ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಕುರಿತಾಗಿ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಿದೆ. ಈ ಇಲಾಖೆಯ ಅಧಿಸೂಚನೆಯ ಪ್ರಕಾರ ಇಲಾಖೆಯಲ್ಲಿ ಒಟ್ಟು 155 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಅಥವಾ ದೈಹಿಕ ಪರೀಕ್ಷೆ ಇಲ್ಲದೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ / ಉದ್ಯೋಗದ ಸ್ಥಳ / ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಬೆಂಗಳೂರು ಜಿಲ್ಲಾ ಸಂಪನ್ಮೂಲ ಇಲಾಖೆಯಲ್ಲಿ ಒಟ್ಟು 155 ಹುದ್ದೆಗಳು ಖಾಲಿ ಇವೆ ಕರ್ನಾಟಕದಲ್ಲಿ ಅಥವಾ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವ ಅಭ್ಯರ್ಥಿಗಳಿಗೆ ಈ ಮಾಹಿತಿಯು ಉಪಯುಕ್ತವಾಗಿರುತ್ತದೆ.
ಜಲ ಸಂಪನ್ಮೂಲ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆಯ ಹೆಸರು :
ಜನ ಸಂಪನ್ಮೂಲ ಇಲಾಖೆ ನೇಮಕಾತಿ 2022
ಹುದ್ದೆಗಳ ಹೆಸರು :
ಬ್ಯಾಕ್ ಲ್ಯಾಗ್ ದ್ವಿತೀಯ ದರ್ಜೆ ಸಹಾಯಕ / ಎಸ್ ಡಿ ಎ ( ಗ್ರೂಪ್ ಸಿ ಹುದ್ದೆಗಳು )
ಒಟ್ಟು ಹುದ್ದೆಗಳ ಸಂಖ್ಯೆ :
ಜಲ ಸಂಪನ್ಮೂಲ ಇಲಾಖೆಯಲ್ಲಿ ಒಟ್ಟು 155 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಲ ಸಂಪನ್ಮೂಲ ಇಲಾಖೆ ನೇಮಕಾತಿ 2022 ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆಯ ವಿವರಣೆ :
ವಿದ್ಯಾರ್ಹತೆ :
ಬ್ಯಾಕ್ ಲ್ಯಾಗ್ ದ್ವಿತೀಯ ದರ್ಜೆ ಸಹಾಯಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಹತ್ತನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮೋ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕು.
ವೇತನ ಶ್ರೇಣಿ :
ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಲ ಸಂಪನ್ಮೂಲ ಇಲಾಖೆ ನಿಯಮಗಳ ಅನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 21,400 ರಿಂದ 42 ವೇತನ ಇರುತ್ತದೆ.
ವಯಸ್ಸಿನ ಮಿತಿ :
ಜಲ ಸಂಪನ್ಮೂಲ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 40 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಕೂಡ ನೀಡಲಾಗಿದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಭ್ಯರ್ಥಿಯು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ.
ಜಲ ಸಂಪನ್ಮೂಲ ಇಲಾಖೆ ನೇಮಕಾತಿ 2022 ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ :
ನೇಮಕಾತಿ ವಿಧಾನ :
ಜಲ ಸಂಪನ್ಮೂಲ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದಂತ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ :
ಬ್ಯಾಕ್ ಲಾಗ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನ ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಜಲ ಸಂಪನ್ಮೂಲ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 26 ಸೆಪ್ಟಂಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 25 ಅಕ್ಟೋಬರ್ 2022
ಆಯ್ಕೆಗೆ ಪರಿಗಣಿಸಲ್ಪಡುವ ಅರ್ಹ ಅಭ್ಯರ್ಥಿಗಳು ಕಡ್ಡಾಯವಾಗಿ ಹಾಜರುಪಡಿಸಬೇಕಾದ ಪ್ರಮುಖ ದಾಖಲಾತಿಗಳ ವಿವರಣೆ :
• ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ಲಾಗ್ ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಥಿಯಾದ ಪದವಿ ಪೂರ್ವ ಶಿಕ್ಷಣ ಅಥವಾ ತತ್ಸಮಾನ ವಿದ್ಯಾರ್ಹತೆಯ ಅಂಕಪಟ್ಟಿಗಳು
• ಈ ಮೇಲೆ ನಮೂಯಿಸಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರಗಳ ನಮೂನೆಗಳನ್ನು ಅಧಿಸೂಚನೆಯಲ್ಲಿ ಕೊನೆಯಲ್ಲಿ ನೀಡಲಾಗುತ್ತದೆ.
• ಅಭ್ಯರ್ಥಿಗಳು ಜಾತಿ ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿ ತರಬೇಕು.
