court recruitment typist and Peon jobs 2022 | 10th pass jobs

District Court recruitment typist and Peon jobs 2022  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರ, ಆದೇಶ ಜಾರಿಕಾರರ, ಹಾಗೂ ಜವಾನ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹುದ್ದೆಗಳ ಸಂಬಂಧಪಟ್ಟ ವಿದ್ಯಾರ್ಹತೆ ವೇತನ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯು ಈ ಕೆಳಗಿನಂತಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಹುದ್ದೆಗಳ ವಿವರ :

ನೇಮಕಾತಿ ಇಲಾಖೆ ಹೆಸರು :
ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಚೇರಿ

  • ಹುದ್ದೆಗಳ ಹೆಸರು:
    1) ಶೀಘ್ರಲಿಪಿಕಾರರು ಗ್ರೇಡ್ 3 : ಹುದ್ದೆಗಳ ಸಂಖ್ಯೆ 01
    2) ಬೆರಳಚ್ಚುಗಾರರು : ವಿದ್ಯಗಳ ಸಂಖ್ಯೆ 01
    3) ಬೆಲಚ್ಚು ನಕಲುದಾರರು : ಒಟ್ಟು ಎರಡು ಹುದ್ದೆಗಳು
    4) ಆದೇಶ ಜಾರಿಕಾರರು : ಒಟ್ಟು ಹುದ್ದೆಗಳ ಸಂಖ್ಯೆ 02
    5) ಜವಾನರು : ಒಟ್ಟು ಹುದ್ದೆಗಳ ಸಂಖ್ಯೆ 27

ಒಟ್ಟು ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ ಒಟ್ಟು 33 ಹುದ್ದೆಗಳು ಖಾಲಿ ಇವೆ

ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ

ವಿದ್ಯಾರ್ಹತೆ :
ಶೀಘ್ರ ಲಿಪಿಕಾರರು ಗ್ರೇಡ್ 3 ಹುದ್ದೆಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವಸತಿಯಿಂದ ನಡೆಯುವ ಕನ್ನಡ ಹಾಗೂ ಆಂಗ್ಲ್ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಆಂಗ್ಲ್ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣತೆ ಹೊಂದಿರಬೇಕು.

ಬೆರಳಚ್ಚುಗಾರರ ಹುದ್ದೆ : .
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣತೆಯನ್ನು ಪಡೆದಿರಬೇಕು
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವಸತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತೆಯನ್ನು ಪಡೆದಿರಬೇಕು.

ಬೆರಳಚ್ಚು ನಕಲುಗಾರ ಹುದ್ದೆ :
ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು ಇದರ ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವಸತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತೆಯನ್ನು ಪಡೆದಿರಬೇಕು.

ಆದೇಶ ಜಾರಿಕಾರರ ಹುದ್ದೆ :
1) ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಆಗಿರಬೇಕು
2) ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು
3) ಲಘು ವಾಹನ ಚಾಲನಾ ಪರವಾನಿಗೆ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ

ಜವಾನರರ ಹುದ್ದೆ :
10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ
೧) ತತ್ಸಮಾನ ವಿದ್ಯಾರ್ಹತೆ ಪಾಸ್ ಆಗಿರಬೇಕು

Join Now

೨) ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು
೩( ಲಘು ವಾಹನ ಚಾಲನಾ ಪರವಾನಿಗೆ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು
ಹತ್ತನೇ ತರಗತಿ ಅಂಕಪಟ್ಟಿಯಲ್ಲಿ ನಿಗದಿಪಡಿಸಿದ ಗರಿಷ್ಠ ಅಂಕ ಹಾಗೂ ಅಭ್ಯರ್ಥಿಗಳಿಸಿರುವ ಅಂಕಗಳು ಮತ್ತು ಶೇಕಡವಾರು ಅಂಕಗಳು ಸ್ಪಷ್ಟವಾಗಿ ನಮೂದಿಸತಕ್ಕದ್ದು

