ಕೇಂದ್ರ ಸರಕಾರಿ ಉದ್ಯೋಗ 2023. ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಒಟ್ಟು 262 ಹುದ್ದೆಗಳು ಖಾಲಿ ಇದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಹಾಗೂ ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನ ಸಲ್ಲಿಸಬಹುದು.
ನೇಮಕಾತಿ ಇಲಾಖೆ ಹೆಸರು : ಭಾರತೀಯ ನೌಕಾಪಡೆ ಇಲಾಖೆ
ಹುದ್ದೆಗಳ ಹೆಸರು : SSC officer
ಒಟ್ಟು ಹುದ್ದೆಗಳ ಸಂಖ್ಯೆ: ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಒಟ್ಟು 262 ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ವಿದ್ಯಾರ್ಹತೆ: ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಬಿಇ/ಬಿಟೆಕ್ ಎಂಬಿಎ ಪಿಜಿ/ ಬಿಎಸ್ಸಿ, ಬಿಕಾಂ/ಎಂಸಿಎ/ ಎಂ. ಎಸ್ ಸಿ/ ಎಂ ಟೆಕ್ / ಪದವಿಯನ್ನ ಪಡೆದಿರಬೇಕು. ಶೈಕ್ಷಣಿಕ ಅರ್ಹತೆ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನ ಗಮನಿಸಿ.
ವಯಸ್ಸಿನ ಮಿತಿ : ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎರಡು ಜನವರಿ 1997-99 ರಿಂದ ಒಂದು ಜನವರಿ 2003-05 ದಿನಾಂಕಗಳ ನಡುವೆ ಜನಿಸಿರಬೇಕು.
ನೇಮಕಾತಿ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಅಭ್ಯರ್ಥಿಗಳ ಅರ್ಹ ಪಟ್ಟಿ ಹಾಗೂ ssb ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು : ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಿನಾಂಕ 29 ಏಪ್ರಿಲ್ 2023 ರಿಂದ ದಿನಾಂಕ 14 ಮೇ 2023ರ ತನಕ ಅರ್ಜಿಯನ್ನು ಸಲ್ಲಿಸಬಹುದು.
Notification link : Click
Apply Link :Click
ಮುಖ್ಯ ಪದಗಳು : ಭಾರತೀಯ ನೌಕಾಪಡೆ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಶೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
Karnataka news hunter ಅಂತರ್ಜಾಲದ ಉಪಯೋಗಗಳು
1. Karnataka news hunter ಅಂತರ್ಜಾಲವು ಕರ್ನಾಟಕ ಹಾಗೂ ಭಾರತದ ಯಾವುದೇ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನ ನೀಡುತ್ತದೆ.
2. ಈ ಅಂತರ್ಜಾಲವು ಕರ್ನಾಟಕ ಹಾಗೂ ಕನ್ನಡಿಗರಿಗಾಗಿ ಸಿದ್ಧವಾದ ಅಂತರ್ಜಾಲವಾಗಿದೆ. ಇಲ್ಲಿ ಯಾವುದೇ ರೀತಿಯ ಸುಳ್ಳು ಅಥವಾ ಮೋಸದ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ.
3. Karnataka news hunter ಅಂತರ್ಜಾಲ ಇದು ಒಂದು ನಂಬಿಕೆಯ ಅಂತರ್ಜಾಲವಾಗಿದ್ದು. ಉದ್ಯೋಗ ಮಾಹಿತಿ ಹಾಗೂ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಮಾಹಿತಿಯನ್ನು ಒದಗಿಸುತ್ತದೆ ಇಲ್ಲಿ ಯಾವುದೇ ರೀತಿಯ ಹಣವನ್ನು ಕಟ್ಟುವ ಅವಶ್ಯಕತೆ ಇರುವುದಿಲ್ಲ.
4. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಮತ್ತು ಖಾಸಗಿ ಉದ್ಯೋಗ ಮಾಹಿತಿಯನ್ನು ಬರವಣಿಗೆಯ ಮೂಲಕ ಜನರೊಂದಿಗೆ ಹಂಚಿಕೊಳ್ಳುವ ಅಂತರ್ಜಾಲವಾಗಿದೆ. ಇಲ್ಲಿ ಏನಾದರೂ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ನೀವು ನಮಗೆ ಮಾಹಿತಿಯನ್ನು ನೀಡಿ. ನಾವು ಮಾಡುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ನೀವು ಸಹಾಯವನ್ನು ಮಾಡುತ್ತೀರಿ.
5. ಯಾವುದೇ ಮಾಹಿತಿಯನ್ನು ನೀವು ಓದಿ ಆ ಮಾಹಿತಿಯನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಿ ಏಕೆಂದರೆ ಉದ್ಯೋಗ ಮಾಹಿತಿಯು ಪ್ರತಿಯೊಬ್ಬರಿಗೂ ಸಹಾಯವಾಗುವಂತ ಮಾಹಿತಿಯಾಗಿದ್ದು ನೀವು ಬೇರೆಯವರಿಗೆ ಮಾಡುವ ಸಹಾಯವಾಗುತ್ತದೆ.