ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅದೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ/ ವೇತನ ಶ್ರೇಣಿ/ ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹುದ್ದೆಗಳ ವಿವರಣೆ :
ನೇಮಕಾತಿ ಇಲಾಖೆಯ ಹೆಸರು :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಮನಗರ
ಹುದ್ದೆಗಳ ಹೆಸರು :
• ಜವಾನ ಹುದ್ದೆ
• ಆದೇಶ ಜಾರಿಕಾರ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆಯಲ್ಲಿ ಒಟ್ಟು 27 ಹುದ್ದೆಗಳು ಖಾಲಿ ಇವೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ :
ವಿದ್ಯಾರ್ಹತೆ :
ಜವಾನ ಹುದ್ದೆಗೆ :
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.
ಆದೇಶ ಜಾರಿಕಾರ :
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆ ರ್ಗಡೆ ಹೊಂದಿರಬೇಕು.
• ಡ್ರೈವಿಂಗ್ ಲೈಸನ್ಸ್ ಹೊಂದಿರುವವರಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ
• ಅಭ್ಯರ್ಥಿಗೆ ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು.
ವಯಸ್ಸಿನ ಮಿತಿ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಮನಗರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನ ವಯೋಮಿತಿ ಹೊಂದಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
• ಪ್ರವರ್ಗ 2A 2B 3A 3B ವರ್ಗದವರಿಗೆ 38 ವರ್ಷ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಆದೇಶ ಜಾರಿಕಾರರ ಹುದ್ದೆಗೆ :
ಆದೇಶ ಜಾರಿಕಾರರ ಹುದ್ದೆಗೆ ಎಸ್ ಎಸ್ ಎಲ್ ಸಿ ಎಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹಾಗೂ ಒಂದು ಹುದ್ದೆಗೆ 25 ಅಭ್ಯರ್ಥಿಗಳಂತೆ ಸಂದರ್ಶನ ನಡೆಸಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಜವಾನ ಹುದ್ದೆಗೆ :
ಜವಾನ ಹುದ್ದೆಗೆ ಹುದ್ದೆಗೆ ಎಸ್ ಎಸ್ ಎಲ್ ಸಿ ಎಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹಾಗೂ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನ ನಡೆಸಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವೇತನ ಶ್ರೇಣಿ :
ಆದೇಶ ಜಾರಿಕಾರದ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯು ನಿಯಮಗಳ ಅನುಸಾರ 19950 ಯಿಂದ 37,900 ವೇತನ ಇರುತ್ತದೆ.
ಜವಾನ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 17000 ದಿಂದ 28950 ವೇತನ ನಿಗದಿಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹುದ್ದೆಗಳಿಗೆ ನಿಗದಿಪಡಿಸಿದ ಅರ್ಜಿಯ ಶುಲ್ಕ
ಅರ್ಜಿಯ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 200/-
• ಪ್ರವರ್ಗ 2A 2B 3A 3B ವರ್ಗದವರಿಗೆ ರೂಪಾಯಿ 100
• ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣವಾಗಿ ವಿನಾಯಕ ನೀಡಲಾಗಿದೆ
ಅರ್ಜಿ ಸಲ್ಲಿಸುವ ವಿಧಾನ :
ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಹಾಗೂ ಅರ್ಹತೆ ಪಡೆದಿರುವಂತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನ ಸಲ್ಲಿಸಬಹುದು.
ಉದ್ಯೋಗದ ಸ್ಥಳ :
ಆದೇಶ ಜಾರಿಕಾರರು ಹಾಗೂ ಜವಾನರು ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲಸವನ್ನ ನಿರ್ವಹಿಸಬಹುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 16 ಆಗಸ್ಟ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 20 ಸೆಪ್ಟೆಂಬರ್ 2022
ಸೂಚನೆ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಅರ್ಥ ಮಾಡಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಇದು ನೀವು ಮಾಡುವ ಒಂದು ಸಣ್ಣ ಸಹಾಯವಾಗಿದೆ ಇದರಿಂದ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಸಹಾಯ ಮಾಡಿದಂತಾಗುತ್ತದೆ