Kodagu district Anganwadi jobs 2023 – Apply Online For 55 Anganwadi Teacher Post

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ 10ನೇ ತರಗತಿ ಅಥವಾ 7ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ, ಆಯ್ಕೆ ವಿಧಾನ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಗಳ ಹೆಸರು :
1. ಅಂಗನವಾಡಿ ಸಹಾಯಕಿ 38 ಹುದ್ದೆಗಳು
2. ಅಂಗನವಾಡಿ ಕಾರ್ಯಕರ್ತೆಯರು 17 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 55 ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:
ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ 7th/ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನವಿಟ್ಟು ಓದಿ.

ವಯೋಮಿತಿ ವಿವರಣೆ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ವರ್ಷದಿಂದ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.

ವಯೋಮಿತಿ ಸಡಿಲಿಕೆ ವಿವರಣೆ :
ಓಬಿಸಿ ವರ್ಗದ ಅಭ್ಯರ್ಥಿಗಳಿಗೆ 03 ವರ್ಷಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ನೀಡಿದೆ. ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ :
ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

Join Now

ನೇಮಕಾತಿ ವಿಧಾನ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿಯಮಗಳ ಅನುಸಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗದ ಸ್ಥಳ : ಕರ್ನಾಟಕ ಕೊಡಗು ಜಿಲ್ಲೆ

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 03-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24-03-2023

Apply Link : Click

Notification Link : Click

ಮುಖ್ಯ ಪದಗಳು : ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಇರುತ್ತದೆ. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ನಾವು ನೀಡಿರುವ ಅಥವಾ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿ.

1 thought on “Kodagu district Anganwadi jobs 2023 – Apply Online For 55 Anganwadi Teacher Post”

Comments are closed.