ಈ ಹುದ್ದೆಗಳಿಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲಾಖೆಯ ದೂರವಾಣಿ ಸಂಖ್ಯೆ ಈ ಕೆಳಗಿನ ನೀಡಲಾಗಿದೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಏನಾದರೂ ತೊಂದರೆಗಳು ಉಂಟಾದಲ್ಲಿ ಇಲಾಖೆಯ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಅವಕಾಶ ನೀಡಲಾಗಿದೆ :
ಇಲಾಖೆಯ ದೂರವಾಣಿ ಸಂಖ್ಯೆ :
080 22871174 / 080 22871094
ಹುದ್ದೆಗಳಿಗೆ ಸಂಬಂಧಿಸಿದ ವಿಶೇಷ ಸೂಚನೆಗಳು :
• ಅಭ್ಯರ್ಥಿಗಳು ಜಲ ಸಂಪನ್ಮೂಲ ಇಲಾಖೆಯ ಅಂತರ್ಜಾಲದ ಮುಖಾಂತರವೇ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು ಇತರೆ ಯಾವುದೇ ಮಾದರಿಯ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ
• ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ತದನಂತರವೇ ಅವರು ಹುದ್ದೆಗಳಿಗೆ ಅರ್ಜಿಯನ್ನ ಅನ್ವಯಿಸಬೇಕು.
• ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ ಅಥವಾ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳು ಕೂಡ ತಿರಸ್ಕಾರವಾಗುತ್ತದೆ
• ನಿಯಮಗಳ ಅನುಸಾರ ಆನ್ಲೈನ್ ಅರ್ಜಿ ಸಲ್ಲಿಸುವಾಗ ಈ ಅಧಿಶೂಚನೆಯಲ್ಲಿ ನಮೂದಿಸಿರುವ ದಾಖಲೆಗಳನ್ನು ಮಾತ್ರವೇ ಪರಿಶೀಲನೆ ಮಾಡಲಾಗುವುದರಿಂದ ವಯೋಮಿತಿ ವಿದ್ಯಾರ್ಹತೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿ ಸಲ್ಲಿಸಿದ ಪ್ರಮಾಣ ಪತ್ರಗಳನ್ನು ಕೊನೆಯ ದಿನಾಂಕದಂದು ಚಾಲ್ತಿರುವಂತೆ ಅಧಿಸೂಚನೆಯ ಅನುಬಂಧ ಸೂಚಿಸುವ ನಮ್ಮನೆಗಳಲ್ಲಿ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಸ್ಪಷ್ಟವಾದ ವಿವರಗಳನ್ನು ನಮೂದಿಸಿ ತಕ್ಕದ್ದು.
• ಅರ್ಜಿ ಸಲ್ಲಿಕೆಯಲ್ಲಿ ನಿರ್ಧಿಷ್ಟವಾಗಿ ಕೋರದಿದ್ದಲ್ಲಿ ತದನಂತರದಲ್ಲಿ ಮನವಿ ಮುಖಾಂತರ ಯಾವುದೇ ಮೀಸಲಾತಿಯನ್ನು ಕೋರಿದಲ್ಲಿ ಅಥವಾ ದಾಖಲೆಯನ್ನು ಸಲ್ಲಿಸಿದಲ್ಲಿ ತಿರಸ್ಕಾರವಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಅರ್ಹತ ಷರತ್ತುಗಳು :
• ಭಾರತೀಯ ನಾಗರಿಕನಾಗಿರಬೇಕು
• ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿಯು ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಮತಿಯನ್ನು ಪಡೆಯದೆ ನೇಮಕಾತಿಗೆ ಅರ್ಹರಾಗಿರುವುದಿಲ್ಲ.
• ಅಭ್ಯರ್ಥಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ಅಧ್ಯಕ್ಷ ನಿರ್ವಹಣೆಗೆ ಆತಂಕ ಉಂಟು ಮಾಡುವ ಸಂದರ್ಭ ಇರುವ ಯಾವುದೇ ದೈಹಿಕ ನ್ಯೂನಯತೆಯಿಂದ ಮುಕ್ತರಾಗಿರಬೇಕು
• ದೈಹಿಕವಾಗಿ ಅನಹರಾಗಿದ್ದ ಎಂಬುದು ವೈದ್ಯಕೀಯ ಮಂಡಳಿಯು ವರದಿ ಮೇಲೆ ಅನರ್ಹ ಎಂಬುದಾಗಿ ಎಂಬುದಾಗಿ ಅಭ್ಯರ್ಥಿಯನ್ನು ತಿರಸ್ಕರಿಸುವ ಪೂರ್ಣ ವಿಭಜನೆಯನ್ನು ರಾಜ್ಯ ಸರ್ಕಾರ ಅಥವಾ ನೇಮಕಾತಿ ಪ್ರಾಧಿಕಾರವು ಹೊಂದಿರುತ್ತದೆ.
ಈ ಹುದ್ದೆಗೆ ಇರುವ ಪಿಂಚಣಿ ಸೌಲಭ್ಯ :
ಸಿವಿಲ್ ಸೇವೆ ಐಡಿಯಾ ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ ಲಾಕ್ ಹುದ್ದೆಗಳಿಗೆ ಸರ್ಕಾರದ ಆದೇಶದ ಅನ್ವಯ ನೂತನ ಪಿಂಚಣಿ ಯೋಜನೆಗೆ ಒಳಪಡುತ್ತಾರೆ.
ಸೂಚನೆ :
ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಬ್ಯಾಕ್ ಲಾಕ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥ ಮಾಡಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.
( ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇಲಾಖೆ ಅಧಿಕೃತ ಅಧಿಸೂಚನೆ ಹಾಗೂ ಇಲಾಖೆಯ ಅಧಿಸೂಚನೆ ಅಲ್ಲಿಂದ ಕೂಡ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು)
ಮುಖ್ಯ ಪದಗಳು :
ನಾವು ನೀಡುವ ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ಶೇರ್ ಮಾಡಿ.