ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 60,544 Postman ಮತ್ತು Mailguard ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೇವಲ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ /ವಯೋಮಿತಿ ವಿವರಣೆ / ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ಭಾರತೀಯ ಅಂಚೆ ಇಲಾಖೆ ನೇಮಕಾತಿ
ಹುದ್ದೆಗಳ ಹೆಸರು :
• Postman
• Mailguard
ಖಾಲಿ ಇರುವ ಹುದ್ದೆಗಳ ಸಂಖ್ಯೆ ವಿವರಣೆ :
ಭಾರತೀಯ ಅಂಚೆ ಇಲಾಖೆಯು ಭಾರತಾದ್ಯಂತ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಒಟ್ಟು 60,544 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ Postman 59,099 ಹುದ್ದೆಗಳು ಹಾಗೂ 1445 Mailguard ಹುದ್ದೆಗಳಾಗಿವೆ. ನಮ್ಮ ಕರ್ನಾಟಕದಲ್ಲಿ ಒಟ್ಟು 3887 Postman ಹುದ್ದೆಗಳು ಖಾಲಿ ಹಾಗೂ Mailguard 90 ಹುದ್ದೆಗಳು ಖಾಲಿ ಇವೆ.
ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :
ವಿದ್ಯಾರ್ಹತೆ : Postman :
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಪಡೆದಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Mailguard :
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವೇತನ ಶ್ರೇಣಿ ವಿವರಣೆ :
Postman :
ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳು ಅನುಸಾರ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,700 ರಿಂದ 69,100/-ವೇತನ ನಿಗದಿಪಡಿಸಲಾಗಿದೆ.
Mailguard :
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯು ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ ಮಾಸಿಕವಾಗಿ 21,700 ರಿಂದ 69,100/-ವೇತನ ನಿಗದಿಪಡಿಸಲಾಗಿದೆ.
ಉದ್ಯೋಗದ ವಿಧ :
ಈ ಹುದ್ದೆಗಳು ಕೇಂದ್ರ ಸರಕಾರದ ಉದ್ಯೋಗಗಳು ಹಾಗೂ ಖಾಯಂ ಉದ್ಯೋಗಗಳಾಗಿರುತ್ತವೆ. ಆದಷ್ಟು ಬೇಗ ಆಸಕ್ತಿ ಇರುವ ಅರ್ಜಿಯನ್ನು ಸಲ್ಲಿಸಬಹುದು.
ಉದ್ಯೋಗದ ಸ್ಥಳ :
ಈ ಹುದ್ದೆಗಳು ಸುಮಾರು 23 ರಾಜ್ಯಗಳಲ್ಲಿ ಖಾಲಿ ಇವೆ ಆಯಾ ರಾಜ್ಯಗಳಿಗೆ ಅನುಸಾರವಾಗಿ ಮೀಸಲಾತಿ ಸಹ ನೀಡಲಾಗಿದೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ :
ವಯೋಮಿತಿ ವಿವರಣೆ :
Postman ಮತ್ತು Mailguard ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 32 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕ್ಕೆ ಸಹಾಯ ಇರುತ್ತದೆ. ವಯೋಮಿತಿ ಸಡಿಲಿಕೆಯ ವಿವರಣೆ ಪಡೆಯಲು ಈಗಲೇ ಅಧಿಸೂಚನೆಯನ್ನು ಗಮನಿಸಿ.
ಆಯ್ಕೆ ವಿಧಾನದ ವಿವರಣೆ :
Postman ಮತ್ತು Mailguard ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಶೈಕ್ಷಣಿಕ ವಿಧ್ಯಾರ್ಥಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
• ಮೊದಲನೆಯದಾಗಿ ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
• ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
• ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
• ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ ಮತ್ತು ಹೆಚ್ಚಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಕ್ಯಾಪ್ಚರ್ ಮಾಡಿ.
ಅರ್ಜಿ ಶುಲ್ಕ :
ಹುದ್ದೆಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 15.11.2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 14.12.2022
Notification Link : Click
Apply Link : Click
ಸೂಚನೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಭಾರತೀಯ ಅಂಚೆ ಇಲಾಖೆ ಅಧಿಕೃತ ವೆಬ್ಸೈಟಿಗೆ ಭೇಟಿ ನೀಡಿ ಅಲ್ಲಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.