ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗ 2022 ಕರ್ನಾಟಕ ಹೈಕೋರ್ಟ್ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಪ್ಯೂನ್, ವಾಚ್ ಮ್ಯಾನ್, ಪೇಪರ್ ಮತ್ತು ಪ್ಯೂನ್, ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಬೆಂಗಳೂರಿನಲ್ಲಿ ಖಾಲಿ ಇದ್ದು ಬೆಂಗಳೂರಿನಲ್ಲಿ ಉದ್ಯೋಗ ಅವಕಾಶವನ್ನು ಬಯಸುತ್ತಿರುವ ಅಭ್ಯರ್ಥಿಗಳು ಇದರ ಲಾಭವನ್ನು ಪಡೆಯಬಹುದಾಗಿದೆ ಆಸಕ್ತರು ಆದಷ್ಟು ಬೇಗ ಇಲಾಖೆ ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಉದ್ಯೋಗದ ಸಂಬಂಧಿಸಿದ ಇನ್ನೂ ಹೆಚ್ಚಿನ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೆಂಗಳೂರು ಹುದ್ದೆಗಳ ವಿವರಣೆ :
ನೇಮಕಾತಿ ಇಲಾಖೆಯ ಹೆಸರು:
ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಬೆಂಗಳೂರು
ಹುದ್ದೆಗಳ ಹೆಸರು :
• ಶೀಘ್ರ ಲಿಪಿಕಾರರು ಗ್ರೇಡ್ 3
• ಬೆರಳಚ್ಚುಗಾರು
• ಆದೇಶ ಜಾರಿಕಾರರು
• ಜವಾನ
ಒಟ್ಟು ಹುದ್ದೆಗಳ ಸಂಖ್ಯೆ :
ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಇಲಾಖೆಯಲ್ಲಿ ಒಟ್ಟು 150 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ :
• ಶೀಘ್ರ ಲಿಪಿಗಾರರು ಗ್ರೇಡ್ 3 ಈ ಹುದ್ದೆಗೆ ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮೋ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಪಡೆದಿರಬೇಕು. ಇದರ ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶ್ರೀಘಲಿಪಿಯಲ್ಲಿ ಉತ್ತಿರ್ಣತೆ ಹೊಂದಿರಬೇಕು.
• ಬೆರಳಚ್ಚು ಗಾರರು: ಈ ಹುದ್ದೆಗಳಿಗೆ ಈ ಹುದ್ದೆಗೆ ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮೋ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಪಡೆದಿರಬೇಕು. ಇದರ ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶ್ರೀಘಲಿಪಿಯಲ್ಲಿ ಉತ್ತಿರ್ಣತೆ ಹೊಂದಿರಬೇಕು.
• ಆದೇಶ ಜಾರಿಕಾರ ಈ ಹುದ್ದೆಗೆ ಅಭ್ಯರ್ಥಿಯು ಎಸ್ ಎಸ್ ಎಲ್ ಸಿ ಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ವಾಹನ ಚಾಲನೆ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
• ಜವಾನ ಈ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.
ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿ :
ವೇತನ ಶ್ರೇಣಿ :
• ಶೀಘ್ರ ಲಿಪಿ ಗಾರರು ಗ್ರೇಡ್ 3 ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 27,650 ಯಿಂದ 52,660 ನಿಗದಿಪಡಿಸಲಾಗಿದೆ.
• ಬೆರಳಚ್ಚುಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,400 ರಿಂದ 47,000 ಇವತ್ತಿನ ಇರುತ್ತದೆ
• ಆದೇಶ ಜಾರಿಕಾರ ಹುದ್ದೆಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ ಇಲಾಖೆಯು ಮಾಸಿಕವಾಗಿ 1950 ಯಿಂದ 37,900 ವೇತನ ನಿಗದಿಪಡಿಸಲಾಗಿದೆ.
• ಜವಾನ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17 ಸಾವಿರದಿಂದ 28,950 ವೇತನ ನಿಗದಿಪಡಿಸಲಾಗಿದೆ.
ವಯಸ್ಸಿನ ಮಿತಿ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ ಸಡಿಲಿಕೆ ಇರುತ್ತದೆ.
ಹುದ್ದೆಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ವಿವರಣೆ :
ಅರ್ಜಿಯ ಶುಲ್ಕ :
ಸಾಮಾನ್ಯ ಅಥವಾ ಓಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 200
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ರೂ.100
ಈ ಅರ್ಜಿಯ ಶುಲ್ಕವನ್ನು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಚಲನ್ ಮೂಲಕ ಸಲ್ಲಿಸಬಹುದು.
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ನೇರ ನೇಮಕಾತಿ ಹಾಗೂ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ..
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು
ಉದ್ಯೋಗದ ಸ್ಥಳ :
ಈ ಉದ್ಯೋಗವು ಬೆಂಗಳೂರಿನಲ್ಲಿ ಖಾಲಿ ಇರುತ್ತದೆ
ಉದ್ಯೋಗದ ವಿಧ :
ಸರ್ಕಾರಿ ಉದ್ಯೋಗ ( ಖಾಯಂ ಉದ್ಯೋಗ ವಾಗಿರುತ್ತದೆ )
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 17 ಅಗಸ್ಟ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 17 ಸೆಪ್ಟಂಬರ್ 2022.
ಸೂಚನೆ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಹಾಗೂ ಫೇಸ್ಬುಕ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ಅಭ್ಯರ್ಥಿಯಾಗಿ ಶೇರ್ ಮಾಡಿ.