Karnataka Gram Panchayat Recruitment: Apply for 1681 Panchayat Secretary, PDO, SDA vacancies

Karnataka gram Panchayat recruitment 2023. ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 1681 PDO, SDA, ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಹಾಗೂ ಪದವಿ ಪಡೆದಂತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ದಯವಿಟ್ಟು Karnataka news hunter ಈ ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ.

Important information related to Karnataka Gram Panchayat post 2023

1. ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಕಾರ್ಯದರ್ಶಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಯು ಮುಂದಿನ 3 ಅಥವಾ 4 ತಿಂಗಳುಗಳಲ್ಲಿ ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಕೈಗೊಳ್ಳಲಾಗುತ್ತದೆ ಎಂದು ಸ್ವತಃ ಕರ್ನಾಟಕದ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
2. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಹುದ್ದೆಗಳಿಗೆ ಇಲಾಖೆಯು ಶೀಘ್ರದಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುತ್ತದೆ.

ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಗ್ರಾಮ ಪಂಚಾಯತ್

ಒಟ್ಟು ಹುದ್ದೆಗಳ ಸಂಖ್ಯೆ : 1681 ಹುದ್ದೆಗಳು

ಉದ್ಯೋಗದ ಸ್ಥಳ : ಕರ್ನಾಟಕ

ಹುದ್ದೆಗಳ ಹೆಸರು : ಪಂಚಾಯತ್ ಕಾರ್ಯದರ್ಶಿ, PDO, SDA

ವೇತನ ಶ್ರೇಣಿ : ಕರ್ನಾಟಕ ಗ್ರಾಮ ಪಂಚಾಯತಿ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

Karnataka gram Panchayat vacancy details Kannada

ಹುದ್ದೆಗಳ ಹೆಸರು :
1. ಪಂಚಾಯತ್ ಅಭಿವೃದ್ಧಿ ಅಧಿಕಾರಿ, 727 ಹುದ್ದೆಗಳು
2. ಪಂಚಾಯತ್ ಕಾರ್ಯದರ್ಶಿ ಗ್ರೇಡ್-1 , 487 ಹುದ್ದೆಗಳು
3. ಪಂಚಾಯತ್ ಕಾರ್ಯದರ್ಶಿ ಗ್ರೇಡ್-2, 343 ಹುದ್ದೆಗಳು
4. ದ್ವಿತೀಯ ದರ್ಜೆ ಸಹಾಯಕರು 124 ಹುದ್ದೆಗಳು

Join Now

Karnataka gram Panchayat recruitment eligibility details in Kannada

ಶೈಕ್ಷಣಿಕ ವಿದ್ಯಾರ್ಹತೆ : ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಮನೆತ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಹಾಗೂ ಪದವಿಯನ್ನು ಪಡೆದಿರಬೇಕು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ ವಿವರಣೆ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ಪೂರೈಸಿಲೇಬೇಕು ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.

ವಯೋಮಿತಿ ಸಡಿಲಿಕೆ ವಿವರಣೆ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
• ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
• ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಿದೆ.

ಅರ್ಜಿ ಶುಲ್ಕ : ಕರ್ನಾಟಕ ಗ್ರಾಮ ಪಂಚಾಯತ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗೆ ನೇಮಕಾತಿ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : ಶೀಘ್ರದಲ್ಲಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲಿ

Apply Link : Click

Old Notification : Click

PDO Vacancy Notification : Click

New Notification :Click

ಮುಖ್ಯ ಪದಗಳು : ಕರ್ನಾಟಕ ಗ್ರಾಮ ಪಂಚಾಯಿತಿ ಇಲಾಖೆಯ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.

Spread the love