ಭಾರತೀಯ ನೌಕಾಪಡೆ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 4455 AA & SSR ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 10ನೇ ತರಗತಿ ಪಾಸ್ ಆಗಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನ ಸಲ್ಲಿಸಬಹುದು. ಕೇಂದ್ರ ಸರಕಾರಿ ಉದ್ಯೋಗ ಬಯಸುವ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Indian navy Vacancy notification 2023
ನೇಮಕಾತಿ ಇಲಾಖೆ ಹೆಸರು : ಭಾರತೀಯ ನೌಕಾಪಡೆ ಇಲಾಖೆ
ಹುದ್ದೆಗಳ ಹೆಸರು : ಅಗ್ನಿವೀರ್ ಹುದ್ದೆಗಳು ( AA & SSR )
ಒಟ್ಟು ಹುದ್ದೆಗಳ ಸಂಖ್ಯೆ : ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಒಟ್ಟು 4,455 ಹುದ್ದೆಗಳು ಖಾಲಿ ಇದ್ದು ಇವುಗಳಲ್ಲಿ ಅಗ್ನಿವೀರ್ ( MR ) 300 ಹುದ್ದೆಗಳು, ಅಗ್ನಿವೀರ್ ( SSR ) 4155 ಹುದ್ದೆಗಳು ಖಾಲಿ ಇವೆ.
Indian navy Recruitment 2023 eligibility details
ಶೈಕ್ಷಣಿಕ ವಿದ್ಯಾರ್ಹತೆ :
ಅಗ್ನಿವೀರ್ ( MR ) ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಅಗ್ನಿವೀರ್ ( SSR ) ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗಣಿತ ಮತ್ತು ಭೌತಶಾಸ್ತ್ರ ವಿಷಯಗಳೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು ಮತ್ತು ರಸಾಯನಶಾಸ್ತ್ರ, ಬಯೋಲಜಿ, ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಯಾವುದಾದರೂ ಒಂದನ್ನು ಓದಿರಬೇಕು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ದೇಹದಾಡ್ಯತೆ :
• ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ 157cm ಎತ್ತರ
• ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ 152 cm ಎತ್ತರ
( ಸೂಚನೆ ಹುದ್ದೆಗಳಿಗೆ ಕೇವಲ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ )
ವಯಸ್ಸಿನ ಮಿತಿ : ಭಾರತೀಯ ನೌಕಾಪಡೆ ಇಲಾಖೆಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು 01 ನವಂಬರ್ 2002 ರಿಂದ 30 ಏಪ್ರಿಲ್ 2006 ನಡುವೆ ಜನಿಸಬೇಕು.
ನೇಮಕಾತಿ ವಿಧಾನ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಶಾರ್ಟ್ ಲಿಸ್ಟ್ ತಯಾರಿಸಿ ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
Step to apply to Indian navy AA & SSR Posts 2023
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Apply Link : Click
Notification Link : Click
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 29 ಮೇ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 19 ಜೂನ್ 2023
ಮುಖ್ಯ ಪದಗಳು : ಭಾರತೀಯ ನೌಕಾಪಡೆ ಇಲಾಖೆ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಹಾಗೂ ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ.