India Post GDS Recruitment 2023, Apply online for Gramin Dak Sevak posts
ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2023. ಅಂಚೆ ಇಲಾಖೆಯಲ್ಲಿ ಖಾಲಿ ಇರುವ 40889 ವಿವಿಧ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿದ್ದರೆ ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ /ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Post Office GDS Recruitment 2023
ನೇಮಕಾತಿ ಇಲಾಖೆ ಹೆಸರು :
ಭಾರತೀಯ ಅಂಚೆ ಇಲಾಖೆ ನೇಮಕಾತಿ
ಹುದ್ದೆಗಳ ಹೆಸರು :
ಗ್ರಾಮೀಣ ಡಾಕ್ ಸೇವಕ್ ( GDS ) / BPM / ABPM
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಅಂಚೆ ಇಲಾಖೆಯಲ್ಲಿ ಒಟ್ಟು 40889 ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು ಕರ್ನಾಟಕದಲ್ಲಿ ಒಟ್ಟು 3036 ಹುದ್ದೆಗಳು ಖಾಲಿ ಇವೆ. ರಾಜ್ಯಗಳವಾರು ಉದ್ಯೋಗ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ಅಂಚೆ ಇಲಾಖೆಯ ಅಧಿಕೃತ ಅಧಿಸೂಚನೆ 2023ರ ಪ್ರಕಾರ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವೇತನ ಶ್ರೇಣಿ ವಿವರಣೆ :
BPM ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 12,000 ರಿಂದ 29,380/-ವೇತನ ನೀಡಲಾಗುತ್ತದೆ.
ABPM/DAK SEVAK ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 10,000 ದಿಂದ 24,470/-ವೇತನ ಇರುತ್ತದೆ.
ವಯೋಮಿತಿ ವಿವರಣೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಬೇಕು ಹಾಗೂ ಗರಿಷ್ಠ 40 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕ್ಕೆ ಸಹ ಇರುತ್ತದೆ.
ವಯೋಮಿತಿ ಸಡಿಲಿಕೆ ವಿವರಣೆ :
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ : 05 ವರ್ಷ
ಓಬಿಸಿ ಅಭ್ಯರ್ಥಿಗಳಿಗೆ : 03 ವರ್ಷ
PWD ಅಭ್ಯರ್ಥಿಗಳಿಗೆ : 10 ವರ್ಷ
PWD + OBC ಅಭ್ಯರ್ಥಿಗಳಿಗೆ : 13 ವರ್ಷಗಳು
PWD + SC/ST ಅಭ್ಯರ್ಥಿಗಳಿಗೆ: 15 ವರ್ಷಗಳು
ಅರ್ಜಿ ಶುಲ್ಕ :
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕ ಪಾವತಿಸಬೇಕು
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
India Post GDS Recruitment 2023 Apply Online
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
India Post GDS Recruitment 2023 Significant Date
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27-ಜನವರಿ-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16-ಫೆಬ್ರುವರಿ-2023
Apply Link : Click
Notification Link : Click
ಮುಖ್ಯ ಸೂಚನೆ :
ನಾವು ನೀಡುವ ಈ ಉದ್ಯೋಗ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka News Hunter/ Government jobs news Shashikala ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶವನ್ನು ಕಳಿಸಿ ನಮ್ಮ ಗಮನಕ್ಕೆ ತರತಕ್ಕದ್ದು.