ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಕಲಬುರಗಿ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಜವಾನ ಹಾಗೂ ಆದೇಶ ಜಾರಿಕಾರರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕಲಬುರಗಿ-ಕರ್ನಾಟಕ ಸರ್ಕಾರಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ವಿವರಣೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Kalburgi district court Vacancy notification 2023
ನೇಮಕಾತಿ ಇಲಾಖೆ ಹೆಸರು :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಕಲಬುರಗಿ
ಹುದ್ದೆಗಳ ಹೆಸರು :
1. ಶೀಘ್ರ ಲಿಪಿಕಾರರು ಗ್ರೇಡ್ 3
2. ಬೆರಳಚ್ಚುಗಾರರು
3. ಬೆರಳಚ್ಚು ನಕಲುಗಾರರು
4. ಆದೇಶ ಜಾರಿಕಾರರು
5. ಜವಾನ
ಒಟ್ಟು ಹುದ್ದೆಗಳ ಸಂಖ್ಯೆ :
ಶೀಘ್ರಲಿಪಿಕಾರರು ಗ್ರೇಡ್ 3 ಹುದ್ದೆಗಳ ಸಂಖ್ಯೆ 08 ಹುದ್ದೆಗಳು ಖಾಲಿ ಇವೆ. ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 27,650 ಯಿಂದ 52,650/-ವೇತನ ಇರುತ್ತದೆ.
ಬೆರಳಚ್ಚುಗಾರರು ಒಟ್ಟು ಹುದ್ದೆಗಳ ಸಂಖ್ಯ09 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21,400-42,000/-ವೇತನ ನಿಗದಿಪಡಿಸಿದೆ.
ಬೆರಳಚ್ಚು ನಕಲುಗಾರರು ಒಟ್ಟು ಹುದ್ದೆಗಳ ಸಂಖ್ಯೆ ಒಂದು ಹುದ್ದೆಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ 21,400-42000/-ವೇತನ ನೀಡಲಾಗುತ್ತದೆ.
ಆದೇಶ ಜಾರಿಕಾರರು ಕೊಟ್ಟು ಹುದ್ದೆಗಳ ಸಂಖ್ಯೆ 13 ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 19950 ಯಿಂದ 37,900 ವೇತನ ನಿಗದಿಪಡಿಸಿದೆ.
ಜವಾನ ಒಟ್ಟು ಹುದ್ದೆಗಳ ಸಂಖ್ಯೆ 29 ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 17000-28950/- ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ:
ಶೀಘ್ರಲಿಪಿಕಾರರು ಗ್ರೇಡ್ 3 ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸೀನಿಯರ ಗ್ರೇಡ) ಮತ್ತು ಬೆರಳಚ್ಚು ಹಿರಿಯ ದರ್ಜೆ (ಸೀನಿಯರ ಗ್ರೇಡ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯಾಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಬೆರಳಚ್ಚುಗಾರರು – ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸೀನಿಯರ ಗ್ರೇಡ) ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯಾಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಬೆರಳಚ್ಚು ನಕಲುಗಾರರು – ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಕಿರಿಯ ದರ್ಜೆ (ಜೂನಿಯರ್ ಗ್ರೇಡ) ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯಾಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಆದೇಶ ಜಾರಿಕಾರರು – ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಲಘು ವಾಹನಚಾಲನಾ ಪರವಾನಿಗೆ ಪತ್ರ (driving license) ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
• ಜವಾನ – ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಲಘು ವಾಹನಚಾಲನಾ ಪರವಾನಿಗೆ ಪತ್ರ (driving license) ಐಚ್ಛಿಕವಾಗಿರುತ್ತದೆ (optional).
ವಯೋಮಿತಿ ವಿವರಣೆ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಲಬುರ್ಗಿ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಕನಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ಉಯೋಮಿತಿಯಲ್ಲಿ ಸಡಿಲಿಕ್ಕೆ ಸಹ ನೀಡಲಾಗಿದೆ.
