ಕರ್ನಾಟಕ ಅಂಗನವಾಡಿ ಕಾರ್ಯಕರ್ತೆ/ಅಂಗನವಾಡಿ ಸಹಾಯಕಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 341 ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಇದರ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಈ ಕೆಳಗಿನಂತಿವೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ಹುದ್ದೆಗಳ ವಿವರ :
ನೇಮಕಾತಿ ಇಲಾಖೆಯ ಹೆಸರು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ.
ಒಟ್ಟು ಹುದ್ದೆಗಳ ಸಂಖ್ಯೆ :
ಇಲಾಖೆಯಲ್ಲಿ ಒಟ್ಟು 341 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿ ಮೂರು ಜಿಲ್ಲೆಯ ನಡೆಯುತ್ತಿದೆ
ಉಡುಪಿ ಜಿಲ್ಲೆಯಲ್ಲಿ 25 ಹುದ್ದೆಗಳು
ಬೆಳಗಾವಿಯಲ್ಲಿ 282 ಹುದ್ದೆಗಳು ಯಾದಗಿರಿ ಜಿಲ್ಲೆ 34 ಹುದ್ದೆಗಳು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ಹುದ್ದೆಗಳ ವಿವರ 34 ಹುದ್ದೆಗಳು
ಅಂಗನವಾಡಿ ಹುದ್ದೆಗಳಿಗೆ ಸಂಬಂಧಪಟ್ಟ ವಿದ್ಯಾರ್ಹತೆ
ಶೈಕ್ಷಣಿಕ ವಿದ್ಯಾರ್ಹತೆ :
ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ನಾಲ್ಕನೇ ತರಗತಿಯಿಂದ ಗರಿಷ್ಠ ಒಂಬತ್ತನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವೇತನ ಶ್ರೇಣಿ :
ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದಂತಹ ಮಹಿಳಾ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮ ಅನುಸಾರ ಕನಿಷ್ಠ 5000 ದಿಂದ 10000 ರೂ ವೇತನ ಇರುತ್ತದೆ.
ವಯಸ್ಸಿನ ಮಿತಿ :
ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯಸ್ಸಿನಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿಯ ಶುಲ್ಕ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಾದ ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
ಉಡುಪಿ ಜಿಲ್ಲೆ :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 26-07-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 20-08-2022
ಬೆಳಗಾವಿ ಜಿಲ್ಲೆ :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 04-08-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 05-09-2022
ಯಾದಗಿರಿ ಜಿಲ್ಲೆ :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 04-08-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 28-08-2022
ಅರ್ಜಿಗೆ ಬೇಕಾದ ದಾಖಲಾತಿಗಳು :
ಅಭ್ಯರ್ಥಿಯ ಆಧಾರ್ ಕಾರ್ಡ್
ಪಾಸ್ ಪೋರ್ಟ್ ಸೈಜ್ ಫೋಟೋ
ಅಭ್ಯರ್ಥಿಯ ಅಂಕಪಟ್ಟಿಗಳು
ಅಭ್ಯರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಅರ್ಜಿಯೊಂದಿಗೆ ಲಗತಿಸಬೇಕಾದ ದಾಖಲಾತಿಗಳು :
ಮಾಹಿತಿಯನ್ನ ಭರ್ತಿ ಮಾಡಿದ ಅರ್ಜಿ ನಮೂನೆ
ಜನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಶಾಲಾ ದಾಖಲಾತಿ ಪ್ರಮಾಣ ಪತ್ರ
ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ.
ಸೂಚನೆ :
ದಯವಿಟ್ಟು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವುದಕ್ಕಿಂತ ಮುಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ ಹಾಗೂ ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಈ ಮಾಹಿತಿಯನ್ನು ಆದಷ್ಟು ಶೇರ್ ಮಾಡಿ.