KSRTC CO OPERATIVE SOCIETY Recruitment 2023 – Apply 39 SDA Posts

KSRTC Credit Co-Op Society Recruitment 2023 – Apply for 39 SDA, Office Assistant Posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತ ( ಕೆ ಎಸ್ ಆರ್ ಟಿ ಸಿ ) ಇಲಾಖೆಯ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು / ಪ್ರಥಮ ದರ್ಜೆ ಸಹಾಯಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿದ್ದರೆ ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಇನ್ನು ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತ.

KSRTC Credit Co-Op Society Vacancy Notification 2023

ಹುದ್ದೆಗಳ ಹೆಸರು :
ಕಚೇರಿ ಸಹಾಯಕರು
ಲೆಕ್ಕಪತ್ರ ಮೇಲ್ವಿಚಾರಕ
ಸಿಬ್ಬಂದಿ ಮೇಲ್ವಿಚಾರಕರು
ಪ್ರಥಮ ದರ್ಜೆ ಸಹಾಯಕರು
ದ್ವಿತೀಯ ದರ್ಜೆ ಸಹಾಯಕರು

ಒಟ್ಟು ಹುದ್ದೆಗಳ ಸಂಖ್ಯೆ :
ಕಚೇರಿ ಸಹಾಯಕರು : 11 ಹುದ್ದೆಗಳು
ಲೆಕ್ಕಪತ್ರ ಮೇಲ್ವಿಚಾರಕ : 07 ಹುದ್ದೆಗಳು
ಸಿಬ್ಬಂದಿ ಮೇಲ್ವಿಚಾರಕರು : 02 ಹುದ್ದೆಗಳು
ಪ್ರಥಮ ದರ್ಜೆ ಸಹಾಯಕರು : 07 ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕರು : 18 ಹುದ್ದೆಗಳು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತದಲ್ಲಿ ಒಟ್ಟು 39 ಹುದ್ದೆಗಳ ನೇಮಕಾತಿಗಾಗಿ ಇಲಾಖೆ ಅರ್ಜಿ ಆಹ್ವಾನಿಸಲಾಗಿದೆ.

KSRTC Credit Co-Op Society Recruitment 2023 Eligibility Details

ಶೈಕ್ಷಣಿಕ ವಿದ್ಯಾರ್ಹತೆ :
ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಿರಬೇಕು.

ಪ್ರಥಮ ದರ್ಜೆ ಸಹಾಯಕರು – ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಬೇಕು.

ಕಚೇರಿ ಸಹಾಯಕರು – ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರೆ ಅರ್ಜಿ ಸಲ್ಲಿಸಬಹುದು.

Join Now

ಸಿಬ್ಬಂದಿ ಮೇಲ್ಚಾವಕರು – ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಬೇಕು.

ಲೆಕ್ಕ ಪತ್ರ ಮೇಲ್ವಿಚಾರಕ – ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ವಾಣಿಜ್ಯ ಪದವಿ ಮತ್ತು ಕಂಪ್ಯೂಟರ್ ಹಾಗೂ ಕನ್ನಡ ಜ್ಞಾನ ಹೊಂದಿರಬೇಕು.

ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ

ವಯಸ್ಸಿನ ಮಿತಿ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಗರಿಷ್ಠ 35 ವರ್ಷ ಹೊಂದಿರಬೇಕು. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.

ಅರ್ಜಿ ಶುಲ್ಕ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಶುಲ್ಕವನ್ನು 500 ಪಾವತಿ ಮಾಡಬೇಕು.

Steps to Apply for KSRTC Credit Co-Op Society SDA, Office Assistant Jobs 2023

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 1 : ಅರ್ಹ ಅಭ್ಯರ್ಥಿಗಳು ಎಲ್ಲಾ ಮೂಲ ಹಾಗೂ ಝೇರಾಕ್ಸ್ ದಾಖಲೆಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ನೋಂದಾಯಿಸಿ, ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.

ಹಂತ 2 : ಅರ್ಜಿ ನಮೂನೆಯಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.

ಹಂತ 3 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ಅರ್ಹ ಅಭ್ಯರ್ಥಿಗಳು ಸಂಘವು ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ಪಡೆದು,
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಸಹಕಾರ ಸಂಘ ನಿಯಮಿತ ಪ್ರಧಾನ ಕಛೇರಿ, ಶಾಂತಿನಗರ, ಕೆ.ಹೆಚ್ ರಸ್ತೆ ಬೆಂಗಳೂರು -27

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 28-ಜನವರಿ-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 07-ಫೆಬ್ರುವರಿ-2023

Notification Link : Click

ಮುಖ್ಯ ಸೂಚನೆ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಅರ್ಥೈಸಿಕೊಂಡು ತದನಂತರವೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

Spread the love