ವಯೋಮಿತಿ ಸಡಿಲಿಕ್ಕೆ ವಿವರಣೆ :
ಎಸ್ ಸಿ ಎಸ್ ಟಿ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ
ಪ್ರವರ್ಗ 2a 2b3a3b ಅಭ್ಯರ್ಥಿಗಳಿಗೆ 38 ವರ್ಷ ನಿಗದಿಪಡಿಸಿದೆ.
ಆಯ್ಕೆ ವಿಧಾನ :
• ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
• ಆದೇಶ ಜಾರಿಕಾರ, ಜವಾನ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ ವಿಧಾನ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಅನುಸಾರ ಜಿಲ್ಲಾ ನ್ಯಾಯಾಲಯ ಕಲಬುರ್ಗಿ ಈ ಇಲಾಖೆಯ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
- ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
- ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು. - ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
- ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.ಅರ್ಜಿ ಶುಲ್ಕದ ವಿವರಣೆ :
• ಸಾಮಾನ್ಯ ವರ್ಗ ಪ್ರವರ್ಗ 2a 2b3a3b ವರ್ಗದ ಅಭ್ಯರ್ಥಿಗಳಿಗೆ 200 ರೂಪಾಯಿ.
• ಎಸ್ ಸಿ ಎಸ್ ಟಿ ಪ್ರವರ್ಗ 1 ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 24-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 25-03-2023 - Apply Link :
-
Karnataka news hunter ಅಂತರ್ಜಾಲದ ಉಪಯೋಗಗಳು
1. Karnataka news hunter ಅಂತರ್ಜಾಲವು ಕರ್ನಾಟಕ ಹಾಗೂ ಭಾರತದ ಯಾವುದೇ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನ ನೀಡುತ್ತದೆ.
2. ಈ ಅಂತರ್ಜಾಲವು ಕರ್ನಾಟಕ ಹಾಗೂ ಕನ್ನಡಿಗರಿಗಾಗಿ ಸಿದ್ಧವಾದ ಅಂತರ್ಜಾಲವಾಗಿದೆ. ಇಲ್ಲಿ ಯಾವುದೇ ರೀತಿಯ ಸುಳ್ಳು ಅಥವಾ ಮೋಸದ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ.
3. Karnataka news hunter ಅಂತರ್ಜಾಲ ಇದು ಒಂದು ನಂಬಿಕೆಯ ಅಂತರ್ಜಾಲವಾಗಿದ್ದು. ಉದ್ಯೋಗ ಮಾಹಿತಿ ಹಾಗೂ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಮಾಹಿತಿಯನ್ನು ಒದಗಿಸುತ್ತದೆ ಇಲ್ಲಿ ಯಾವುದೇ ರೀತಿಯ ಹಣವನ್ನು ಕಟ್ಟುವ ಅವಶ್ಯಕತೆ ಇರುವುದಿಲ್ಲ.
4. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಮತ್ತು ಖಾಸಗಿ ಉದ್ಯೋಗ ಮಾಹಿತಿಯನ್ನು ಬರವಣಿಗೆಯ ಮೂಲಕ ಜನರೊಂದಿಗೆ ಹಂಚಿಕೊಳ್ಳುವ ಅಂತರ್ಜಾಲವಾಗಿದೆ. ಇಲ್ಲಿ ಏನಾದರೂ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ನೀವು ನಮಗೆ ಮಾಹಿತಿಯನ್ನು ನೀಡಿ. ನಾವು ಮಾಡುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ನೀವು ಸಹಾಯವನ್ನು ಮಾಡುತ್ತೀರಿ.
5. ಯಾವುದೇ ಮಾಹಿತಿಯನ್ನು ನೀವು ಓದಿ ಆ ಮಾಹಿತಿಯನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಿ ಏಕೆಂದರೆ ಉದ್ಯೋಗ ಮಾಹಿತಿಯು ಪ್ರತಿಯೊಬ್ಬರಿಗೂ ಸಹಾಯವಾಗುವಂತ ಮಾಹಿತಿಯಾಗಿದ್ದು ನೀವು ಬೇರೆಯವರಿಗೆ ಮಾಡುವ ಸಹಾಯವಾಗುತ್ತದೆ.