India Post GDS Recruitment 2023: Apply Online for 30,041 Gramin Dak Sevak

India Post Recruitment 2023: ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 30041 ಗ್ರಾಮೀಣ ಡಾಕ್ ಸೇವಕ ( BOM / ABPM ) ಹುದ್ದೆಗಳಿಗೆ ಭಾರತೀಯ ಅಂಚೆ ಕಚೇರಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

India Post GDS Recruitment 2023: Apply Online for 30,041 Gramin Dak Sevak Vacancies

ನೇಮಕಾತಿ ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
1. ಗ್ರಾಮೀಣ ಡಾಕ್ ಸೇವಕ್ ( BPM )
2. ಗ್ರಾಮೀಣ ಡಾಕ್ ಸೇವಕ್ ( ABPM )

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಅಂಚೆ ಇಲಾಖೆಯಲ್ಲಿ ಒಟ್ಟು 30041 ಹುದ್ದೆಗಳು ಖಾಲಿ ಇವೆ.

Raiway Jobs 2023

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 10,000-29,380/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.I

india Post Recruitment 2023 Eligibility Details In Kannada

ಶೈಕ್ಷಣಿಕ ಅರ್ಹತೆ :
ಭಾರತೀಯ ಅಂಚೆ ಇಲಾಖೆ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪೂರ್ಣಗೊಳಿಸಬೇಕು. ( ಶೈಕ್ಷಣಿಕ ಅರ್ಹತೆ ಕುರಿತು ನಾವು ನೀಡಿರುವ ಅಧಿಸೂಚನೆ ಗಮನಿಸಿ )

ವಯಸ್ಸಿನ ಮಿತಿ :
ಭಾರತೀಯ ಅಂಚೆ ಕಚೇರಿ ಇಲಾಖೆಯ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಗರಿಷ್ಠ 40ವರ್ಷ.

Join Now

ವಯೋಮಿತಿ ಸಡಿಲಿಕೆ ವಿವರಣೆ:
• OBC ಅಭ್ಯರ್ಥಿ: 3 ವರ್ಷಗಳು
• SC / ST ಅಭ್ಯರ್ಥಿಗಳು: 05 ವರ್ಷಗಳು
• PWD ಸಾಮಾನ್ಯ ಅಭ್ಯರ್ಥಿಗಳು : 10 ವರ್ಷಗಳು
• PWD OBC ಅಭ್ಯರ್ಥಿಗಳು : 13 ವರ್ಷ
• PWD SC / ST ಅಭ್ಯರ್ಥಿಗಳು 15 ವರ್ಷಗಳು

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 100/-
• ಮಹಿಳಾ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ( ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬಹುದು )

India Post GDS Recruitment 2023: Selection Process

ಆಯ್ಕೆ ವಿಧಾನ :
ಭಾರತೀಯ ಅಂಚೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ

India Post GDS Recruitment 2023 Important Dates 

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 03 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23 ಆಗಸ್ಟ್ 2023

Apply Link 

Notification Link 

Circle Wise Vacancy Notification PDF

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love