IBPS PO RecruitmentProbationary Officer/ Management Trainee 2022 : ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಇಲಾಖೆ ಅಥವಾ ( institute of banking personal selection ) IBPS ಬೃಹತ್ ನೇಮಕಾತಿ 2022. ಇಲಾಖೆಯಲ್ಲಿ ಖಾಲಿ ಇರುವ 6432 ವಿವಿಧ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ನೇರ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಉದ್ಯೋಗದ ಸಂಬಂಧ ಪಟ್ಟ ವಿದ್ಯಾರ್ಹತೆ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಹಾಗೂ ಆಯ್ಕೆ ವಿಧಾನದ ಬಗ್ಗೆ ಮಾಹಿತಿಯನ್ನು ಪಡೆಯೋಣ.
ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಈ ಇಲಾಖೆ ನೇಮಕಾತಿ ಭಾರತಾದ್ಯಂತ ನಡೆಯುತ್ತದೆ.
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಇಲಾಖೆಯ ಹುದ್ದೆಗಳ ವಿವರಣೆ
ನೇಮಕಾತಿ ಇಲಾಖೆಯ ಹೆಸರು :
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ( IBPS )
ಹುದ್ದೆಗಳ ಹೆಸರು :
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಇಲಾಖೆಯಲ್ಲಿ ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್ ಟ್ರೈನಿಂಗ್ ಖಾಲಿ ಇವೆ
ಒಟ್ಟು ಹುದ್ದೆಗಳ ಸಂಖ್ಯೆ :
ಐಬಿಪಿಎಸ್ ಇಲಾಖೆಯಲ್ಲಿ ಒಟ್ಟು 6432 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
ವಿದ್ಯಾರ್ಹತೆ :
ಪ್ರೊಬೇಷನರಿ ಆಫೀಸರ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.
ವಯಸ್ಸಿನ ಮಿತಿ :
• ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ
• ಓಬಿಸಿ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 33 ವರ್ಷ
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಪ್ರೊಬೇಷನರಿ ಆಫೀಸರ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,400 ರಿಂದ 47,000 ಇವತ್ತಿನ ಇರುತ್ತದೆ
ಬ್ಯಾಂಕಿಂಗ್ ಸಿಬ್ಬಂದಿ ಆಯೋಗ ಆಯ್ಕೆ ಪ್ರಕ್ರಿಯೆ
ಆಯ್ಕೆ ವಿಧಾನ :
• ಹುದ್ದೆಗಳ ಆಯ್ಕೆ ವಿಧಾನವನ್ನು ಇಲಾಖೆ ಮೂರು ರೀತಿಯಲ್ಲಿ ವಿಂಗಡಿಸಿದೆ
1) ಆನ್ಲೈನ್ ನಲ್ಲಿ ಪ್ರಿಲಿಮಿನರಿ ಪರೀಕ್ಷೆ – ಟೈಯರ್ 01
2) ಆನ್ಲೈನ್ ಮೇನ್ಸ್ ಪರೀಕ್ಷೆ – ಟೈಯರ್ 02
3) ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು ಈ ಕೆಳಗಿನಂತಿವೆ
• ಬೆಂಗಳೂರು
• ಬೆಳಗಾಂ
• ಬೀದರ್
• ಚಿಕ್ಕಬಳ್ಳಾಪುರ
• ದಾವಣಗೆರೆ
• ಧಾರವಾಡ
• ಹಾಸನ
• ಹುಬ್ಬಳ್ಳಿ
• ಮಂಗಳೂರು
• ಮೈಸೂರ್
• ತುಮಕೂರು ಮತ್ತು ಉಡುಪಿ
ಅಭ್ಯರ್ಥಿಗಳು ಪರೀಕ್ಷಾ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ವಿಧಾನ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ಅರ್ಜಿಯನ್ನ ಸಲ್ಲಿಸಬೇಕು ಇದರ ಸಂಬಂಧಪಟ್ಟ ಅಧಿಕೃತ ವೆಬ್ಸೈಟ್ ಲಿಂಕ್ ಅಧಿಸೂಚನೆಯ ಸೂಚನೆ ಲಿಂಕನ್ನು ಈ ಮಾಹಿತಿಯ ಕೆಳಗಡೆ ನೀಡಿರುತ್ತೇನೆ ಅಲ್ಲಿಂದ ಸಹ ನೀವು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು
ಪ್ರೊಬೇಷನರಿ ಆಫೀಸರ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲಾತಿಗಳು ಈ ಕೆಳಗಿನಂತಿವೆ, ಅಭ್ಯರ್ಥಿಗಳು ಆ ದಾಖಲಾತಿಗಳನ್ನು ಸಿದ್ಧಪಡಿಸಿಕೊಂಡು ಆನ್ಲೈನ್ ನಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ನಮೂನೆಯನ್ನು ಮುದ್ರಣ ಮಾಡಿಕೊಳ್ಳಬೇಕು.
• ಅಭ್ಯರ್ಥಿಯ ಆಧಾರ್ ಕಾರ್ಡ್
• ಇತ್ತೀಚಿನ ಭಾವಚಿತ್ರ ಹಾಗೂ ಸಹಿ ಮತ್ತು ಹೆಬ್ಬರಳಿನ ಗುರುತು
• ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
• 10ನೇ ತರಗತಿ ಅಂಕಪಟ್ಟಿ
• ದ್ವಿತೀಯ ಪಿಯುಸಿ ಅಂಕಪಟ್ಟಿ
• ಡಿಗ್ರಿ ಅಂಕಪಟ್ಟಿಗಳು
• ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರಗಳು
• ಇನ್ನಿತರ ಸರ್ಕಾರಿ ಮೀಸಲಾತಿಯ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಆಯೋಗದ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು :
ಪ್ರಮುಖ ದಿನಾಂಕಗಳು :
ಅರ್ಜಿಯನ್ನ ಸಲ್ಲಿಸಲು ಆರಂಭದ ದಿನಾಂಕ 02-08-2022
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 22-08-2022
ಅರ್ಜಿ ಶುಲ್ಕ ಪಾವತಿಯ ಕೊನೆಯ ದಿನಾಂಕ 22-08-2022
ನಂತರ ಇಲಾಖೆಯು ಈ ಹುದ್ದೆಗಳಿಗೆ ಸಂಬಂಧಪಟ್ಟ ಪರೀಕ್ಷೆ ದಿನಾಂಕವನ್ನು ಅಕ್ಟೋಬರ್ 2022 ರಂದು ನಿಗದಿಪಡಿಸಿ. ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 2022 ರಂದು ಬಿಡುಗಡೆ ಮಾಡಲಾಗುತ್ತದೆ.
ಸೂಚನೆ :
ದಯವಿಟ್ಟು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಥ ಮಾಡಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಫೇಸ್ ಬುಕ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಹಂಚಿಕೊಳ್ಳಿ ಈ ಮಾಹಿತಿಯನ್ನು ಆದಷ್ಟು ಉದ್ಯೋಗದ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