ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವಂತ 135 ಅಪ್ರೆಂಟಿಸ್ ಹುದ್ದೆಗಳಿಗೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಕರ್ನಾಟಕದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ / ವಯೋಮಿತಿ ವಿವರಣೆ / ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆಯ ಹೆಸರು :
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆ
ಹುದ್ದೆಗಳ ಹೆಸರು :
• ಗ್ರಾಜುವೇಟ್ ಅಪ್ರೆಂಟಿಸ್ : 100 ಹುದ್ದೆ
• ಡಿಪ್ಲೋಮೋ ಅಪ್ರೆಂಟಿಸ್ : 35 ಹುದ್ದೆ
ಒಟ್ಟು ಹುದ್ದೆಗಳ ಸಂಖ್ಯೆ :
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆಯಲ್ಲಿ ಒಟ್ಟು 135 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
GESCOM Recruitment 2022 Eligibility Details
ಶೈಕ್ಷಣಿಕ ವಿದ್ಯಾರ್ಹತೆ :
ಗ್ರಾಜಿಯೇಟ್ ಅಪ್ರೆಂಟಿಸ್ – ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ / ಡಿಪ್ಲೋಮೋ ಸರ್ಟಿಫಿಕೇಟ್ ಹೊಂದಿರಬೇಕು.
ಇತರೆ ಅರ್ಹತೆಗಳೇನು :
ಇಲಾಖೆಯ ಅಧಿಸೂಚನೆಯ ಪ್ರಕಾರ 2020. 2021. 2022 ಬಿಸಿಲಿಯಲ್ಲಿ ಇಂಜಿನಿಯರಿಂಗ್ ಅಥವಾ ಡಿಪ್ಲೋಮೋ ಇಂಜಿನಿಯರಿಂಗ್ ಪಾಸಾಗಿರುವರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ಡಿಪ್ಲೋಮಾ ಅಪ್ರೆಂಟಿಸ್ – ಈ ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಸರ್ಟಿಫಿಕೇಟ್ ಹೊಂದಿರಬೇಕು.
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ :
ವಯೋಮಿತಿಯ ವಿವರಣೆ :
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿ ಕನಿಷ್ಠ ವಯಸ್ಸು 18 ವಯೋಮಿತಿಯಲ್ಲಿ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ವೇತನ ಶ್ರೇಣಿ ವಿವರಣೆ :
ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 8,000 ದಿಂದ 9000 ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಅರ್ಹತೆಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಇದರ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಅಧಿಸೂಚನೆಯನ್ನು ಗಮನಿಸಿ
How to apply for GESCOM Recruitment (Graduate & Diploma Apprentice) Jobs
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಇಲಾಖೆಯ ಅಧಿಕೃತ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಅನುಸರಿಸಬೇಕಾದ ಕ್ರಮಗಳು :
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ಈ ಕೆಳಗೆ ನೀಡಲಾದ ಅಪ್ಲಿಕೇಶನ್ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿಂದ ಸಹ ಅರ್ಜಿಯನ್ನು ಸಲ್ಲಿಸಬಹುದು.
• ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಉದಾಹರಣೆಗೆ ಅಭ್ಯರ್ಥಿಯ ಹೆಸರು ಮತ್ತು ವಿಳಾಸ ಅಭ್ಯರ್ಥಿಯ ಮೊಬೈಲ್ ಸಂಖ್ಯೆ ಇಮೇಲ್ ಐಡಿ ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮುಖ ವಿವರಣೆ ಮುಂತಾದವನ ಪರಿಶೀಲಿಸಿ.
• ಅರ್ಜಿ ನಮೂನೆಯಲ್ಲಿ ಕೇಳಲಾದ ಹಾಗೂ ಲಗತ್ತಿಸಬೇಕಾದ ಎಲ್ಲಾ ದಾಖಲಾತಿಗಳನ್ನು ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.
ಇಲಾಖೆಯ ಅಂಚಿ ವಿಳಾಸ :
ಪ್ರಧಾನ ವ್ಯವಸ್ಥಾಪಕರು
( ಆ ಮತ್ತು ಮಾ.ಸಂ.ಅ ) ನಿಗಮ ಕಚೇರಿ
ಗು.ವಿ.ಸ.ಕಂ.ನಿ ( ಜೆಸ್ಕಾಂ ) ಕಲಬುರ್ಗಿ 585102
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸುಲ್ಕದ ವಿವರಣೆ :
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 21-11-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 08-11-2022.
ಸೂಚನೆ :
ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 135 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರವೇ ಅರ್ಜಿಯನ್ನು ಸಲ್ಲಿಸಬೇಕು
Apply Link : Click