ವಯಸ್ಸಿನ ಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಕ್ಕೆ ಅನುಗುಣವಾಗಿ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು
ಗರಿಷ್ಠ ವಯಸ್ಸು
ಸಾಮಾನ್ಯ ವರ್ಗದವರಿಗೆ 35 ವರ್ಷ
2a 2b 3a 3b ವರ್ಗದವರಿಗೆ 38 ವರ್ಷ

ಪ್ರಧಾನ ಜಿಲ್ಲಾ ಮತ್ತು ಸತ್ತ ನ್ಯಾಯಾಧೀಶರ ಕಚೇರಿ ಹುದ್ದೆಗಳ ಆಯ್ಕೆಯ ಪ್ರಕ್ರಿಯೆ ಕೆಳಗಿನಂತಿದೆ.

ಶೀಘ್ರ ಲಿಪಿಕಾರರು ಗ್ರೇಡ್ 3 ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಬೆರಳಚ್ಚು ನಕಲುಗಾರ ಮತ್ತು ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆದೇಶ ಜಾರಿಕಾರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಒಂದು ಹುದ್ದೆಗೆ 25ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಒಂದು ಹುದ್ದೆಗೆ ಹತ್ತರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ :
ಶೀಘ್ರ ಲಿಪಿಕಾರರು ಹುದ್ದೆಗೆ 27,650 ಯಿಂದ 52650 ಇರುತ್ತದೆ

ಬೆರಳಚ್ಚುಗಾರ ಹುದ್ದೆಗೆ 21,400 ರಿಂದ 42000 ವೇತನ ಇರುತ್ತದೆ

ಬೆರಳಚ್ಚು ನಕಲುಗಾರರು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 21,400 ರಿಂದ 42,000/-ವೇತನ ಇರುತ್ತದೆ

ಆದೇಶ ಜಾರಿಕಾರರು ಹುದ್ದೆಗೆ 19950 ಇಂದ 37,900 ವೇತನ ಇರುತ್ತದೆ.

ಅರ್ಜಿ ಹಾಗೂ ನಿಗದಿ ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ

ಸಾಮಾನ್ಯ ವರ್ಗದವರಿಗೆ : 300
2a 2b 3a 3b ವರ್ಗದವರಿಗೆ : 150
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಪೂರ್ಣ ವಿನಾಯಕ ಇರುತ್ತದೆ.

ಅರ್ಜಿ ಶುಲ್ಕ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15 ಜುಲೈ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 ಆಗಸ್ಟ್ 2022.

ಉದ್ಯೋಗದ ಇತರೆ ಸೂಚನೆಗಳು :
1) ಅಭ್ಯರ್ಥಿಗಳು ಅರ್ಹತಾ ಪರೀಕ್ಷೆ ಅಥವಾ ಸಂದರ್ಶನ ಅಥವಾ ದಾಖಲಾತಿ ಪರಿಶೀಲನೆ ಸಮಯದಲ್ಲಿ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು.
2) ಆನ್ಲೈನ್ ಮೂಲಕ ಸಲ್ಲಿಸಲಾದ ಅರ್ಜಿ ಪ್ರತಿ
3) ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ರಸೀದಿ ಪ್ರತಿ
4) ಮೂಲ ದ್ವಿತೀಯ ಪಿಯುಸಿ ಎಸ್ ಎಸ್ ಎಲ್ ಸಿ ಅಂಕಪಟ್ಟಿ.

 

ಸೂಚನೆ :
ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಇಲಾಖೆಯ ಅಧಿಕೃತವಾದ ಅಧಿಸೂಚನೆ ಓದಿ ಸರಿಯಾಗಿ ಅರ್ಥ ಮಾಡಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ಜೊತೆ ಹಂಚಿಕೊಳ್ಳಿ ಈ ಮಾಹಿತಿಯನ್ನ ಆದಷ್ಟು ಉದ್ಯೋಗ ಮಾಹಿತಿಯನ್ನು ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ

ಪುನಃ ಭೇಟಿ ನೀಡಿ ಧನ್ಯವಾದಗಳು

Spread the love