ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೃಹತ್ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 4, 600ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗಾಗಿ ಇಲಾಖೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಡ್ರೈವಿಂಗ್ ಸ್ಟಾಪ್, ಪ್ಯೂನ್, ಮತ್ತು ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ, ವೇತನ ಶ್ರೇಣಿ,ಆಯ್ಕೆ ಪ್ರಕ್ರಿಯೆ ಹೀಗೆ ಹಲವಾರು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೇಮಕಾತಿ ಕುರಿತಾದ ವಿವರಣೆ.
ನೇಮಕಾತಿ ಇಲಾಖೆಯ ಹೆಸರು :
ಕಲ್ಯಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( KSRTC )
ಹುದ್ದೆಗಳ ಹೆಸರು :
• ಡ್ರೈವಿಂಗ್ ಸ್ಟಾಪ್ : 3745 ಹುದ್ದೆಗಳು
• ಪ್ಯೂನ್ : 200 ಹುದ್ದೆಗಳು
• ಟೆಕ್ನಿಕಲ್ ಅಸಿಸ್ಟೆಂಟ್ : 726 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಒಟ್ಟು 4,600 ಹುದ್ದೆಗಳ ನೇಮಕಾತಿ ನಡೆಯುತ್ತದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ
ವಿದ್ಯಾರ್ಹತೆ :
• ಚಾಲಕ ಸಿಬ್ಬಂದಿ ಈ ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಹಾಗೂ ಇದರ ಜೊತೆಗೆ ಅಭ್ಯರ್ಥಿಯು ಚಾಲನೆ ಪರವಾನಿಗೆಯನ್ನು ಹೊಂದಿರಬೇಕು.
• ಪ್ಯೂನ್ ಹುದ್ದೆಗೆ ಅಭ್ಯರ್ಥಿಯು ಕರ್ನಾಟಕ ಶಿಕ್ಷಣ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
• ಟೆಕ್ನಿಕಲ್ ಅಸಿಸ್ಟೆಂಟ್ ಈ ಹುದ್ದೆಗೆ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದೆ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಐಟಿಐ ಡಿಪ್ಲೋಮೋ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಇಲಾಖೆಯು 10,000 ದಿಂದ 35,000 ರೂಪಾಯಿ ವೇತನ ನಿಗದಿಪಡಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹುದ್ದೆಗಳಿಗೆ ನಿಗದಿಪಡಿಸಿದ ವಯಸ್ಸಿನ ಮಿತಿ :
ವಯಸ್ಸಿನ ಮಿತಿ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ವರ್ಷ ಮೀರಬಾರದು. ಹುದ್ದೆಗಳಿಗೆ ಅನುಗುಣವಾಗಿ ವಯಸ್ಸಿನಲ್ಲಿ ಸಲ್ಲಿಕೆ ಇರುತ್ತದೆ.
ವಯಸ್ಸಿನಲ್ಲಿ ಸಡಿಲಿಕ್ಕೆ ವಿವರಣೆ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕೃತ ಅಧಿಸೂಚನೆಯ ಪ್ರಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ
OBC 2A 2b 3A 3B ಅಭ್ಯರ್ಥಿಗಳಿಗೆ 03 ವರ್ಷ
ಅರ್ಜಿಯ ಶುಲ್ಕ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಆಸಕ್ತಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಕೆಗೆ ಬೇಕಾದ ಪ್ರಮುಖ ದಾಖಲಾತಿಗಳು :
• ಅಭ್ಯರ್ಥಿಯ ಇತ್ತೀಚಿನ ಭಾವಚಿತ್ರ
• ಅಭ್ಯರ್ಥಿಯ ಹೆಬ್ಬಟಿನ ಸಹಿ
• ಜನ್ಮ ದಿನಾಂಕ ಇರುವ ಪುರಾವೆಗಳು ಅಥವಾ ಎಸ್ ಎಸ್ ಎಲ್ ಸಿ ಅಂಕಪಟ್ಟಿ
• ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ
ಆಯ್ಕೆ ವಿಧಾನ :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನ ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : ಶೀಘ್ರದಲ್ಲಿ ಸೂಚನೆ ನೀಡಿಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲಿ ಮಾಹಿತಿ ನೀಡಲಾಗುತ್ತದೆ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ಮತ್ತು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.
ಸೂಚನೆ :
ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಇಲಾಖೆಯ ಅಧಿಕೃತ ಅಧಿಸೂಚನೆಯನ್ನ ಗಮನಿಸಿ ಸ್ಪಷ್ಟವಾಗಿ ಓದಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.