WCD Chamarajanagar Recruitment 2024 Apply Online for 207 Anganwadi Posts

WCD Chamarajanagar 2024 Recruitment Notification Details

ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ 10ನೇ ತರಗತಿ ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿ ಸಲ್ಲಿಸಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ 207 ಅಂಗನವಾಡಿ ಶಿಕ್ಷಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಪ್ರತಿಯೊಬ್ಬರು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡ ಬಳಿಕ ಅರ್ಜಿಯನ್ನು ಸಲ್ಲಿಸಿ.

Overview for WCD Chamarajanagar Recruitment 2024

ನೇಮಕಾತಿ ಇಲಾಖೆ ಹೆಸರು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ

ಹುದ್ದೆಗಳ ಹೆಸರು :
• ಅಂಗನವಾಡಿ ಕಾರ್ಯಕರ್ತೆಯರು
• ಅಂಗನವಾಡಿ ಸಹಾಯಕಿಯರು

ಒಟ್ಟು ಹುದ್ದೆಗಳ ಸಂಖ್ಯೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 207 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 6000 ರಿಂದ 10,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for WCD Chamarajanagar Anganwadi Posts 2024

ಶೈಕ್ಷಣಿಕ ಅರ್ಹತೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿಯಲ್ಲಿ ಪಾಸ್ ಆಗಿದ್ದರೆ ಅರ್ಜಿ ಸಲ್ಲಿಸಬಹುದು.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

How to Apply Online for WCD Chamarajanagar Anganwadi Recruitment 2024

ಆಯ್ಕೆ ವಿಧಾನ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಪಡೆದಂತ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for WCD Chamarajanagar Anganwadi Recruitment 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 11 November 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 27 November 2024

ಉದ್ಯೋಗದ ಸ್ಥಳ: ಕರ್ನಾಟಕ

Job Alert: Karnataka Lokayukta recruitment 2024 Apply Online For 30 Clerk cum typist Posts

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment