income tax department recruitment 2022
ಸರ್ಕಾರಿ ಉದ್ಯೋಗ 2022. ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ತೆರಿಗೆ ಸಹಾಯಕ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ / ವೇತನದ ವಿವರಣೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಆದಾಯ ತೆರಿಗೆ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿ
ನೇಮಕಾತಿ ಇಲಾಖೆ ಹೆಸರು :
ಆದಾಯ ತೆರಿಗೆ ಇಲಾಖೆ ( income tax department )
ಹುದ್ದೆಗಳ ಹೆಸರು:
• ಆದಾಯ ತೆರಿಗೆ ಇನ್ಸ್ಪೆಕ್ಟರ್
• ತೆರಿಗೆ ಸಹಾಯಕ
• ಬಹು ಕಾರ್ಯ ಸಿಬ್ಬಂದಿ
ಒಟ್ಟು ಹುದ್ದೆಗಳ ಸಂಖ್ಯೆ :
ಆದಾಯ ತೆರಿಗೆ ಇನ್ಸ್ಪೆಕ್ಟರ್ : ಒಟ್ಟು 01 ಹುದ್ದೆ ಖಾಲಿ ಇದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.
ವೇತನ ಶ್ರೇಣಿ :
ಆದಾಯ ತೆರಿಗೆ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 9,300 ರಿಂದ 34,800 ನೀಡಲಾಗುತ್ತದೆ.
ತೆರಿಗೆ ಸಹಾಯಕ :
ಈ ವಿಭಾಗದಲ್ಲಿ ಒಟ್ಟು 05 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 27 ವರ್ಷ ಮೀರಿರಬಾರದು.
ವೇತನ ಶ್ರೇಣಿ :
ಆದಾಯ ತೆರಿಗೆ ಇಲಾಖೆ ಅಧಿಕೃತ ಆದಿಶಕ್ತಿಯ ಪ್ರಕಾರ ತೆರಿಗೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 20,000 ನೀಡಲಾಗುತ್ತದೆ
ಬಹು ಕಾರ್ಯ ಸಿಬ್ಬಂದಿ :
ಈ ವಿಭಾಗದಲ್ಲಿ ಒಟ್ಟು 18 ಹುದ್ದೆಗಳು ಖಾಲಿ ಇದ್ದು. ಬಹು ಕಾರ್ಯ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ. ಈ ಹುದ್ದೆಗೂ ಸಹ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಪ್ಪತ್ತು ಸಾವಿರ ರೂಪಾಯಿ ವೇತನ ನಿಗದಿಪಡಿಸಲಾಗಿದೆ
( ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಉದಾಹರಣೆಗೆ ಸಾಮಾನ್ಯ ವರ್ಗದವರಿಗೆ ಗರಿಷ್ಠ 32 ವರ್ಷ/ ಹಿಂದುಳಿದ ವರ್ಗ ಹಾಗೂ ಓಬಿಸಿ ವರ್ಗದವರಿಗೆ ಗರಿಷ್ಠ 32 ವರ್ಷ / ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 32 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ )
ಆದಾಯ ತೆರಿಗೆ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಥಿಯ ವಿವರಣೆ :
What is qualification for income tax officer?
ಶೈಕ್ಷಣಿಕ ವಿದ್ಯಾರ್ಹತೆ :
ಆದಾಯ ತೆರಿಗೆ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು.
ಅರ್ಜಿ ಶುಲ್ಕದ ವಿವರಣೆ :
ಆದಾಯ ತೆರಿಗೆ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಸಂಪೂರ್ಣವಾಗಿ ಅರ್ಜಿಸಬೇಕಾದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬೇಕು. ಅಂದರೆ ಅಂಚೆಯ ಮೂಲಕ ಸಲ್ಲಿಸಬೇಕು.
Income Tax Department Recruitment 2022 Apply now
ಅರ್ಜಿ ಸಲ್ಲಿಸುವ ವಿಳಾಸ :
Joint commissioner of income tax,
Headquarters ( personal and establishment), 1st floor, room number 14, Aayakar Bhawan, P-7, Chowringhee square, Kolkata – 700069
ಅರ್ಜಿಯನ್ನು ಹೇಗೆ ಸಲ್ಲಿಸಬೇಕು :
• ಮೊದಲನೇದಾಗಿ ಅಭ್ಯರ್ಥಿಗಳು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಇರುವ ಅರ್ಜಿ ನಮೂನೆಯನ್ನು ಪ್ರಿಂಟ್ ಮುದ್ರಣ ಮಾಡಿಕೊಳ್ಳಿ. ಬಳಿಕ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
• ಅರ್ಜಿ ನಮೂನೆಯನ್ನ ಭರ್ತಿ ಮಾಡಿದ ಬಳಿಕ ಅಭ್ಯರ್ಥಿಗಳು ಒಂದು ಬಾರಿ ಪರಿಶೀಲಿಸಿ ಏಕೆಂದರೆ ನೀವು ಮಾಹಿತಿಯನ್ನು ಸರಿಯಾಗಿ ತುಂಬದಿದ್ದರೆ ಅರ್ಜಿ ತಿರಸ್ಕಾರವಾಗುತ್ತದೆ.
• ತದನಂತರ ಅಲ್ಲಿ ಕೇಳಲಾದ ದೂರವಾಣಿ ಸಂಖ್ಯೆ ಮತ್ತು ಇ-ಮೇಲ್ ಐಡಿಯನ್ನು ಸರಿಯಾದ ರೀತಿಯಲ್ಲಿ ಸ್ಪಷ್ಟವಾಗಿ ನಮೂದಿಸಿ.
• ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ಬಳಿಕ ನಿಮ್ಮ ಇತ್ತೀಚಿನ ಭಾವಚಿತ್ರ ಹಾಗೂ ನಿಮ್ಮ ಶೈಕ್ಷಣಿಕ ವಿದ್ಯಾರ್ಹತೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಹಾಗೂ ಮೀಸಲಾತಿ ಅನುಗುಣವಾಗಿ ಸಂಬಂಧಿಸಿದ ಜಾತಿ ಪ್ರಮಾಣ ಪತ್ರ ಮುಂತಾದವುಗಳನ್ನು ಅರ್ಜಿ ನಮೂನೆಯೊಂದಿಗೆ ನಾವು ತಿಳಿಸಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 31 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 28 ನವಂಬರ್ 2022.
Apply Link : Click
ಸೂಚನೆ :
ಆದಾಯ ತೆರಿಗೆ ಇಲಾಖೆಯಲ್ಲಿ ಕಾಲಿ ಇರುವ 24 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ನೀಡಿರುವ ಎಲ್ಲಾ ಮಾಹಿತಿಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.